About Us Advertise with us Be a Reporter E-Paper

Breaking Newsದೇಶಪ್ರಚಲಿತ
Trending

ಕೇರಳದಲ್ಲಿ ಭುಗಿಲೆದ್ದ ಪ್ರತಿಭಟನೆ: ಸಿಎಂ ನಿವಾಸಕ್ಕೆ ಮುತ್ತಿಗೆ

ಬಿಜೆಪಿ ಮತ್ತು ಆರ್ ಎಸ್ಎಸ್ ಕಾರ್ಯಕರ್ತರು ಬೀದಿಗಿಳಿದಿದ್ದು, ಸಿಎಂ ಪಿಣರಾಯಿ ವಿಜಯನ್ ನಿವಾಸದೆದುರು ಅಹೋರಾತ್ರಿ ಪ್ರತಿಭಟನೆ ನಡೆಸಿದರು.

ತಿರುವನಂತಪುರ: ದೇವರನಾಡು ಕೇರಳದಲ್ಲಿ ಅಯ್ಯಪ್ಪ ಭಕ್ತರ ಪ್ರತಿಭಟನೆ ಭುಗಿಲೆದ್ದಿದೆ. ಬಿಜೆಪಿ ಮತ್ತು ಆರ್ ಎಸ್ಎಸ್ ಕಾರ್ಯಕರ್ತರು ಬೀದಿಗಿಳಿದಿದ್ದು, ಸಿಎಂ ಪಿಣರಾಯಿ ವಿಜಯನ್ ನಿವಾಸದೆದುರು ಅಹೋರಾತ್ರಿ ಪ್ರತಿಭಟನೆ ನಡೆಸಿದರು.

ರಾಜಧಾನಿ ತಿರುವನಂತಪುರದಲ್ಲಿರುವ ಸಿಎಂ ಅಧಿಕೃತ ನಿವಾಸ ದಿ ಕ್ಲಿಫ್ ಹೌಸ್ ಗೆ ಪ್ರತಿಭಟನಾಕಾರರು ಮುತ್ತಿಗೆ ಹಾಕಿದ್ದಾರೆ. ಅಲ್ಲದೆ ಪಿಣರಾಯಿ ವಿಜಯನ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ.

ಅಯ್ಯಪ್ಪ ದರ್ಶನಕ್ಕೆ ತೆರಳಿದ್ದ ಸುಮಾರು 70ಕ್ಕೂ ಅಧಿಕ ಅಯ್ಯಪ್ಪ ಭಕ್ತರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮತ್ತು ಆರ್ ಎಸ್ಎಸ್ ಕೇರಳದಾದ್ಯಂತ ಭಾರಿ ಪ್ರತಿಭಟನೆ ನಡೆಸುತ್ತಿವೆ. ಕೇರಳದ ಕೊಚ್ಚಿ, ಅರಾನ್ಮುಲ, ಕೊಲ್ಲಂ, ಅಲಪುಳಾ, ರನ್ನಿ, ತೋಡುಪುಳ, ಕಲಾಡಿ, ಮಲಪ್ಪುರಂ ಮತ್ತು ಇಡುಕ್ಕಿಯಲ್ಲಿ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ.

“ರಾಜ್ಯದಲ್ಲಿ ಈ ರೀತಿಯ ತುರ್ತುಸ್ಥಿತಿಯ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆಯನ್ನು ನಾವು ಆಯೋಜಿಸಿದ್ದೇವೆ” ಎಂದು ಯುವಮೋರ್ಚಾ ರಾಜ್ಯ ಅಧ್ಯಕ್ಷ ಪ್ರಕಾಶ್ ಬಾಬು ಹೇಳಿದ್ದಾರೆ.

ಭಾನುವಾರ ರಾತ್ರಿ ಶಬರಿಮಲೆ ದೇವಸ್ಥಾನದಲ್ಲಿ ಪ್ರತಿಭಟನಾಕಾರರನ್ನು ಬಂಧಿಸಲಾಯಿತು. ಸನ್ನಿಧಾಮಂನ ನದಪಾಥಾಲ್ ಪ್ರದೇಶದಲ್ಲಿ ಮತ್ತೆ ಪ್ರತಿಭಟನೆ ನಡೆದಿದ್ದು, ಪೊಲೀಸರ ನಿರ್ಬಂಧಗಳನ್ನು ವಿರೋಧಿಸಿ ನೂರಾರು ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಬರಿಮಲೆಯಲ್ಲಿ ಹೇರಲಾಗಿರುವ ನಿಷೇಧಾಜ್ಞೆಯನ್ನು ಹಿಂದಕ್ಕೆ ಪಡೆದು, ಭದ್ರತಾ ಪಡೆಗಳ ಸಂಖ್ಯೆಯನ್ನು ಕಡಿತಗೊಳಿಸಬೇಕು. ಅಲ್ಲದೆ ಶಬರಿಮಲೆಯಲ್ಲಿ ರಾತ್ರಿ ವೇಳೆ ತಂಗುವುದನ್ನು ನಿಷೇಧಿಸಿರುವ ಕ್ರಮವನ್ನೂ ಕೂಡ ಸರ್ಕಾರ ಹಿಂಪಡೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಇನ್ನು 10ರಿಂದ 50 ವರ್ಷದೊಳಗಿನ ಮಹಿಳೆಯರನ್ನು ದೇವಸ್ಥಾನಕ್ಕೆ ಪ್ರವೇಶಿಸಲು ಬಿಡುವುದಿಲ್ಲ. ಯಾವುದೇ ಕಾರಣಕ್ಕೂ ಸನ್ನಿಧಾನ ಬಿಟ್ಟು ತೆರಳಲ್ಲ ಎಂದು ಹಿಂದೂಪರ ಸಂಘಟನೆಗಳು ಪಟ್ಟು ಹಿಡಿದಿವೆ. ಇದು ಸರಕಾರ ಹಾಗೂ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ. ಹೀಗಾಗಿ ಶಬರಿಮಲೆಯಲ್ಲಿ ಯಾರೂ ರಾತ್ರಿ ಹೊತ್ತು ತಂಗಬಾರದು ಎಂದು ಕಠಿಣ ಆದೇಶ ಹೊರಡಿಸಿದೆ. ಆದರೆ ಆದೇಶದ ಹೊರತಾಗಿಯೂ ತಂಗಿದ್ದ ಅಯ್ಯಪ್ಪ ಭಕ್ತರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಹೀಗಾಗಿ ಅಯ್ಯಪ್ಪ ಭಕ್ತರು ಬೀದಿಗಿಳಿದು ಹೋರಾಡುತ್ತಿದ್ದಾರೆ.

Tags

Related Articles

Leave a Reply

Your email address will not be published. Required fields are marked *

Language
Close