Treason: ಕರ್ನಾಟಕದಲ್ಲಿ ಪಾಕ್ ಪ್ರೇಮಿ; ವಿಜಯಪುರದ ವಿದ್ಯಾರ್ಥಿನಿಯಿಂದ ಪಾಕ್ ಪರ ಪೋಸ್ಟ್, ದೂರು ದಾಖಲು
ಆಪರೇಷನ್ ಸಿಂದೂರದ ಮೂಲಕ ಪಾಕಿಸ್ತಾನಕ್ಕೆ ಭಾರತ ತಕ್ಕ ಪ್ರತ್ಯುತ್ತರ ನೀಡಿದೆ. ಕರ್ನಾಟಕದಲ್ಲೂ ಕೂಡ ಕೆಲ ಪಾಕ್ ಪ್ರೇಮಿಗಳು ಮತ್ತೆ ಬಾಲ ಬಿಚ್ಚುತ್ತಿದ್ದಾರೆ. ವಿಜಯಪುರ ಮೂಲದ ಮೆಡಿಕಲ್ ವಿದ್ಯಾರ್ಥಿನಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪಾಕ್ ಪರ ಪೋಸ್ಟ್ ಹಂಚಿಕೊಂಡಿರುವುದು ಕೆಂಗಣ್ಣಿಗೆ ಗುರಿಯಾಗಿದೆ. ಈ ಹಿನ್ನೆಲೆಯಲ್ಲಿ ಆಕೆಯ ವಿರುದ್ದ ದೇಶದ್ರೋಹದ ಅಡಿ ಪ್ರಕರಣ ದಾಖಲು ಮಾಡಲಾಗಿದೆ.


ವಿಜಯಪುರ: ಆಪರೇಷನ್ ಸಿಂದೂರದ ಮೂಲಕ ಪಾಕಿಸ್ತಾನಕ್ಕೆ ಭಾರತ ತಕ್ಕ ಪ್ರತ್ಯುತ್ತರ ನೀಡಿದೆ. ಕರ್ನಾಟಕದಲ್ಲೂ ಕೂಡ ಕೆಲ ಪಾಕ್ ಪ್ರೇಮಿಗಳು (Treason) ಮತ್ತೆ ಬಾಲ ಬಿಚ್ಚುತ್ತಿದ್ದಾರೆ. ವಿಜಯಪುರ ಮೂಲದ ಮೆಡಿಕಲ್ ವಿದ್ಯಾರ್ಥಿನಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪಾಕ್ ಪರ ಪೋಸ್ಟ್ ಹಂಚಿಕೊಂಡಿರುವುದು ಕೆಂಗಣ್ಣಿಗೆ ಗುರಿಯಾಗಿದೆ. ಈ ಹಿನ್ನೆಲೆಯಲ್ಲಿ ಆಕೆಯ ವಿರುದ್ದ ದೇಶದ್ರೋಹದ ಅಡಿ ಪ್ರಕರಣ ದಾಖಲು ಮಾಡಲಾಗಿದೆ. ಅಲ್ ಅಮೀನ್ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿ ಪಾಕಿಸ್ತಾನದ ಜನರ ಪರ ಹಾಗೂ ಅವರ ಸುರಕ್ಷತೆ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ದೇಶ ವಿರೋಧಿ ಪೋಸ್ಟ್ ಹಂಚಿಕೊಂಡಿದ್ದಾಳೆ. ಇದು ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.
ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭರತ ಆಪರೇಷನ್ ಸಿಂದೂರದ ಮೂಲಕ ಪಾಕಿಸ್ತಾನದಲ್ಲಿ ಅಡಗಿದ್ದ ಉಗ್ರರ ಬೇಟೆಯಾಡುತ್ತಿದೆ. ಸದ್ಯ ಎರಡೂ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಿದೆ. ಈ ಮಧ್ಯೆ ವಿಜಯಪುರದ ಅಲ್ ಅಮೀನ್ ಮೆಡಿಕಲ್ ಕಾಲೇಜಿನ ತಷಾವುದ್ದ ಫಾರೂಖಿ ಶೇಖ್ ಎಂಬ ವಿದ್ಯಾರ್ಥಿನಿ ಪಾಕಿಸ್ತಾನದ ಪರ ಪೋಸ್ಟ್ ಹರಿಬಿಟ್ಟಿದ್ದಾಳೆ.
ವಿದ್ಯಾರ್ಥಿನಿ ತಷಾವುದ್ದ ಫಾರೂಖಿ ಶೇಖ್ ‘@hoodyyyyyyy’ ಎಂಬ ಹೆಸರಿನ ಖಾತೆಯಲ್ಲಿ “ನನ್ನ ಪಾಕಿಸ್ತಾನಿ ಸ್ನೇಹಿತರಿಗೆ, ಐಒಜೆಕೆ, ಎಜೆಕೆ ಜನರು ಸರ್ಕಾರಿ ಮಿಲಿಟರಿ ಸ್ಥಳಗಳಿಗೆ ಹೋಗಬೇಡಿ. ಗಡಿಯಿಂದ 200 ಕಿಲೋ ಮೀಟರ್ ಹೋಗಬೇಡಿ. ಅಲ್ಲಾ ಪಾಕಿಸ್ತಾನ ಹಾಗೂ ನಮ್ಮೆಲ್ಲರನ್ನೂ ಭಾರತದಿಂದ ರಕ್ಷಿಸಲಿ ಅಲ್ಲಾ ಎಂದು ಆಕೆ ಹೇಳಿದ್ದಾಳೆ. ಅಷ್ಟೇ ಅಲ್ಲದೆ ವಾಟ್ಸಾಪ್ ಸ್ಟೇಟಸ್‌ನಲ್ಲೂ ಶೇರ್ ಮಾಡಿಕೊಂಡಿದ್ದಾಳೆ. ವಿದ್ಯಾರ್ಥಿನಿ ತಷಾವುದ್ದ ಫಾರೂಖಿ ಶೇಖ್ ಪೋಸ್ಟ್ ವೈರಲ್ ಬೆನ್ನಲ್ಲೇ ಆಕೆಯ ವಿರುದ್ಧ ಕಾನೂನು ಕ್ರಮಕ್ಕೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಈ ಸುದ್ದಿಯನ್ನೂ ಓದಿ: Operation Sindoor: ಪಾಕಿಸ್ತಾನದ ಎಫ್- 16 ಯುದ್ಧವಿಮಾನ, ಕ್ಷಿಪಣಿ ಹೊಡೆದುರುಳಿಸಿದ ಭಾರತ
ಪಾಕ್ ಪರ ಪೋಸ್ಟ್ ಹಾಕಿದ್ದಕ್ಕೆ ದೇಶದ ಸಾರ್ವಭೌಮತ್ವದ ಘನತೆಗೆ ಅಪಾಯಕಾರಿಯಾಗುವ ರೀತಿಯಲ್ಲಿ, ದೇಶದ ಏಕತೆಗೆ ಧಕ್ಕೆ ತರುವಂತಹ ಪೋಸ್ಟ್ ಹಾಕಿದ ಕಾರಣ ದಂತ ವೈದ್ಯಕೀಯ ವಿದ್ಯಾರ್ಥಿನಿ ತಷಾವುದ್ದ ಮೇಲೆ BNS 152. 197.3(5) ಅಡಿ ದೂರು ದಾಖಲಾಗಿದೆ. ದೂರು ದಾಖಲಾಗುತ್ತಿದ್ದಂತೆ ವಿದ್ಯಾರ್ಥಿನಿ ಉಲ್ಟಾ ಹೊಡೆದಿದ್ದಾಳೆ. ತನ್ನಿಂದ ತಪ್ಪಾಗಿದೆ. ಮನನೊಂದಿರುವ ಎಲ್ಲರಿಗೂ ನನ್ನ ಹೃದಯದಿಂದ ಕ್ಷಮೆಯಾಚಿಸುತ್ತೇನೆ. ಭಾರತೀಯಳಾದ ನಾನು ನನ್ನ ರಾಷ್ಟ್ರವನ್ನು ಪ್ರೀತಿಸುತ್ತೇನೆ. ಇದು ನನ್ನ ತಾಯ್ನಾಡು. ಭಾರತದಲ್ಲಿ ಹುಟ್ಟಿ ಬೆಳೆದದ್ದು. ನಾನು ಕಮೆಂಟ್ ಮಾಡಿದ್ದು ಮೂರ್ಖತನದ ಕೃತ್ಯವಾಗಿದೆ ಮತ್ತೊಮ್ಮೆ! ನಿಜವಾಗಿಯೂ ಎಲ್ಲರಿಗೂ ಕ್ಷಮೆಯಾಚಿಸುವೆ. ಮುಂದೆ ನಾನು ಎಂದಿಗೂ ಈ ರೀತಿಯ ತಪ್ಪನ್ನು ಮಾಡುವುದಿಲ್ಲ ಎಂದು ಎಂದು ಆಕೆ ಡ್ರಾಮಾ ಮಾಡಿದ್ದಾಳೆ. ಸದ್ಯ ಪೊಲೀಸ್ ಪ್ರಕರಣ ದಾಖಲಿಸಲಾಗಿದೆ.