Tractor Accident: ಟ್ರ್ಯಾಕ್ಟರ್ ಅಡಿಯಲ್ಲಿ ಸಿಲುಕಿ 5 ವರ್ಷದ ಬಾಲಕ ದಾರುಣ ಸಾವು
ಟ್ರ್ಯಾಕ್ಟರ್ ನಡಿ ಸಿಲುಕಿ ಬಾಲಕ ಮೃತಪಟ್ಟಿರುವ ಘಟನೆ ಕೂಡ್ಲಿಗಿ ತಾಲೂಕಿನ ಗುಡೇಕೊಟೆಯಲ್ಲಿ ನಡೆದಿದೆ. ಮೃತಪಟ್ಟಿರುವ ಬಾಲಕನನ್ನು 5 ವರ್ಷದ ನವದೀಪ್ ಎಂದು ಗುರುತಿಸಲಾಗಿದೆ. ಚಿತ್ರದುರ್ಗದ ಮೊಳಕಾಲ್ಮೂರು ತಾಲೂಕಿನ ಕೆಳಗಳಹಟ್ಟಿಯ ಓಬಣ್ಣ ಹಾಗೂ ದೀಪಾ ದಂಪತಿ ಮಗ ಮೃತಪಟ್ಟಿದ್ದಾನೆ


ವಿಜಯನಗರ: ಟ್ರ್ಯಾಕ್ಟರ್ ನಡಿ ಸಿಲುಕಿ ಬಾಲಕ ಮೃತಪಟ್ಟಿರುವ ಘಟನೆ ಕೂಡ್ಲಿಗಿ ತಾಲೂಕಿನ ಗುಡೇಕೊಟೆಯಲ್ಲಿ ನಡೆದಿದೆ. ಮೃತಪಟ್ಟಿರುವ ಬಾಲಕನನ್ನು 5 ವರ್ಷದ ನವದೀಪ್ ಎಂದು ಗುರುತಿಸಲಾಗಿದೆ. (Tractor Accident) ಚಿತ್ರದುರ್ಗದ ಮೊಳಕಾಲ್ಮೂರು ತಾಲೂಕಿನ ಕೆಳಗಳಹಟ್ಟಿಯ ಓಬಣ್ಣ ಹಾಗೂ ದೀಪಾ ದಂಪತಿ ಮಗ ಮೃತಪಟ್ಟಿದ್ದಾನೆ .ತಾಯಿ ದೀಪಾ ತವರು ಮನೆ ಗುಡೇಕೊಟೆಗೆ ಬಂದಿದ್ದಾಗ ಈ ಘಟನೆ ನಡೆದಿದೆ. ಮೃತ ಬಾಲಕ ಸಂಜೆ ತಾತಾ ಮಾರಣ್ಣ ಜತೆ ಹೊಲಕ್ಕೆ ಹೋಗಿದ್ದ. ಆಯತಪ್ಪಿ ರೂಟರ್ ಯಂತ್ರಕ್ಕೆ ಸಿಲುಕಿದ ಬಾಲಕನ ದೇಹ ತುಂಡಾಗಿದೆ.
ಘಟನಾ ಸ್ಥಳಕ್ಕೆ ಗುಡೇಕೊಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಸಂಬಂಧ ಗುಡೇಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕನ ತುಂಡಾದ ಮೃತದೇಹವನ್ನು ನೋಡಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.
ಪ್ರತ್ಯೇಕ ಘಟನೆಯಲ್ಲಿ ಥಣಿಸಂದ್ರ ಬಳಿ ಅತಿ ವೇಗವಾಗಿ ಬರುತ್ತಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಸದ ಲಾರಿ ಡಿಕ್ಕಿ ಹೊಡೆದ ಪರಿಣಾಮ 10 ವರ್ಷದ ಬಾಲಕ ಮೃತಪಟ್ಟಿದ್ದ. ಮೃತ ಬಾಲಕನನ್ನು ಇಮಾನ್ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಇಮಾನ್ ಮತ್ತು ಆತನ ತಂದೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ, ಮಧ್ಯಾಹ್ನ 12.30 ರ ಸುಮಾರಿಗೆ ಥಣಿಸಂದ್ರ ಬಳಿ ಅತಿ ವೇಗವಾಗಿ ಬರುತ್ತಿದ್ದ ಬಿಬಿಎಂಪಿ ಕಸದ ಲಾರಿ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಾಲಕ ಕೆಳಗೆ ಬಿದ್ದಿದ್ದಾನೆ. ಈ ವೇಳೆ ಟ್ರಕ್ ಆತನ ಮೇಲೆ ಹರಿದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಸುದ್ದಿಯನ್ನೂ ಓದಿ: Accident Case: ಅಪಘಾತದಲ್ಲಿ ಬಾಲಕನ ಸಾವಿಗೆ ಕಾರಣನಾದ ಬಿಬಿಎಂಪಿ ಲಾರಿ ಚಾಲಕ ಆಸ್ಪತ್ರೆಯಲ್ಲಿ ಸಾವು
ಬಾಲಕನನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಆ ವೇಳೆಗಾಗಲೇ ಆತ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಚಾಲಕನ ವೈದ್ಯಕೀಯ ಪರೀಕ್ಷೆಯಲ್ಲಿ ಘಟನೆ ನಡೆದ ಸಮಯದಲ್ಲಿ ಆತ ಮದ್ಯ ಸೇವಿಸಿರಲಿಲ್ಲ ಎಂದು ತಿಳಿದುಬಂದಿದೆ ಅಪಘಾತದ ನಂತರ, ವಾಹನದ ಚಾಲಕ ಪ್ರಜ್ಞೆ ಕಳೆದುಕೊಂಡಿದ್ದಾನೆ. ಅಪಘಾತ ಸ್ಥಳದಲ್ಲಿ ಜಮಾಯಿಸಿದ ಸಾರ್ವಜನಿಕರು, ಚಾಲಕನ ನಿರ್ಲಕ್ಷ್ಯವೇ ಬಾಲಕನ ಸಾವಿಗೆ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟ್ರಕ್ ಟೈರ್‌ಗೆ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.