ಫೋಟೋ ಗ್ಯಾಲರಿ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Janardhana Reddy: ಅಪರಾಧಿ ಜನಾರ್ದನ ರೆಡ್ಡಿ ಶಾಸಕ ಸ್ಥಾನ ರದ್ದಾಗುತ್ತಾ? ನಿಯಮ ಹೇಳೋದೇನು?

ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆಯ ಓಬಳಾಪುರಂ ಮೈನಿಂಗ್‌ ಕಂಪನಿ ಅಕ್ರಮ ಗಣಿಗಾರಿಕೆ ಪ್ರಕಣದಲ್ಲಿ ಮಾಜಿ ಸಚಿವ, ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರಿಗೆ ಬಿಗ್‌ ಶಾಕ್‌ ಎದುರಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ದಿಲ್ಲಿಯ ಸಿಬಿಐ ವಿಶೇಷ ನ್ಯಾಯಾಲಯ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಹಾಗಾದರೆ ಜನಾರ್ದನ ರೆಡ್ಡಿ ಅವರ ಶಾಸಕ ಸ್ಥಾನ ರದ್ದಾಗುತ್ತಾ? ಈ ಕುರಿತಾದ ನಿಯಮ ಏನು ಹೇಳುತ್ತದೆ? ಇಲ್ಲಿದೆ ವಿವರ.

ಅಪರಾಧಿ ಜನಾರ್ದನ ರೆಡ್ಡಿ ಶಾಸಕ ಸ್ಥಾನ ರದ್ದಾಗುತ್ತಾ?

ಜನಾರ್ದನ ರೆಡ್ಡಿ.

Profile Ramesh B May 6, 2025 6:07 PM

ಬೆಂಗಳೂರು: ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆಯ ಓಬಳಾಪುರಂ ಮೈನಿಂಗ್‌ ಕಂಪನಿ ಅಕ್ರಮ ಗಣಿಗಾರಿಕೆ ಪ್ರಕಣದಲ್ಲಿ ಮಾಜಿ ಸಚಿವ, ಗಂಗಾವತಿ ಶಾಸಕ ಜನಾರ್ದನ ರೆಡ್ಡಿ (Janardhana Reddy) ಅವರಿಗೆ ಬಿಗ್‌ ಶಾಕ್‌ ಎದುರಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ದಿಲ್ಲಿಯ ಸಿಬಿಐ ವಿಶೇಷ ನ್ಯಾಯಾಲಯ ಜನಾರ್ದನ ರೆಡ್ಡಿ ಸೇರಿದಂತೆ ಇತರ ಐವರು ಆರೋಪಿಗಳನ್ನು ಅಪರಾಧಿಗಳಿಂದು ಘೋಷಿಸಿ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಹಾಗಾದರೆ ಜನಾರ್ದನ ರೆಡ್ಡಿ ಅವರ ಶಾಸಕ ಸ್ಥಾನ ರದ್ದಾಗುತ್ತಾ? ಈ ಕುರಿತಾದ ನಿಯಮ ಏನು ಹೇಳುತ್ತದೆ? ನಿಮ್ಮ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ.

3 ವರ್ಷಕ್ಕಿಂತ ಅಧಿಕ ಕಾಲಾವಧಿಯ ಶಿಕ್ಷೆ ಪ್ರಕಟವಾದರೆ ಶಾಸಕ ಸ್ಥಾನ ರದ್ದಾಗುತ್ತದೆ. ಆದರೆ ಜನಾರ್ದನ ರೆಡ್ಡಿ ಅವರ ಪ್ರಕರಣದಲ್ಲಿ ಈ ಸಾಧ್ಯತೆ ಕಡಿಮೆ. ಯಾಕೆಂದರೆ ಅವರು ತೀರ್ಪು ಪ್ರಶ್ನಿಸಿ ಹೈಕೋರ್ಟ್‌ ಕದ ತಟ್ಟಬಹುದು. ಇನ್ನು, ಕೋರ್ಟ್​ ತೀರ್ಪು ವಿಚಾರವಾಗಿ ಜನಾರ್ದನ್​ ರೆಡ್ಡಿ ಪರ ವಕೀಲರು ಪ್ರತಿಕ್ರಿಯಿಸಿದ್ದು, ಶಾಸಕ ಜನಾರ್ದನ್​ ರೆಡ್ಡಿ ಅವರಿಗೆ ಹೈಕೋರ್ಟ್​ನಲ್ಲಿ ಜಾಮೀನು ಸಿಗುವ ಸಾಧ್ಯತೆ ಇದೆ ಎಂದಿದ್ದಾರೆ. ಆ ಮೂಲಕ ಅವರ ಶಾಸಕ ಸ್ಥಾನಕ್ಕೆ ಕುತ್ತುಂಟಾಗುವ ಸಾಧ್ಯತೆ ಕಡಿಮೆ.

ಈ ಸುದ್ದಿಯನ್ನೂ ಓದಿ: Janardhan Reddy: ಅಕ್ರಮ ಗಣಿಗಾರಿಕೆ ಕೇಸ್‌ನಲ್ಲಿ ಜನಾರ್ದನ ರೆಡ್ಡಿ ಅಪರಾಧಿ; ಏನಿದು ಪ್ರಕರಣ?

13 ವರ್ಷಗಳ ಹಿಂದಿನ ಪ್ರಕರಣ

ವಿಶೇಷ ಎಂದರೆ ಇದು ಸುಮಾರು 13 ವರ್ಷಗಳ ಹಿಂದಿನ ಪ್ರಕರಣ. ಬಿ.ಎಸ್‌.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಆಡಳಿತದಲ್ಲಿ ಅಕ್ರಮ ಗಣಿಗಾರಿಕೆ ನಡೆದಿತ್ತು. ಆಂಧ್ರ ಪ್ರದೇಶ ಮತ್ತು ಕರ್ನಾಟಕದ ಗಡಿ ಭಾಗವಾದ ಓಬಳಾಪುರಂ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆದ ಪ್ರಕರಣ ಇದಾಗಿದೆ.

2009ರಲ್ಲಿ ಅಂದಿನ ಆಂಧ್ರ ಪ್ರದೇಶ ಸರ್ಕಾರದ ಕೋರಿಕೆಯ ಮೇರೆಗೆ ಕೇಂದ್ರ ಸರ್ಕಾರದ ನಿರ್ದೇಶನದ ಹಿನ್ನೆಲೆಯಲ್ಲಿ ಸಿಬಿಐ ತನಿಖೆ ಆರಂಭಿಸಿತ್ತು. ಸಿಬಿಐ 2011ರಲ್ಲಿ ಮೊದಲ ಚಾರ್ಜ್‌ಶೀಟ್‌ ಸಲ್ಲಿಸಿತ್ತು. ಜಾರ್ಚ್‌ಶೀಟ್‌ನಲ್ಲಿ ಜನಾರ್ದನ ರೆಡ್ಡಿ ಜತೆಗೆ ಐಎಎಸ್‌ ಅಧಿಕಾರಿ ಶ್ರೀಲಕ್ಷ್ಮೀ, ಜನಾರ್ದನ್‌ ರೆಡ್ಡಿ ಅವರ ಆಪ್ತ ಸಹಾಯಕ ಮೆಫಾಜ್‌ ಅಲಿ ಖಾನ್‌, ಮಾಜಿ ಸಚಿವೆ ಸಬಿತಾ ಇಂದ್ರಾ ರೆಡ್ಡಿ, ಬಿ.ವಿ.ಶ್ರೀನಿವಾಸ ರೆಡ್ಡಿ, ವಿ.ಡಿ.ರಾಜಗೋಪಾಲ್‌, ಕೃಪಾನಂದಂ ಅವರನ್ನೂ ಹೆಸರಿಸಲಾಗಿತ್ತು.

ಈಗಾಗಲೇ ಜನಾರ್ದನ ರೆಡ್ಡಿ 3 ವರ್ಷ ಜೈಲಿನಲ್ಲಿ ಕಳೆದಿದ್ದು, ವಯಸ್ಸು ಮತ್ತು ಸೇವೆಯನ್ನು ಪರಿಗಣಿಸಿ ಶಿಕ್ಷೆ ಕಡಿಮೆ ಮಾಡಲು ಮನವಿ ಮಾಡಿದರು. ಆದರೆ ಸಿಬಿಐ ವಿಶೇಷ ಕೋರ್ಟ್, ರೆಡ್ಡಿ ಮನವಿಯನ್ನು ತಿರಸ್ಕರಿಸಿದೆ 7 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.

ಮನವಿ ತಿರಸ್ಕರಿಸಿದ ಕೋರ್ಟ್‌

ತೀರ್ಪು ಪ್ರಕಟವಾಗುತ್ತಿದ್ದಂತೆ ಜನಾರ್ದನ ರೆಡ್ಡಿ 7 ವರ್ಷಗಳ ಶಿಕ್ಷೆಯನ್ನು ಕಡಿಮೆ ಮಾಡಿ ಎಂದು ಕೋರ್ಟ್​ಗೆ ಮನವಿ ಮಾಡಿದರು. ನಾನು ಈಗಾಗಲೇ 3 ವರ್ಷಗಳಿಗೂ ಹೆಚ್ಚು ಕಾಲ ಬಂಧನದಲ್ಲಿ ಕಳೆದಿದ್ದೇನೆ. ನನ್ನ ವಯಸ್ಸು ಮತ್ತು ನಾನು ಮಾಡಿದ ಸಾರ್ವಜನಿಕ ಸೇವೆಯನ್ನು ಪರಿಗಣಿಸಿ ಶಿಕ್ಷೆಯ ಪ್ರಮಾಣವನ್ನು ಕಡಿಮೆ ಮಾಡಿ ಎಂದು ರೆಡ್ಡಿ ಕೋರ್ಟ್​ಗೆ ಮನವಿ ಸಲ್ಲಿಸಿದರು. ಆದರೆ ಕೋರ್ಟ್ ಈ ಮನವಿಯನ್ನು ನಿರಾಕರಿಸಿದೆ. ನಿಮಗೆ 10 ವರ್ಷಗಳ ಶಿಕ್ಷೆಯನ್ನು ಏಕೆ ನೀಡಬಾರದು? ನೀವು ಜೀವಾವಧಿ ಶಿಕ್ಷೆಗೆ ಅರ್ಹರು ಎಂದು ಕೋರ್ಟ್‌ ಮರು ಪ್ರಶ್ನಿಸಿದೆ. ಜತೆಗೆ ಒಂದು ತಿಂಗಳೊಳಗೆ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿದೆ.