Food Poison: ಮೊಟ್ಟೆ ಸೇವಿಸಿ ಅಂಗನವಾಡಿ ಮಕ್ಕಳು ಅಸ್ವಸ್ಥ: 8 ಮಕ್ಕಳಿದ್ದ ಕೇಂದ್ರದಲ್ಲಿ ಘಟನೆ
ಅಂಗನವಾಡಿಯಲ್ಲಿ ಊಟ ಮಾಡಿದ ಬಳಿಕ ಮಕ್ಕಳು ಅಸ್ವಸ್ಥಗೊಂಡ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಿವಾನಂದ ನಗರದಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಮೊಟ್ಟೆ ಸೇವಿಸಿದ ಬಳಿಕ ಮಕ್ಕಳಲ್ಲಿ ಹೊಟ್ಟೆನೋವು ಹಾಗೂ ವಾಂತಿ ಕಾಣಿಸಿಕೊಂಡಿದೆ. ಇದರಿಂದ ಮಕ್ಕಳಿಗೆ ಫುಡ್ ಪಾಯಿಸನ್(Food Poison) ಆಗಿರುವ ಶಂಕೆ ವ್ಯಕ್ತವಾಗಿದೆ.
-
Ashok Nayak
Nov 7, 2026 7:31 AM
ವಿಜಯಪುರ: ಅಂಗನವಾಡಿಯಲ್ಲಿ ಊಟ ಮಾಡಿದ ಬಳಿಕ ಮಕ್ಕಳು ಅಸ್ವಸ್ಥಗೊಂಡ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಶಿವಾನಂದ ನಗರದಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಮೊಟ್ಟೆ ಸೇವಿಸಿದ ಬಳಿಕ ಮಕ್ಕಳಲ್ಲಿ ಹೊಟ್ಟೆನೋವು ಹಾಗೂ ವಾಂತಿ ಕಾಣಿಸಿಕೊಂಡಿದೆ. ಇದರಿಂದ ಮಕ್ಕಳಿಗೆ ಫುಡ್ ಪಾಯಿಸನ್(Food Poison) ಆಗಿರುವ ಶಂಕೆ ವ್ಯಕ್ತವಾಗಿದೆ.
ಇದನ್ನೂ ಓದಿ: Food Poison: ಹಾವೇರಿ: ಹಾಸ್ಟೆಲ್ ಊಟ ಸೇವಿಸಿ ವಿದ್ಯಾರ್ಥಿನಿಯರು ಅಸ್ವಸ್ಥ
ಕೆಟ್ಟಿರುವ ಮೊಟ್ಟೆ ನೀಡಿರುವ ಆರೋಪ ಕೇಳಿ ಬಂದಿದ್ದು ಸಿಡಿಪಿಒ ಶಿಲ್ಪಾ ಹಿರೇಮಠ ವಿರುದ್ದ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಅಂಗನವಾಡಿ ಕೇಂದ್ರದಲ್ಲಿ ಒಟ್ಟು ಎಂಟು ಮಕ್ಕಳಿದ್ದು, ಊಟದ ಬಳಿಕ ಅಸ್ವಸ್ಥಗೊಂಡ ಮಕ್ಕಳನ್ನು ತಕ್ಷಣ ಬಸವನಬಾಗೇವಾಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಮಕ್ಕಳ ಆರೋಗ್ಯ ಸ್ಥಿತಿಯನ್ನು ಗಮನಿಸಿ, ಹೆಚ್ಚಿನ ಚಿಕಿತ್ಸೆಗಾಗಿ ತಾಲೂಕು ಆಸ್ಪತ್ರೆಯಿಂದ ವಿಜಯಪುರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.