Honnavar accident: ಹೊನ್ನಾವರದಲ್ಲಿ ಸಾರಿಗೆ ಬಸ್-ಕಾರು ಡಿಕ್ಕಿಯಾಗಿ ಇಬ್ಬರ ದುರ್ಮರಣ, 10 ಮಂದಿಗೆ ಗಾಯ
Honnavar accident: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಉಪ್ಪೊಣಿಯಲ್ಲಿ ದುರ್ಘಟನೆ ನಡೆದಿದೆ. ಭಟ್ಕಳದಿಂದ ಶಿರಸಿ ಮಾರ್ಗವಾಗಿ ತೆರಳುತ್ತಿದ್ದ ಬಸ್, ಬೆಂಗಳೂರಿನಿಂದ ಮುರುಡೇಶ್ವರಕ್ಕೆ ಮದುವೆಗೆ ತೆರಳುತ್ತಿದ್ದ ಬೆಂಗಳೂರು ಮೂಲದ ಸ್ಕಾರ್ಪಿಯೋ ಕಾರಿನ ನಡುವೆ ಅಪಘಾತ ಸಂಭವಿಸಿದೆ.


ಕಾರವಾರ/ಶಿರಸಿ: ಕೆಎಸ್‌ಆರ್‌ಟಿಸಿ ಬಸ್ ಮತ್ತು ಸ್ಕಾರ್ಪಿಯೋ ಕಾರು ಡಿಕ್ಕಿಯಾಗಿ ಇಬ್ಬರು ಮೃತಪಟ್ಟು, ಹತ್ತು ಜನರಿಗೆ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಉಪ್ಪೊಣಿಯಲ್ಲಿ ನಡೆದಿದೆ. ಭಟ್ಕಳದಿಂದ ಶಿರಸಿ ಮಾರ್ಗವಾಗಿ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್, ಬೆಂಗಳೂರಿನಿಂದ ಮುರುಡೇಶ್ವರಕ್ಕೆ ಮದುವೆಗೆ ತೆರಳುತ್ತಿದ್ದ ಬೆಂಗಳೂರು ಮೂಲದ ಸ್ಕಾರ್ಪಿಯೋ ಕಾರಿನ ನಡುವೆ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ ಸ್ಕಾರ್ಪಿಯೋದಲ್ಲಿದ್ದ ಆರು ಜನರ ಪೈಕಿ ಇಬ್ಬರು ಮೃತಪಟ್ಟಿದ್ದು, ಉಳಿದವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನೆಯಲ್ಲಿ ಬಸ್ ಚಾಲಕನಿಗೂ ಗಂಭೀರ ಗಾಯಗಳಾಗಿದ್ದು, ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಸ್ಕಾರ್ಪಿಯೋ ಕಾರು ನುಜ್ಜುಗುಜ್ಜಾಗಿದ್ದು, ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹುಬ್ಬಳ್ಳಿ ಬಾಲಕಿ ಹತ್ಯೆ ಕೇಸ್ ಸಹ ಸಿಐಡಿ ತನಿಖೆಗೆ
ಬೆಂಗಳೂರು : ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿಯ ಹತ್ಯೆ ಮಾಡಿದ (Hubballi girl murder case) ಪ್ರಕರಣವನ್ನು ಸಿಐಡಿ ತನಿಖೆಗೆ (CID enquiry) ನೀಡಿ ರಾಜ್ಯ ಸರ್ಕಾರ (Karnataka government) ಆದೇಶ ಹೊರಡಿಸಿದೆ. ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿಯನ್ನು ಬಿಹಾರ ಮೂಲದ ರಿತೇಶ್ ಎಂಬಾತ ಹೊತ್ತೊಯ್ದು ಅತ್ಯಾಚಾರಗೈದು ಹತ್ಯೆಗೈದಿದ್ದ. ನಂತರ ಈತನನ್ನು ಪೊಲೀಸರು ಎನ್‌ಕೌಂಟರ್ (Police encounter) ಮಾಡಿದ್ದರು. ಈ ಎನ್‌ಕೌಂಟರ್ ಪ್ರಕರಣವನ್ನು ರಾಜ್ಯ ಸರ್ಕಾರವು ಸಿಐಡಿ ತನಿಖೆಗೆ ವಹಿಸಿ ಆದೇಶಿಸಿತ್ತು. ಇದೀಗ ಬಾಲಕಿ ಹತ್ಯೆ ಪ್ರಕರಣವನ್ನೂ ಸಿಐಡಿ ತನಿಖೆಗೆ ವರ್ಗಾಯಿಸಿ ಆದೇಶ ಹೊರಡಿಸಿದೆ.
ಹುಬ್ಬಳ್ಳಿಯ 5 ವರ್ಷದ ಬಾಲಕಿ ಅತ್ಯಾಚಾರ- ಹತ್ಯೆಯಿಂದ ಇಡೀ ರಾಜ್ಯವೇ ಬೆಚ್ಚಿ ಬಿದ್ದಿತ್ತು. ವಲಸಿಗ ಕಾರ್ಮಿಕರಿಂದ ರಾಜ್ಯದಲ್ಲಿ ಅಪರಾಧಗಳು ಹೆಚ್ಚುತ್ತಿವೆ ಎಂಂಬ ಅಂಶದತ್ತ ಗಮನ ಸೆಳೆದಿತ್ತು. ಈ ಪ್ರಕರಣದ ಆರೋಪಿ ಬಿಹಾರ ಮೂಲದ ರಿತೇಶ್ ಬಂಧನಕ್ಕೆ ತೆರಳಿದ್ದ ವೇಳೆಯಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದ. ಈ ವೇಳೆಯಲ್ಲಿ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿ ರಿತೇಶ್‌ಗೆ ಗುಂಡೇಟು ನೀಡಿದ್ದರು. ಪಿಎಸ್ಐ ಅನ್ನಪೂರ್ಣ ಅವರು ಫೈರಿಂಗ್ ಮಾಡಿದ ಗುಂಡು, ಆರೋಪಿ ರಿತೇಶ್ ಎದೆಗೆ ಬಿದ್ದಿತ್ತು. ಆರೋಪಿ ರಿತೇಶ್ ಸಾವನ್ನಪ್ಪಿದ್ದ.
ಈ ಸುದ್ದಿಯನ್ನೂ ಓದಿ | Pahalgam terror attack: ಪಹಲ್ಗಾಮ್ ಉಗ್ರರ ದಾಳಿ; ಸಹಾಯಕ್ಕಾಗಿ ಈ ನಂಬರ್‌ಗೆ ಕರೆ ಮಾಡಿ
ಇದು ಪೊಲೀಸರಿಂದ ನಡೆದ ಕೊಲೆ ಎಂದು ಮಾನವ ಹಕ್ಕು ಸಂಘಟನೆಗಳು ತಗಾದೆ ತೆಗೆದಿದ್ದವಲ್ಲದೆ ನ್ಯಾಯಾಂಗ ಪ್ರಕರಣ ದಾಖಲಿಸಿದ್ದವು. ನಂತರ ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿ ಆದೇಶಿಸಿತ್ತು.