ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Yadgir News: ಶಾಲೆ ಶೌಚಾಲಯದಲ್ಲಿ ಮಗುವಿಗೆ ಜನ್ಮವಿತ್ತ 9ನೇ ತರಗತಿ ಬಾಲಕಿ!

Shahapur: ಈ ಘಟನೆ ಶಾಲೆ, ಊರು ಹಾಗೂ ಕುಟುಂಬದಲ್ಲಿ ಅಚ್ಚರಿ ಮೂಡಿಸಿದೆ. ಬಾಲಕಿಯ ಮೇಲೆ ಅತ್ಯಾಚಾರವಾಗಿದೆಯೇ, ಈ ಮಗುವಿನ ತಂದೆ ಯಾರು ಎಂಬ ಕುತೂಹಲವೂ ಮೂಡಿದೆ. ಈ ಘಟನೆ ಕುರಿತು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂಪ್ರೇರಿತ ಪ್ರಕರಣ ದಾಖಲು ಮಾಡಿಕೊಳ್ಳಲು ನಿರ್ಧರಿಸಿದೆ.

ಶಾಲೆ ಶೌಚಾಲಯದಲ್ಲಿ ಮಗುವಿಗೆ ಜನ್ಮವಿತ್ತ 9ನೇ ತರಗತಿ ಬಾಲಕಿ!

ಸಾಂದರ್ಭಿಕ ಚಿತ್ರ

ಹರೀಶ್‌ ಕೇರ ಹರೀಶ್‌ ಕೇರ Aug 28, 2025 11:51 AM

ಶಹಾಪುರ : ಯಾದಗಿರಿ ಜಿಲ್ಲೆಯ (Yadgir News) ನಗರದ ಡಾ.ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬರು (9th student) ವಸತಿ ಶಾಲೆಯ ಶೌಚಾಲಯದಲ್ಲಿ (School toilet) ಗಂಡು ಮಗುವಿಗೆ ಜನ್ಮ (Delivery) ನೀಡಿದ ಘಟನೆ ನಡೆದಿದೆ. ವಸತಿ ಶಾಲೆಯ ಶೌಚಾಲಯದಲ್ಲಿ ಬುಧವಾರ ಮಧ್ಯಾಹ್ನ 2:30ರ ಸುಮಾರಿಗೆ ಬಾಲಕಿಗೆ ಹೆರಿಗೆಯಾಗಿದೆ. ಈಕೆ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಬಾಲಕಿ ಮತ್ತು ಮಗು ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಆರೋಗ್ಯವಾಗಿದ್ದಾರೆ.

ಈ ಘಟನೆ ಶಾಲೆ, ಊರು ಹಾಗೂ ಕುಟುಂಬದಲ್ಲಿ ಅಚ್ಚರಿ ಮೂಡಿಸಿದೆ. ಬಾಲಕಿಗೆ ಗರ್ಭ ತುಂಬುವವರೆಗೂ ಯಾರ ಗಮನಕ್ಕೂ ಬರಲಿಲ್ಲವೇ ಎಂಬ ಪ್ರಶ್ನೆಗಳು ಎದ್ದಿವೆ. ಸಹಜವಾಗಿ, ಬಾಲಕಿಯ ಮೇಲೆ ಅತ್ಯಾಚಾರವಾಗಿದೆಯೇ, ಈ ಮಗುವಿನ ತಂದೆ ಯಾರು ಎಂಬ ಕುತೂಹಲವೂ ಮೂಡಿದೆ. ಈ ಘಟನೆ ಕುರಿತು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂಪ್ರೇರಿತ ಪ್ರಕರಣ ದಾಖಲು ಮಾಡಿಕೊಳ್ಳಲು ನಿರ್ಧರಿಸಿದೆ.

ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಗಮನಕ್ಕೆ ತರಲಿಲ್ಲ. ಬೇರೆ ಮೂಲಗಳಿಂದ ನಮ್ಮ ಗಮನಕ್ಕೆ ಬಂದಿದ್ದು ಕ್ರಮಕ್ಕೆ ಮುಂದಾಗಿದ್ದೇವೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ್ ಕೋಸಂಬೆ ತಿಳಿಸಿದ್ದಾರೆ. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗೆ ದೂರವಾಣಿ ಮೂಲಕ ಮಾತನಾಡಿ ಘಟನೆ ಕುರಿತು ಪ್ರಕರಣ ದಾಖಲು ಮಾಡುವಂತೆ ಸೂಚಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿ ವಿಸ್ತೃತ ವರದಿಯನ್ನು ಆಯೋಗಕ್ಕೆ ಸಲ್ಲಿಸುವಂತೆ ತಿಳಿಸಲಾಗಿದೆ. ಬಾಲಕಿ ಮಗುವಿಗೆ ಜನ್ಮ ನೀಡಿದ ಸಂಗತಿ ಹೊರಬೀಳುತ್ತಿದ್ದಂತೆ ಅಧಿಕಾರಿಗಳ ತಂಡ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸುತ್ತಿದೆ.

ಇದನ್ನೂ ಓದಿ: Recording videos: ಶೌಚಾಲಯದಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ಚಿತ್ರೀಕರಣ; ಬೆಂಗಳೂರಿನಲ್ಲಿ ಇನ್ಫೋಸಿಸ್‌ ನೌಕರ ಅರೆಸ್ಟ್