ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಭೀಮಾ ತೀರದಲ್ಲಿ ಮತ್ತೆ ಹಂತಕರ ಅಟ್ಟಹಾಸ: ನಿವೃತ್ತ ಶಿಕ್ಷಕನ ಭೀಕರ ಹತ್ಯೆ: ದುಷ್ಕರ್ಮಿಗಳ ಪತ್ತೆಗೆ ಕಾರ್ಯಾಚರಣೆ

Crime News: ಭಾನುವಾರ ವಿಜಯಪುರದ ಇಂಡಿ ತಾಲೂಕಿನಲ್ಲಿ ನಿವೃತ್ತ ಶಿಕ್ಷಕ, 63 ವರ್ಷದ ಸಿದ್ದಪ್ಪ ಅಂಜುಟಗಿ ಅವರನ್ನು ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಇಂಡಿ ತಾಲೂಕಿನ ಚೌಡಿಹಾಳ ರಸ್ತೆಯ ಪೂಜಾರಿ ವಸ್ತಿ ಬಳಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.

ನಿವೃತ್ತ ಶಿಕ್ಷಕನ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ಸಾಂದರ್ಭಿಕ ಚಿತ್ರ -

Ramesh Ballamoole
Ramesh Ballamoole Aug 16, 2026 3:33 PM

ವಿಜಯಪುರ, ಆ. 16: ಭೀಮಾ ತೀರದಲ್ಲಿ ಮತ್ತೊಮ್ಮೆ ನೆತ್ತರು ಹರಿದಿದೆ (Crime News). ಭಾನುವಾರ (ಆಗಸ್ಟ್‌ 16) ವಿಜಯಪುರದ ಇಂಡಿ ತಾಲೂಕಿನಲ್ಲಿ ನಿವೃತ್ತ ಶಿಕ್ಷಕ, 63 ವರ್ಷದ ಸಿದ್ದಪ್ಪ ಅಂಜುಟಗಿ ಅವರನ್ನು ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಇಂಡಿ ತಾಲೂಕಿನ ಚೌಡಿಹಾಳ ರಸ್ತೆಯ ಪೂಜಾರಿ ವಸ್ತಿ ಬಳಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ (Vijayapura News). ಸದ್ಯ ಪೊಲೀಸರು ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಹೆಚ್ಚಿನ ವಿವರ ಕಲೆ ಹಾಕಲಾಗುತ್ತಿದೆ.

ತಿಂಗಳ ಅಂತರದಲ್ಲಿ ನಡೆಯುತ್ತಿರುವ 2ನೇ ಹತ್ಯೆ ಇದು. ಜುಲೈಯಲ್ಲಿ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ದೇವಲಗಾಣಗಾಪುರ ಗ್ರಾಮದಲ್ಲಿ ಟಂ-ಟಂ ಚಾಲಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಲಾಗಿತ್ತು. ನಸುಕಿನ ಜಾವ 2.17 ಗಂಟೆ ಸುಮಾರಿಗೆ ಸಂಗಮ ರಸ್ತೆಯಲ್ಲಿರುವ ಅವಧೂತ ಆಶ್ರಮದ ಸಮೀಪ ಈ ಘಟನೆ ನಡೆದಿತ್ತು. ಮೃತನನ್ನು ದೇವಲಗಾಣಗಾಪುರ ಗ್ರಾಮದ ದತ್ತು (19) ಎಂದು ಗುರುತಿಸಲಾಗಿದೆ.

ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ದತ್ತುವನ್ನು ಮೊದಲಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗಲಿಲ್ಲ.

ಭೀಮಾ ತೀರದಲ್ಲಿ ಮತ್ತೆ ಹರಿದ ನೆತ್ತರು; ಜಮೀನು ವಿಚಾರಕ್ಕೆ ಗುಂಡಿಟ್ಟು, ಮಚ್ಚಿನಿಂದ ಕೊಚ್ಚಿ 6 ಮಂದಿಯ ಭೀಕರ ಕೊಲೆ!

ದಿಟ್ಟಿಸಿ ನೋಡಿದ ವಿಚಾರವನ್ನು ನೆಪವನ್ನಾಗಿ ಮಾಡಿಕೊಂಡು ಆರೋಪಿಗಳು ಹಲ್ಲೆ ನಡೆಸಿದ್ದಾರೆ ಎಂದು ದತ್ತು ಹೇಳಿಕೆ ನೀಡಿದ್ದ ಎನ್ನಲಾಗಿದೆ. ಈ ಸಂಬಂಧ ದೇವಲಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕ್ರೈಂ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.