ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Road Accident: ಯಾದಗಿರಿ ಬಳಿ ಭೀಕರ ಅಪಘಾತ, ಡಿಕ್ಕಿಯಾಗಿ ಹೊತ್ತಿ ಉರಿದ ಕಾರು- ಬಸ್ಸು, 7 ಮಂದಿ ದುರ್ಮರಣ

ಬೆಂಗಳೂರಿನಿಂದ ಕಲಬುರಗಿಗೆ ಹೊರಟಿದ್ದ ವಿಆರ್​ಎಲ್​​ ಖಾಸಗಿ ಬಸ್ ಹಾಗೂ ಕಲಬುರಗಿಯಿಂದ ಲಿಂಗಸೂಗೂರು ಕಡೆಗೆ ಸಾಗುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, 7 ಮಂದಿ ಸಜೀವ ದಹನಗೊಂಡಿದ್ದಾರೆ. ಅಪಘಾತದಲ್ಲಿ ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಯಾದಗಿರಿ ಬಳಿ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು- ಬಸ್ಸು, 7 ಮಂದಿ ಸಾವು

ಯಾದಗಿರಿ ಅಪಘಾತ -

ಹರೀಶ್‌ ಕೇರ
ಹರೀಶ್‌ ಕೇರ Apr 17, 2026 12:01 PM

ಯಾದಗಿರಿ, ಏ.17: ರಾಜ್ಯದಲ್ಲಿ ಮತ್ತೊಂದು ಭಾರಿ ಅಪಘಾತ ಸಂಭವಿಸಿ ಖಾಸಗಿ ಬಸ್‌ (Private bus) ಹಾಗೂ ಕಾರು (car) ಬೆಂಕಿಗಾಹುತಿಯಾಗಿ 7 ಮಂದಿಯನ್ನು ಬಲಿ ಪಡೆದಿವೆ. ಯಾದಗಿರಿ (Yadagiri) ‌ಜಿಲ್ಲೆಯ ಸುರಪುರ ತಾಲ್ಲೂಕಿನ ಶಾಂತಪುರ ಕ್ರಾಸ್ ಬಳಿ ಕಾರು ಮತ್ತು ಖಾಸಗಿ ಬಸ್ ನಡುವೆ ಭೀಕರ ರಸ್ತೆ ಅಪಘಾತ (Road Accident) ಸಂಭವಿಸಿದ್ದು, 7 ಮಂದಿ ಪ್ರಯಾಣಿಕರು ಸಜೀವ ದಹನಗೊಂಡಿದ್ದಾರೆ.

ಬೆಂಗಳೂರಿನಿಂದ ಕಲಬುರಗಿಗೆ ಹೊರಟಿದ್ದ ವಿಆರ್​ಎಲ್​​ ಖಾಸಗಿ ಬಸ್ ಹಾಗೂ ಕಲಬುರಗಿಯಿಂದ ಲಿಂಗಸೂಗೂರು ಕಡೆಗೆ ಸಾಗುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, 7 ಮಂದಿ ಸಜೀವ ದಹನಗೊಂಡಿದ್ದಾರೆ. ಅಪಘಾತದಲ್ಲಿ ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ ಎಂದು ವರದಿಯಾಗಿದೆ. ಘಟನಾ ಸ್ಥಳಕ್ಕೆ ಸುರಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತಪಟ್ಟವರ ಮಾಹಿತಿ ಕಲೆ ಹಾಕುತ್ತಿದ್ದಾರೆ. ಮತ್ತೊಂದೆಡೆ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೆದ್ದಾರಿಯಲ್ಲಿ ಬಸ್ಸು ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿವೆ. ಎರಡೂ ವಾಹನಗಳೂ ವೇಗದಲ್ಲಿದ್ದವು ಎಂದು ತಿಳಿದುಬಂದಿದೆ. ಕಾರಿನಲ್ಲಿದ್ದವರೆಲ್ಲ ಸತ್ತಿದ್ದಾರೆ. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿವೆ. ಎರಡೂ ವಾಹನಗಳೂ ಸಂಪೂರ್ಣ ಅಗ್ನಿಗಾಹುತಿಯಾಗಿವೆ. ಮೃತಪಟ್ಟವರ ವಿವರಗಳು ತಿಳಿದುಬರಬೇಕಿವೆ.

ಭೀಕರ ಅಪಘಾತ: ಸಿಮೆಂಟ್ ಮಿಕ್ಸರ್‌ಗೆ ಡಿಕ್ಕಿ ಹೊಡೆದ ವ್ಯಾನ್; 11 ಮಂದಿ ದುರ್ಮರಣ