ಲವ್ ಬ್ರೇಕಪ್ ಆಗಿದ್ದಕ್ಕೆ ಬಸ್‌ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಆತ್ಮಹತ್ಯೆ; ಬೆಂಕಿ ಹೊತ್ತಿಕೊಂಡು ಸಜೀವ ದಹನ!
ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಕನ್ನೊಳ್ಳಿ ಟೋಲ್‌ಗೇಟ್ ಬಳಿ ಘಟನೆ ನಡೆದಿದೆ. ಸಾರಿಗೆ ಬಸ್‌ಗೆ ಯುವಕ ರಾಯಲ್ ಎನ್‌ಫೀಲ್ಡ್ ಬೈಕ್ ಸಮೇತ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯಾದ ರಭಸಕ್ಕೆ ಬೈಕ್‌ಗೆ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಬೈಕ್ ಸವಾರ ಸಜೀವ ದಹನವಾಗಿದ್ದಾನೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಪ್ರಯಾಣಿಕರು ಬಸ್ಸಿನಿಂದ ಕೆಳಗಿಳಿದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮೃತ ಯುವಕ ಅಭಿಷೇಕ ಸೈಬಗೌಡ ನಾಗರಳ್ಳಿ. -
ವಿಜಯಪುರ: ಲವ್ ಬ್ರೇಕಪ್ ಆಗಿದ್ದಕ್ಕೆ ಬಸ್‌ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಆತ್ಮಹತ್ಯೆ ಮಾಡಿಕೊಂಡಿರುವುದು ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಕನ್ನೊಳ್ಳಿ ಟೋಲ್‌ಗೇಟ್ ಬಳಿ ನಡೆದಿದೆ. ಸಿಂದಗಿ ಪಟ್ಟಣದ ಅಲ್ಲಾಪುರ ಲೇಔಟ್‌ನ ಯವಕ ಅಭಿಷೇಕ ಸೈಬಗೌಡ ನಾಗರಳ್ಳಿ (19) ಮೃತ ಯುವಕ.
ಕನ್ನೊಳ್ಳಿ ಕ್ರಾಸ್ ಬಳಿ ಹೋಗುತ್ತಿದ್ದ ಸರ್ಕಾರಿ ಸಾರಿಗೆ ಬಸ್‌ಗೆ ಅಭಿಷೇಕ ತನ್ನ ರಾಯಲ್ ಎನ್‌ಫೀಲ್ಡ್ ಬೈಕ್ ಸಮೇತ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯಾದ ರಭಸಕ್ಕೆ ಬೈಕ್‌ಗೆ ಬೆಂಕಿ ಹೊತ್ತಿಕೊಂಡಿದೆ. ಬಳಿಕ ಬಸ್ಸಿಗೂ ಬೆಂಕಿ ಆವರಿಸಿಕೊಂಡಿದ್ದು, ಭಾಗಶಃ ಸುಟ್ಟು ಕರಕಲಾಗಿದೆ. ಪರಿಣಾಮ ಬೈಕ್ ಸವಾರ ಸಜೀವ ದಹನವಾಗಿದ್ದಾನೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಪ್ರಯಾಣಿಕರು ಬಸ್ಸಿನಿಂದ ಕೆಳಗಿಳಿದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸೂಸೈಡ್ ಮಾಡಿಕೊಳ್ಳಲು ತನ್ನ ರಾಯಲ್ ಎನ್‌ಫೀಲ್ಡ್ ಬೈಕ್‌ನಲ್ಲಿ ಬಂದು ಬಸ್‌ಗೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ. ಆತ್ಮಹತ್ಯೆಗೂ ಮುನ್ನ ಮೃತ ಅಭಿಷೇಕ ಇನ್‌ಸ್ಟಾಗ್ರಾಂನಲ್ಲಿ ಮಾಹಿತಿ ಹಂಚಿಕೊಂಡಿದ್ದಾನೆ. ಅದರಲ್ಲಿ ಇಂದು ಮಧ್ಯಾಹ್ನದ ಹೊತ್ತಿಗೆ ನಾನು ಆತ್ಮಹತ್ಯೆ ಮಾಡಿಕೊಂಡು ಸಾಯುತ್ತೇನೆ. ಅವಳು ನನಗೆ ಬೇಕು, ನನ್ನಿಂದ ಅವಳನ್ನು ದೂರು ಮಾಡಿದವರೆ ನನ್ನ ಸಾವಿಗೆ ಕಾರಣ ಎಂದು ಆರೋಪಿಸಿ ಮೂವರ ಹೆಸರನ್ನು ಉಲ್ಲೇಖಿಸಿದ್ದಾನೆ.
ಸದ್ಯ ಲವ್ ಬ್ರೇಕಪ್ ಹಿನ್ನೆಲೆ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಶಂಕಿಸಲಾಗಿದೆ. ಸ್ಥಳಕ್ಕೆ ಸಿಂದಗಿ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಮದುವೆ ಮಾಡಿಲ್ಲ ಎಂದು ತಾಯಿಯನ್ನೇ ಕೊಲ್ಲಲು ಯತ್ನಿಸಿದ ಪಾಪಿ ಮಗ!

ಹಾಸನ: 40 ವರ್ಷವಾದ್ರೂ ಮದುವೆ ಮಾಡಲಿಲ್ಲ ಎಂದು ಪಾಪಿ ಪುತ್ರನೊಬ್ಬ ತಾಯಿಯನ್ನೇ ಕೊಲೆ ಮಾಡಲು ಯತ್ನಿಸಿರುವ ಆಘಾತಕಾರಿ ಘಟನೆ (attempt to murder ) ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನಲ್ಲಿ ನಡೆದಿದೆ. ತಾಯಿ ಜತೆ ಜಗಳವಾಡಿ ಆಕೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೆ ಯತ್ನಿಸಿರುವ ಆರೋಪಿಯನ್ನು ಗ್ರಾಮಸ್ಥರು ಹಿಡಿದು, ಪೊಲೀಸರಿಗೆ ಒಪ್ಪಿಸಿದ್ದಾರೆ.
ಉಮಾಶಂಕರ್ (40) ತಾಯಿಯ ಕೊಲೆಗೆ ಯತ್ನಿಸಿದ ಆರೋಪಿ. ತಾಯಿ ಗಂಗಮ್ಮ ಗಾಯಾಳುವಾಗಿದ್ದು, ಸದ್ಯ ಸಾವು ಬದುಕಿನ ಮಧ್ಯ ಹೋರಾಡುತ್ತಿದ್ದಾರೆ.
ಏನಿದು ಘಟನೆ?
ಆರೋಪಿ ಉಮಾಶಂಕರ್ ಗಂಗಮ್ಮನ ಎರಡನೇ ಮಗ. ಮೊದಲ ಮಗ ಅಂತರ್ಜಾತಿ ವಿವಾಹವಾದ ಹಿನ್ನೆಲೆ ಕುಟುಂಬದಿಂದ ಪ್ರತ್ಯೇಕವಾಗಿದ್ದರು. ಮಗಳನ್ನು ಬೆಂಗಳೂರು ಮೂಲದ ವರನಿಗೆ ಕೊಟ್ಟು ಮದುವೆ ಮಾಡಿದ್ದರು. ಆದರೆ, ಎರಡನೇ ಮಗನಿಗೆ ಮದುವೆ ಮಾಡುವ ಪ್ರಯತ್ನದಲ್ಲಿದ್ದರು.
ಗಂಗಮ್ಮ ತನ್ನ ಮಗನಿಗೆ ಮದುವೆ ಮಾಡಲು ವಧುವನ್ನು ನೋಡುತ್ತಿದ್ದರು. ಆದರೆ, ಕಳೆದ ವರ್ಷ ಕುಂಭಮೇಳಕ್ಕೆ ಉಮಾಶಂಕರ್ ಹೋಗಿ ಬರುವಾಗ ಕಾರು ಅಪಘಾತದಲ್ಲಿ ಹೊಟ್ಟೆ ಮತ್ತು ತಲೆಗೆ ಬಲವಾದ ಪೆಟ್ಟು ಬಿದ್ದಿತ್ತು. ಹೀಗಾಗಿ, ಕಳೆದ 10 ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದ. ಕಳೆದ ಒಂದು ತಿಂಗಳಿನಿಂದ ಸರಿಯಾಗಿ ಔಷಧ ತೆಗೆದುಕೊಳ್ಳುತ್ತಿರಲಿಲ್ಲ. ಹಾಗಾಗಿ, ಆತನಿಗೆ ಸ್ವಲ್ಪ ಬುದ್ಧಿ ಭ್ರಮಣೆಯಾದಂತೆ ಕಾಣುತ್ತಿದ್ದ. ಅಲ್ಲದೇ, ನನಗೆ ಮದುವೆ ಮಾಡು ಎಂದು ತಾಯಿ ಮತ್ತು ಸಂಬಂಧಿಕರನ್ನು ಪೀಡಿಸುತ್ತಿದ್ದ ಎನ್ನಲಾಗಿದೆ. ಆದರೆ, ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ಆತನಿಗೆ ವಧುವನ್ನು ಕೊಡಲು ಯಾರೂ ಮುಂದಾಗದ ಹಿನ್ನೆಲೆಯಲ್ಲಿ ಮನೆಯಲ್ಲಿ ಇದೇ ವಿಚಾರಕ್ಕೆ ತಾಯಿ ಮತ್ತು ಮಗನ ನಡುವೆ ಗಲಾಟೆ ನಡೆದಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಮನೆಯಲ್ಲಿ ಕೆಲಸ ಮಾಡುತ್ತಿದ್ದ ತಾಯಿಯೊಂದಿಗೆ ಮದುವೆ ವಿಚಾರವಾಗಿ ಗಲಾಟೆ ನಡೆದಿದೆ. ಇದೇ ವೇಳೆ ಮಗ ಮತ್ತು ತಾಯಿಯ ನಡುವೆ ತಳ್ಳಾಟ ನೂಕಾಟ ನಡೆದಿದ್ದು, ವಯಸ್ಸಾದ ಅಮ್ಮನನ್ನು ಬಲವಾಗಿ ತಳ್ಳಿದ್ದರಿಂದ ತಾಯಿ ನೆಲಕ್ಕೆ ಬಿದ್ದಿದ್ದಾರೆ. ಈ ವೇಳೆ ಆರೋಪಿ ಕಲ್ಲನ್ನು ಎತ್ತಿ ತಾಯಿಯ ತಲೆ ಮೇಲೆ ಹಾಕಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೇ ವೇಳೆ ಗ್ರಾಮಸ್ಥರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.