ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Yadgir News: ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ; ಭಾಗ್ಯವಂತಿ ಮಠದ ಪೂಜಾರಿ ವಿರುದ್ಧ ಪೋಕ್ಸೋ ಕೇಸ್‌ ದಾಖಲು

ಯಾದಗಿರಿ ಜಿಲ್ಲೆಯ ಸಕ್ರ್ಯ ನಾಯಕ ತಾಂಡಾ ನಿವಾಸಿ ಹಾಗೂ ಭಾಗ್ಯವಂತಿ ಮಠದ ಪೂಜಾರಿ ಅಣ್ಣಪ್ಪ ರೈಟರ್ ವಿರುದ್ಧ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ನೀಡಿದ ದೂರಿನ ಆಧಾರದ ಮೇಲೆ ಯಾದಗಿರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಲಕಿಗೆ ಲೈಂಗಿಕ ಕಿರುಕುಳ; ಭಾಗ್ಯವಂತಿ ಮಠದ ಪೂಜಾರಿ ವಿರುದ್ಧ ಕೇಸ್‌

-

Prabhakara R
Prabhakara R Aug 21, 2026 11:18 PM

ಯಾದಗಿರಿ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಯಾದಗಿರಿ ಜಿಲ್ಲೆಯ ಸಕ್ರ್ಯ ನಾಯಕ ತಾಂಡಾ ನಿವಾಸಿ ಹಾಗೂ ಭಾಗ್ಯವಂತಿ ಮಠದ ಪೂಜಾರಿ ಅಣ್ಣಪ್ಪ ರೈಟರ್ ವಿರುದ್ಧ ಇಲ್ಲಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ನೀಡಿದ ದೂರಿನ ಆಧಾರದ ಮೇಲೆ ಯಾದಗಿರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುರಪುರ ತಾಲೂಕಿನ ಗ್ರಾಮವೊಂದರ ಬಾಲಕಿ ಹಾಗೂ ಆಕೆಯ ತಂಗಿಯನ್ನು ಆಗಸ್ಟ್ 18ರಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಹಾಗೂ ಅಕ್ಕ ಪಡೆ ಸಿಬ್ಬಂದಿ ಸಕ್ರ್ಯ ನಾಯಕ ತಾಂಡಾ ಸಮೀಪದ ಭಾಗ್ಯವಂತಿ ಮಠದಿಂದ ರಕ್ಷಿಸಿ ಕರೆತಂದಿದ್ದರು.

ಬಾಲಕಿಯರ ರಕ್ಷಣೆಯ ಬಳಿಕ ಅವರನ್ನು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಿ, ವಿಚಾರಣೆ ಹಾಗೂ ಆಪ್ತ ಸಮಾಲೋಚನೆ ನಡೆಸಲಾಗಿತ್ತು. ಆಗಸ್ಟ್ 20ರಂದು ನಡೆದ ಆಪ್ತ ಸಮಾಲೋಚನೆ ವೇಳೆ ಬಾಲಕಿಯು ತನ್ನ ಮೇಲೆ ನಡೆದ ಘಟನೆ ಕುರಿತು ಮಾಹಿತಿ ನೀಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಯ ಹೇಳಿಕೆಯ ಪ್ರಕಾರ, ಆಕೆಯ ತಾಯಿ ಬೆಂಗಳೂರಿನಲ್ಲಿ ಕೆಲಸಕ್ಕೆ ತೆರಳಿದ್ದ ಸಂದರ್ಭದಲ್ಲಿ ಬಾಲಕಿಯನ್ನು ಹಾಗೂ ಆಕೆಯ ಸಹೋದರಿಯನ್ನು ಸಂಬಂಧಿಕರ ಬಳಿ ಬಿಟ್ಟಿದ್ದರು. ನಂತರ ಬಾಲಕಿಯರನ್ನು ಭಾಗ್ಯವಂತಿ ಮಠದ ಪೂಜಾರಿ ಅಣ್ಣಪ್ಪ ರೈಟರ್ ಅವರ ಬಳಿ ಇರಿಸಲಾಗಿತ್ತು ಎನ್ನಲಾಗಿದೆ.

ಈ ವೇಳೆ ಅಣ್ಣಪ್ಪ ರೈಟರ್ ಅವರು ಲೈಂಗಿಕ ದುರುದ್ದೇಶದಿಂದ ಬಾಲಕಿಯೊಂದಿಗೆ ಅಸಹ್ಯವಾಗಿ ವರ್ತಿಸುತ್ತಿದ್ದನು ಎಂದು ಬಾಲಕಿಯು ಆಪ್ತ ಸಮಾಲೋಚನೆಯಲ್ಲಿ ತಿಳಿಸಿದ್ದಾಳೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಶಿಗ್ಗಾವಿಯ ಆಂಜನೇಯ ದೇವಸ್ಥಾನದಲ್ಲಿ ಮೂತ್ರ ವಿಸರ್ಜನೆ ಮಾಡಿ ವಿಕೃತಿ; ಮುಸ್ಲಿಂ ಯುವಕ ಅರೆಸ್ಟ್‌

ಬಾಲಕಿಯ ಹೇಳಿಕೆಯ ಆಧಾರದ ಮೇಲೆ ಆರೋಪಿ ಅಣ್ಣಪ್ಪ ರೈಟರ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 75(2) ಹಾಗೂ ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳಿಂದ ರಕ್ಷಣೆ ಕಾಯ್ದೆ (POCSO)-2012ರ ಕಲಂ 8 ಮತ್ತು 10ರ ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.