Thursday, 28th March 2024

ಮಾರ್ಚ್ 23 ರಿಂದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭ

ಬೆಂಗಳೂರು: ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ (BIFF) 14ನೇ ಆವೃತ್ತಿಯು ಮುಂದಿನ ತಿಂಗಳ ಮಾರ್ಚ್ 23 ರಿಂದ ಆರಂಭವಾಗಲಿದೆ.

ಬೆಂಗಳೂರಲ್ಲಿ ಮುಖ್ಯಮಂತ್ರಿ ಅವರು ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋ ತ್ಸವ ಅಧಿಕೃತ ‘ಲಾಂಛನ’ ಬಿಡುಗಡೆ ಮಾಡಿ ಈ ಮಾಹಿತಿ ತಿಳಿಸಿದರು.

ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ಡಾ ಪುನೀತ್ ರಾಜ್‌ಕುಮಾರ್ ರಸ್ತೆ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ್ದ ಬೊಮ್ಮಾಯಿ ಕನ್ನಡ ನಟರು ಮತ್ತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಸದಸ್ಯರ ಸಮ್ಮುಖದಲ್ಲಿ ಲೋಗೋ ಬಿಡುಗಡೆ ಆಯಿತು. ಈ ಉತ್ಸವು ಮಾರ್ಚ್ 23ಕ್ಕೆ ಆರಂಭವಾಗಿ ಮಾ.30 ರವರೆಗೆ ನಡೆಯುವುದಾಗಿ ತಿಳಿಸಿದರು.

ಇನ್ನು ಚಲನ ಚಿತ್ರೋತ್ಸವಕ್ಕೆ ಸಂಬಂಧಿಸಿದಂತೆ ಬುಧವಾರ ಕಂದಾಯ ಸಚಿವರು ಆದ ಬಿಐಎಫ್‌ಎಫ್‌ನ ಸಂಘಟನಾ ಸಮಿತಿಯ ಅಧ್ಯಕ್ಷ ಆರ್ ಅಶೋಕ್ ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿ (KCA) ಅಧ್ಯಕ್ಷ ಅಶೋಕ್ ಕಶ್ಯಪ್ ಅಗತ್ಯ ಚರ್ಚೆಗಳಿಗಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಲಿದ್ದಾರೆ.

ಈ ವೇಳೆ ಚಿತ್ರೋತ್ಸವದ ಸಿದ್ಧತೆ, ಸಿನಿಮಾಗಳ ಪ್ರದರ್ಶನ ಸೇರಿದಂತೆ ಇನ್ನಿತರ ವ್ಯವಸ್ಥೆಗಳ ಬಗ್ಗೆ ನಿರ್ಧಾರಗಳು ಆಗಲಿವೆ ಎನ್ನ ಲಾಗಿದೆ. ಪ್ರಸ್ತಕ 14ನೇ ಆವೃತ್ತಿಯ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ವಿಭಾಗಗಳು ಮತ್ತು ಸ್ಪರ್ಧೆಗಳಲ್ಲಿ ಸುಮಾರು 300 ಚಲನಚಿತ್ರಗಳನ್ನು ಪ್ರದರ್ಶನಗೊಳ್ಳಲಿವೆ.

 

error: Content is protected !!