Yadgir News: ಯಾದಗಿರಿಯಲ್ಲಿ ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಹಿಳೆ ಆತ್ಮಹತ್ಯೆ
ಯಾದಗಿರಿ ತಾಲೂಕಿನ ವಡಗೇರ ತಾಲೂಕಿನ ಜೋಳದಡಗಿ ಬ್ರಿಡ್ಜ್ ಕಂ ಬ್ಯಾರೇಜ್ ಮೇಲಿಂದ ಹಾರಿ ಶನಿವಾರ ರಾತ್ರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ವಡಗೇರಾ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಕಮಲಮ್ಮ. -
ಯಾದಗಿರಿ: ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯಲ್ಲಿ (Yadgir News) ನಡೆದಿದೆ. ಯಾದಗಿರಿಯ ಹೊರ ಭಾಗದ ಗಿರಿನಗರದ ನಿವಾಸಿ ಕಮಲಮ್ಮ (42) ಮೃತ ದುರ್ದೈವಿ.
ವಡಗೇರ ತಾಲೂಕಿನ ಜೋಳದಡಗಿ ಬ್ರಿಡ್ಜ್ ಕಂ ಬ್ಯಾರೇಜ್ ಮೇಲಿಂದ ಹಾರಿ ಶನಿವಾರ ರಾತ್ರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ವಡಗೇರಾ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಪ್ರಕರಣದ ವಿವರ
ಕಮಲಮ್ಮ ಸಿಳ್ಳೆ ಕ್ಯಾತ ಸಮುದಾಯವದರು. ಅವರ ಪುತ್ರ ಎರ್ರಿಸ್ವಾಮಿ ವಿರುದ್ಧ ಅನೈತಿಕ ಸಂಬಂಧ ಆರೋಪ ಕೇಳಿಬಂದಿದೆ. ಇದರಿಂದ ತಮ್ಮದೇ ಸಮಾಜದ ಮುಖಂಡರಿಂದ ಇಡೀ ಕುಟುಂಬಸ್ಥರಿಗೆ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ. ಮೀನುಗಾರಿಕೆ ಜತೆಗೆ ಮಾರಾಟ ಮಾಡಲು ಮುಖಂಡರು ಅವಕಾಶ ನೀಡಿಲ್ಲ. ಇದೆ ಕಾರಣಕ್ಕೆ ಕಮಲಮ್ಮ ನೊಂದುಕೊಂಡು, ಮಗಳ ಊರಾದ ಜೋಳದಡಗಿ ಗ್ರಾಮಕ್ಕೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮುನ್ನ ಬ್ಯಾರೇಜ್ ಮೇಲೆ ಮಾಂಗಲ್ಯ ಸರ ತೆಗೆದಿಟ್ಟಿದ್ದಾರೆ. ಇಂದು ಮಧ್ಯಾಹ್ನ ಅಗ್ನಿ ಶಾಮಕದಳ ಸಿಬ್ಬಂದಿ ಮೃತದೇಹವನ್ನು ಹೊರತೆಗೆದಿದ್ದಾರೆ.
ಬೆಂಗಳೂರಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತೆ ಶವ
ಬೆಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತೆ ಶವ ಪತ್ತೆಯಾಗಿರುವ ಘಟನೆ ನಗರದ ಯಲಹಂಕದಲ್ಲಿ ನಡೆದಿದ್ದು, ಪತಿ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ. ಶೃತಿ (22) ಮೃತ ವಿವಾಹಿತೆ ಎಂದು ತಿಳಿದುಬಂದಿದೆ.
ಪತಿ ಪವನ್ ಕಲ್ಯಾಣ್ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ. ಕಳೆದ ಒಂದೂವರೆ ವರ್ಷದ ಹಿಂದೆ ಪವನ್ ಕಲ್ಯಾಣ್ ಕುಟುಂಬದವರಿಂದ ನಿರಂತರ ವರದಕ್ಷಿಣೆ ಕಿರುಕುಳ ಆರೋಪವನ್ನು ಶೃತಿ ಕುಟುಂಬಸ್ಥರು ಹೊರಿಸಿದ್ದಾರೆ. ವರದಕ್ಷಿಣೆ ಕಿರುಕುಳ ಹಿನ್ನೆಲೆ ಶೃತಿ ಹಾಗೂ ಪತಿ ಕುಟುಂಬಸ್ಥರ ನಡುವೆ ಕಲಹ ಉಂಟಾಗುತ್ತಿತ್ತು. ಈ ಹಿಂದೆ ರಾಜಿ ಪಂಚಾಯ್ತಿ ಮಾಡಲಾಗಿತ್ತು.
Murder Case: ವೈರ್‌ನಿಂದ ಕುತ್ತಿಗೆ ಬಿಗಿದು ಪ್ರಿಯತಮೆಯ ಕೊಲೆ ಮಾಡಿದ ಪ್ರಿಯಕರ
ಆದರೆ ಮತ್ತೆ ಕಿರುಕುಳ ನೀಡಿ ಹಿಂಸೆ ನೀಡುತ್ತಿದ್ದರು. ಈ ಹಿನ್ನೆಲೆ ಕುತ್ತಿಗೆಗೆ ಬಟ್ಟೆಯಿಂದ ಬಿಗಿದು ಕೊಲೆ ಮಾಡಿದ್ದಾರೆ. ನಂತರ ನೇಣು ಹಾಕಿ ಆತ್ಮಹತ್ಯೆ ಎಂದು ಬಿಂಬಿಸುತ್ತಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಪ್ರಕರಣ ಸಂಬಂಧ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.