ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karnataka Rains: ನಾಳೆ ಬೆಂಗಳೂರು, ಬೆಳಗಾವಿ ಸೇರಿ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌; ಭಾರಿ ಮಳೆ ಸಾಧ್ಯತೆ!

Karnataka weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳು ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30°C ಮತ್ತು 20°C ಇರುವ ಸಾಧ್ಯತೆ ಇದೆ.

ನಾಳೆ ಬೆಂಗಳೂರು, ಬೆಳಗಾವಿ ಸೇರಿ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Profile Prabhakara R Jul 14, 2025 7:42 PM

ಬೆಂಗಳೂರು: ಉಡುಪಿ, ಮಂಗಳೂರು, ಶಿವಮೊಗ್ಗ ಸೇರಿ ರಾಜ್ಯದ ವಿವಿಧೆಡೆ ಭಾನುವಾರ ಉತ್ತಮ ಮಳೆಯಾಗಿದೆ. ಅದೇ ರೀತಿ ಜುಲೈ 15ರಂದು ಕರಾವಳಿ ಜಿಲ್ಲೆಗಳು, ಕೊಡಗು, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ಧಾರವಾಡ, ಗದಗ, ಕೊಪ್ಪಳ, ಬೆಳಗಾವಿ , ವಿಜಯಪುರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಸೇರಿ 16 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದ್ದು, ಭಾರಿ ಮಳೆಯಾಗುವ (Karnataka Rains) ಸಾಧ್ಯತೆ ಇದೆ.

ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳು ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30°C ಮತ್ತು 20°C ಇರುವ ಸಾಧ್ಯತೆ ಇದೆ.

ಜುಲೈ 16ರಂದು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದ್ದು, ಭಾರಿ ಮಳೆಯಾಗಲಿದೆ. ಇನ್ನು ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಮೈಸೂರು, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಧಾರವಾಡ, ಗದಗ, ಕೊಪ್ಪಳ, ಬೆಳಗಾವಿ, ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ.



ಜುಲೈ 18ರಂದು ಉಡುಪಿ, ದಕ್ಷಿಣ ಕನ್ನಡಕ್ಕೆ ಆರೆಂಜ್‌ ಅಲರ್ಟ್‌ ನೀಡಲಾಗಿದ್ದು, ಧಾರಾಕಾರ ಮಳೆ ಸುರಿಯಲಿದೆ. ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಧಾರವಾಡ, ಗದಗ, ಕೊಪ್ಪಳ, ಬೆಳಗಾವಿ, ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದ್ದು, ಬಿರುಸಿನ ಮಳೆಯಾಗುವ ಸಾಧ್ಯತೆ ಇದೆ.

ಜುಲೈ 18ರಂದು ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಹಾಸನ, ಮೈಸೂರು, ಚಾಮರಾಜನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಧಾರವಾಡ, ಗದಗ, ಕೊಪ್ಪಳ, ಬೆಳಗಾವಿ, ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಗುಡುಗು ಸಹಿತ ಮಳೆಯಾಗಲಿದೆ.

ಈ ಸುದ್ದಿಯನ್ನೂ ಓದಿ | Moda Kavida Vatavarana: ಸಿಂಪಲ್‌ ಸುನಿ ಹೊಸ ಸಿನಿಮಾ ಘೋಷಣೆ; ‘ಮೋಡ ಕವಿದ ವಾತಾವರಣಕ್ಕೆ ಹೀರೋ ಆದ ಶೀಲಮ್