ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karnataka Rains: ರಾಜ್ಯದಲ್ಲಿ ಮುಂದಿನ 4 ದಿನ ಅಬ್ಬರಿಸಲಿದೆ ಮಳೆ; ಯೆಲ್ಲೋ ಅಲರ್ಟ್‌ ಘೋಷಣೆ

Karnataka Rains: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 32°C ಮತ್ತು 22°C ಇರುವ ಸಾಧ್ಯತೆ ಇದೆ.

ಜೂ.11ರವರೆಗೆ ಯೆಲ್ಲೋ ಅಲರ್ಟ್‌ ಘೋಷಣೆ; ಭಾರಿ ಮಳೆ ನಿರೀಕ್ಷೆ

Profile Prabhakara R Jun 7, 2025 7:25 PM

ಬೆಂಗಳೂರು: ಮುಂದಿನ ಒಂದು ವಾರದ ಕಾಲ ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಹವಾಮಾನ ಇಲಾಖೆಯು ಜೂನ್‌ 9ರಿಂದ 11ರವರೆಗೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಇನ್ನು ಜೂನ್‌ 8ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಕಲಬುರಗಿ, ಬಾಗಲಕೋಟೆ, ಗದಗ, ಬೆಳಗಾವಿ, ಧಾರವಾಡ, ವಿಜಯಪುರ, ಬೀದರ್, ರಾಯಚೂರು, ಯಾದಗಿರಿ, ಕೊಪ್ಪಳ, ಹಾವೇರಿ ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ, ಹಾಸನ ಕೊಡಗು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿಕ್ಕಮಗಳೂರು, ಮಂಡ್ಯ, ರಾಮನಗರ, ಕೋಲಾರ, ಚಿತ್ರದುರ್ಗ, ದಾವಣಗೆರೆ, ಮೈಸೂರು ಜಿಲ್ಲೆಗಳ ವ್ಯಾಪಕವಾಗಿ ಸಾಧಾರಣ ಮಳೆಯಾಗುವ (Karnataka Rains) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 32°C ಮತ್ತು 22°C ಇರುವ ಸಾಧ್ಯತೆ ಇದೆ.

ಜೂನ್‌ 9ರಂದು ಕರಾವಳಿ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕಲಬುರಗಿ, ಬಾಗಲಕೋಟೆ, ಗದಗ, ಬೆಳಗಾವಿ, ಧಾರವಾಡ, ವಿಜಯಪುರ, ಬೀದರ್, ರಾಯಚೂರು, ಯಾದಗಿರಿ, ಕೊಪ್ಪಳ, ಹಾವೇರಿ ಜಿಲ್ಲೆಗಳಲ್ಲಿ ಹಲವೆಡೆ ಗುಡುಗು ಸಹಿತ ಗಾಳಿ (30-40 kmph) ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನು ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ವಿಜಯನಗರ, ಶಿವಮೊಗ್ಗ, ಚಿಕ್ಕಮಗಳೂರು, ಚಾಮರಾಜನಗರ, ಮೈಸೂರು, ರಾಮನಗರ, ಮಂಡ್ಯ, ಮೈಸೂರು ಜಿಲ್ಲೆಯಲ್ಲಿ ಗುಡುಗು ಸಹಿತ ಗಾಳಿ ಸಹಿತ ಮಳೆಯಾಗುವ ಸಂಭವ ಇದೆ.

ಜೂನ್‌ 10ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಕಲಬುರಗಿ, ಬಾಗಲಕೋಟೆ, ಗದಗ, ಬೆಳಗಾವಿ, ಧಾರವಾಡ, ವಿಜಯಪುರ, ಬೀದರ್, ರಾಯಚೂರು, ಯಾದಗಿರಿ, ಕೊಪ್ಪಳ, ಹಾವೇರಿ ಜಿಲ್ಲೆಗಳಲ್ಲಿ ಹಲವೆಡೆ ಗುಡುಗು, ಗಾಳಿ ಸಹಿತ ಮಳೆ ಆಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ವಿಜಯನಗರ, ಶಿವಮೊಗ್ಗ, ಚಿಕ್ಕಮಗಳೂರು, ಚಾಮರಾಜನಗರ, ಮೈಸೂರು, ರಾಮನಗರ, ಮಂಡ್ಯ, ಮೈಸೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಜೂನ್‌ 11ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಕೊಪ್ಪಳ, ರಾಯಚೂರು, ಯಾದಗಿರಿ, ಬಾಗಲಕೋಟೆ, ಗದಗ, ಬೀದರ್, ಕಲಬುರಗಿ, ಹಾವೇರಿ, ಬೆಳಗಾವಿ, ಧಾರವಾಡ, ವಿಜಯಪುರದಲಿ ಗುಡುಗು ಸಹಿತ ಮಳೆಯಾಗಲಿದೆ. ಇನ್ನು ದಕ್ಷಿಣ ಒಳನಾಡಿನ ಬಳ್ಳಾರಿ, ವಿಜಯನಗರ, ಕೋಲಾರ ಬೆಂಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಮಂಡ್ಯ, ರಾಮನಗರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಈ ಸುದ್ದಿಯನ್ನೂ ಓದಿ | Health Tips: ಹುಷಾರ್‌! ರೋಗಗಳನ್ನು ಹೊತ್ತು ತರಬಹುದು ಪಾರಿವಾಳಗಳು

ಜೂನ್‌ 12 ಮತ್ತು 13ರಂದು ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೊಪ್ಪಳ, ಬಾಗಲಕೋಟೆ, ಗದಗ, ಬೆಳಗಾವಿ, ವಿಜಯಪುರ, ಧಾರವಾಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೀದ‌ರ್, ಕಲಬುರಗಿ, ರಾಯಚೂರು, ಯಾದಗಿರಿ, ಹಾವೇರಿ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ.