ಭಟ್ಕಳದಲ್ಲಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಯುವಕರ ಸಾವು
ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ವೆಂಕಟಾಪುರದ ಬಳಿ ಭೀಕರ ಅಪಘಾತ ನಡೆದಿದೆ. ಚಾಲಕನ ನಿಯತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿದ್ದರಿಂದ ದುರಂತ ಸಂಭವಿಸಿದೆ. ಈ ಸಂಬಂಧ ಭಟ್ಕಳ ಶಹರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತ ಬಿಲಾಲ್ ಮತ್ತು ಆಯಾನ್. -
ಕಾರವಾರ: ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಭಟ್ಕಳದ (Bhatkal Accident) ವೆಂಕಟಾಪುರದ ಬಳಿ ನಡೆದಿದೆ. ಭಟ್ಕಳದ ಆಜಾದ್ ನಗರ ನಿವಾಸಿ ಮೊಹಮ್ಮದ್ ಅಶ್ರಫ್ ರುಕ್ನುದ್ದೀನ್ ಶಿಪಾಯಿಯವರ ಪುತ್ರ ಬಿಲಾಲ್ (15) ಹಾಗೂ ಆಯಾನ್ (20) ಮೃತರು.
ಅಪಘಾತದ ವೇಳೆ ಬಿಲಾಲ್ ಸ್ಥಳದಲ್ಲೇ ಮೃತಪಟ್ಟಿದ್ದು, ಚಾಲನೆ ಮಾಡುತ್ತಿದ್ದ ಆಯಾನ್ ಗಾಯಗೊಂಡಿದ್ದ. ಆತನನ್ನು ಉಡುಪಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ. ಶಿರಾಲಿಯಿಂದ ಭಟ್ಕಳಕ್ಕೆ ಕಾರಿನಲ್ಲಿ ಬರುತ್ತಿದ್ದಾಗ ಈ ಅಪಘಾತ ನಡೆದಿದೆ. ಈ ಸಂಬಂಧ ಭಟ್ಕಳ ಶಹರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
4 ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ
ಬೆಂಗಳೂರು: ಪತಿಯೊಂದಿಗೆ ಜಗಳ ಮಾಡಿಕೊಂಡ ಪತ್ನಿಯೊಬ್ಬಳು ತನ್ನ 4 ವರ್ಷ ಮಗಳ ಜತೆಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಸಂಜಯನಗರದಲ್ಲಿ ನಡೆದಿದೆ. ಮನೆ ಕೆಲಸ ಮಾಡುತ್ತಿದ್ದ ವೇಳೆ ಪತಿಯೊಂದಿಗೆ ಮಹಿಳೆ ಫೋನ್‌ನಲ್ಲಿ ಜಗಳ ಮಾಡಿಕೊಂಡಿದ್ದಾಳೆ. ನಂತರ ಮಹಿಳೆ ನಾಲ್ಕು ವರ್ಷದ ಮಗಳ ಜತೆಗೆ ಬೆಂಕಿ ಹಚ್ಚಿಕೊಂಡಿದ್ದಾಳೆ. ತಾಯಿ ಮತ್ತು ಮಗಳು ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಸೀತಾಲಕ್ಷ್ಮಿ ಎಂಬ ಈ ಮಹಿಳೆ, ಮಗಳ ಜತೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಗುರುವಾರ ಸಂಜೆ 7 ಗಂಟೆ ಸುಮಾರಿಗೆ ನಗರದ ಸಂಜಯನಗರದಲ್ಲಿ ಘಟನೆ ನಡೆದಿದೆ ಎಂದು ಹೇಳಿದ್ದಾರೆ. ನೋವು ತಡೆಯಲಾರದೆ ಮಗಳು ಸಹಾಯಕ್ಕಾಗಿ ಕಿರುಚಿದ್ದಾಳೆ. ಈ ವೇಳೆ ಅಕ್ಕ ಪಕ್ಕದಲ್ಲಿದ್ದ ಮನೆಯವರು ಧಾವಿಸಿ, ಬಾಗಿಲು ಒಡೆದು ನೋಡಿದಾಗ, ತಾಯಿ ಮತ್ತು ಮಗಳು ಇಬ್ಬರಿಗೆ ತೀವ್ರ ಸುಟ್ಟ ಗಾಯಗಳಾಗಿದ್ದವು. ಇಬ್ಬರನ್ನೂ ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿ ಆಗದೇ ಇಬ್ಬರು ಸಾವನ್ನಪ್ಪಿದ್ದಾರೆ.
ಯಾದಗಿರಿಯಲ್ಲಿ ಮಾಜಿ ಸಚಿವ ರಾಜು ಗೌಡ ಕಾರು ಅಪಘಾತ; ಅಪಾಯದಿಂದ ಪಾರು
ಈ ದಂಪತಿ ಸುಮಾರು ಏಳು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಾಗಿದ್ದರು. ಗೋವಿಂದ್ ಸೆಕ್ಯುರಿಟಿ ಗಾರ್ಡ್ ಮತ್ತು ದಿನಗೂಲಿ ಕಾರ್ಮಿಕ ಸೇರಿದಂತೆ ವಿವಿಧ ಕೆಲಸಗಳನ್ನು ಮಾಡುತ್ತಿದ್ದರು. ಕೆಲವು ತಿಂಗಳ ಹಿಂದೆ, ಅವರು ತಮ್ಮ ಆರು ವರ್ಷದ ಮಗನೊಂದಿಗೆ ನೇಪಾಳಕ್ಕೆ ಮರಳಿದ್ದರು. ಈ ವೇಳೆ ಸೀತಾಲಕ್ಷ್ಮಿ ತನ್ನ ಗಂಡ ಗೋವಿಂದ್ ಕರೆ ಮಾಡಿ ಮತ್ತೆ ಯಾವಾಗ ಬೆಂಗಳೂರಿಗೆ ಬರುತ್ತೀರಾ? ಎಂದು ಪ್ರತಿದಿನ ಕೇಳುತ್ತಿದ್ದರು. ಇದೇ ವಿಷಯವಾಗಿ ಇಬ್ಬರ ನಡುವೆ ಪದೇ ಪದೇ ಜಗಳ ಉಂಟಾಗುತ್ತಿತ್ತು. ಇದರಿಂದ ಮನನೊಂದು ಈ ನಿರ್ಧಾರವನ್ನು ತೆಗೆದುಕೊಂಡಿರಬಹುದು ಎಂದು ಶಂಕಿಸಲಾಗಿದೆ. ಇದೀಗ ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.