About Us Advertise with us Be a Reporter E-Paper

Breaking Newsದೇಶಪ್ರಚಲಿತ

ಲೋಕಸಭಾ ಚುನಾವಣೆಗೆ ಸಿನ್ಹಾ: ಕೇಜ್ರಿ ಒತ್ತಾಯ

ದೆಹಲಿ: ಮಾಜಿ ಬಿಜೆಪಿ ನಾಯಕ ಯಶವಂತ ಸಿನ್ಹಾ 2019 ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಒತ್ತಾಯಿಸಿದ್ದಾರೆ.

ಆದಾಗ್ಯೂ, ಮಾಜಿ ವಿತ್ತ ಸಚಿವರು ಯಾವ ಪಕ್ಷದಿಂದ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬುದರ ಕುರಿತು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕರು ಯಾವುದೇ ಹೆಸರನ್ನೂ ಹೇಳಿಲ್ಲ. ಯಶವಂತ ಸಿನ್ಹಾ ಚುನಾವಣೆಗೆ ಸ್ಪರ್ಧಿಸುವ ಕುರಿತು ಮಾತನಾಡಿದ ಕೇಜ್ರಿವಾಲ್, ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಯಶವಂತ ಸಿನ್ಹಾ ಹೇಳಿದ್ದಾರೆ.

ಆದರೆ, ನಿಮ್ಮಂತಹ ಒಳ್ಳೆಯ ವ್ಯಕ್ತಿಗಳೇ ಚುನಾವಣೆಗೆ ಸ್ಪರ್ಧಿಸದಿದ್ದರೆ ಮತ್ಯಾರು ಸ್ಪರ್ಧಿಸಬೇಕು?. ನಿಮ್ಮಂತಹವರು ಸ್ಪರ್ಧಿಸಬೇಕು ಎಂಬುದು ಸಾರ್ವಜನಿಕರ ಬೇಡಿಕೆಯಾಗಿದ್ದು, ನಮಗೂ ಅದೇ ರೀತಿ ನೀವು ಸ್ಪರ್ಧಿಸಬೇಕೆಂಬ ಆಸೆ ಇದೆ ಎಂದು ಕೇಜ್ರಿವಾಲ್ ಒತ್ತಾಯಿಸಿದರು.

ಉತ್ತರ ಪ್ರದೇಶ ಎಎಪಿ ಉಸ್ತುವಾರಿ ಸಂಜಯ್ ಸಿಂಗ್ ನೇತೃತ್ವದಲ್ಲಿ ನಡೆದ ಪಾದಯಾತ್ರೆ ಪ್ರಯುಕ್ತ ಆಯೋಜಿಸಿದ್ದ ಜನಾಧಿಕಾರ ಸಮಾವೇಶದಲ್ಲಿ ಮಾತನಾಡಿದ ಕೇಜ್ರಿವಾಲ್, ವಿದ್ಯುತ್ ದರ ನಿಯಂತ್ರಿಸಿ ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಸುಧಾರಣೆಗೆ ಕ್ರಮ ಕೈಗೊಳ್ಳಲಾಗಿದೆ. ದೆಹಲಿಯಲ್ಲಿ 100 ಮೊಹಲ್ಲಾ ಕ್ಲಿನಿಕ್‌ಗಳನ್ನು ತೆರೆಯಲಾಗಿದ್ದು, ಕಡಿಮೆ ಸುಂಕದಲ್ಲಿ ವಿದ್ಯುತ್ ನೀಡಲಾಗುತ್ತಿದೆ. ದೇಶಾದ್ಯಂತ ಇದನ್ನು ಮೋದಿಗೆ ಏಕೆ ಸಾಧ್ಯವಾಗುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

Tags

Related Articles

Leave a Reply

Your email address will not be published. Required fields are marked *

Language
Close