ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಪೋಕ್ಸೊ ಕೇಸ್‌; ಮಲ್ಲಿಕಾರ್ಜುನ ಮುತ್ಯಾ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ ಆರೋಪ ಎದುರಿಸುತ್ತಿರುವ ಮಲ್ಲಿಕಾರ್ಜುನ್ ಮುತ್ಯಾ ವಿರುದ್ಧ ಯಾದಗಿರಿಯ ಗೋಗಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲಾ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಮಲ್ಲಿಕಾರ್ಜುನ ಮುತ್ಯಾ ಅರ್ಜಿ ಸಲ್ಲಿಸಿದ್ದರು.

ಪೋಕ್ಸೊ ಕೇಸ್‌; ಮಲ್ಲಿಕಾರ್ಜುನ ಮುತ್ಯಾ ಜಾಮೀನು ಅರ್ಜಿ ವಜಾ

ಮಲ್ಲಿಕಾರ್ಜುನ ಮುತ್ಯಾ (ಸಂಗ್ರಹ ಚಿತ್ರ) -

Prabhakara R
Prabhakara R Mar 9, 2026 6:18 PM

ಯಾದಗಿರಿ: ಜಿಲ್ಲೆಯ ಮಹಲರೋಜಾ ಮಠದ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾಗೆ (Mallikarjun Mutya) ಯಾದಗಿರಿ‌ ಜಿಲ್ಲಾ ಸತ್ರ ನ್ಯಾಯಾಲಯ ಬಿಗ್ ಶಾಕ್ ನೀಡಿದೆ. ಪೋಕ್ಸೊ ಕೇಸ್‌ನಲ್ಲಿ (POCSO Case) ಕಳೆದ ವಾರ ವಿಚಾರಣೆ ಎದುರಿಸಿದ್ದ ಮಲ್ಲಿಕಾರ್ಜುನ್ ಮುತ್ಯಾ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಇಂದು ತಿರಸ್ಕಾರಗೊಂಡಿದೆ.

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ ಆರೋಪ ಎದುರಿಸುತ್ತಿರುವ ಮಲ್ಲಿಕಾರ್ಜುನ್ ಮುತ್ಯಾ ವಿರುದ್ಧ ಯಾದಗಿರಿಯ ಗೋಗಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲಾ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಮುತ್ಯಾ ಅರ್ಜಿ ಸಲ್ಲಿಸಿದ್ದು, ಇಂದು (ಸೋಮವಾರ) ಅರ್ಜಿ ವಿಚಾರಣೆ ನಡೆಸಿದ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಗೌರವಾನ್ವಿತ ಮರುಳಸಿದ್ದರಾಧ್ಯ ಅವರು ಜಾಮೀನು ತಿರಸ್ಕರಿಸಿದ್ದಾರೆ.

ಇನ್ನು ಪ್ರಕರಣಕ್ಕೆ ಸಂಬಂಧಿಸಿ ಮಲ್ಲಿಕಾರ್ಜುನ ಮುತ್ಯಾ ಇತ್ತೀಚೆಗೆ ಶಹಾಪುರ ಸಿಪಿಐ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ ಅವರು ಬಳಸುತ್ತಿದ್ದ 4 ಮೊಬೈಲ್ ಹಾಗೂ ಶ್ರೀಮಠದ ಸಿಸಿ ಟಿವಿ ದೃಶ್ಯಾವಳಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ಪೋಕ್ಸೊ ಕೇಸ್‌ ವಿಚಾರಣೆಗೆ ಹಾಜರಾದ ಮಲ್ಲಿಕಾರ್ಜುನ ಮುತ್ಯಾ; 4 ಮೊಬೈಲ್‌ಗಳು ವಶಕ್ಕೆ

ಅದಕ್ಕೂ ಮುನ್ನ ಮುತ್ಯಾಗೆ ವೈದ್ಯಕೀಯ ತಪಾಸಣೆ ನಡೆಸಿ, ವಿಚಾರಣೆ ವೇಳೆ ಸಮಗ್ರ ಹೇಳಿಕೆ ಪಡೆಯಲಾಗಿತ್ತು. ಅಲ್ಲದೇ ಅಗತ್ಯವೆನಿಸಿದಲ್ಲಿ ಮತ್ತೊಮ್ಮೆ ವಿಚಾರಣೆಗೆ ಹಾಜರಾಗಲು ಪೊಲೀಸರು ಸೂಚಿಸಿದ್ದರು. ಆದರೆ, ಇದೀಗ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಹಿನ್ನೆಲೆಯಲ್ಲಿ ಮುತ್ಯಾಗೆ ಬಂಧನ ಭೀತಿ ಎದುರಾಗಿದೆ.