ಕರವೇ ಕಾರ್ಯಕರ್ತರ ಮೇಲೆ ಹಲ್ಲೆ

Posted In : ಕೊಪ್ಪಳ, ರಾಜ್ಯ

ಕೊಪ್ಪಳ: ಕನ್ನಡಿಗರಿಗೆ ಉದ್ಯೋಗ ನೀಡುವಂತೆ ಆಗ್ರಹಿಸಿ ಇಲ್ಲಿನ ಹೊಸಪೇಟೆ ರಸ್ತೆಯಲ್ಲಿರೋ ಕಲ್ಯಾಣಿ ಕಾರ್ಖಾನೆ ಮುಂದೆ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಕಾರ್ಖಾನೆ ಗುತ್ತಿಗೆದಾರರು ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಘಟನೆ ಸೋಮವಾರ ನಡೆದಿದೆ. 

 ಹಲ್ಲೆಗೊಳಗಾದವರನ್ನು ವಿಜಯ್ ಕುಮಾರ್, ಬಸವರಾಜ್ ಹಳ್ಳಿ  ಎಂಬುವುದಾಗಿ ಗುರುತಿಸಲಾಗಿದ್ದು, ಇವರನ್ನು ಕೊಪ್ಪಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.  

ಉದ್ಯೋಗ ನೀಡುವಂತೆ ಆಗ್ರಹಿಸಿ ಕರವೇ ಹಾಗೂ ಯುವಸೇನೆ ಕಾರ್ಯಕರ್ತರು ಕಲ್ಯಾಣಿ ಕಾರ್ಖಾನೆಯ ಗೇಟ್ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಸ್ಥಳೀಯ ಗುತ್ತಿಗೆದಾರರು ಮತ್ತು ಕರವೇ ಮುಖಂಡರ ಮಧ್ಯೆ ಮಾತಿನ ಚಕಮಕಿ ನಡೆದು ಕರವೇ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬುವುದಾಗಿ ತಿಳಿದುಬಂದಿದೆ. 

ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

four × three =

Tuesday, 23.01.2018

ಉತ್ತರಾಯಣ, ಶಿಶಿರಋತು, ಮಾಘ ಮಾಸ, ಶುಕ್ಲಪಕ್ಷ, ಷಷ್ಠಿ, ಮಂಗಳವಾರ, ನಿತ್ಯ ನಕ್ಷತ್ರ-ಉತ್ತರಾಭದ್ರ, ಯೋಗ-ಶಿವ, ಕರಣ-ತೈತಲೆ.

ರಾಹುಕಾಲಗುಳಿಕಕಾಲಯಮಗಂಡಕಾಲ
3.00-4.30 12.00-1.30 9.00-10.30

Read More

 

Tuesday, 23.01.2018

ಉತ್ತರಾಯಣ, ಶಿಶಿರಋತು, ಮಾಘ ಮಾಸ, ಶುಕ್ಲಪಕ್ಷ, ಷಷ್ಠಿ, ಮಂಗಳವಾರ, ನಿತ್ಯ ನಕ್ಷತ್ರ-ಉತ್ತರಾಭದ್ರ, ಯೋಗ-ಶಿವ, ಕರಣ-ತೈತಲೆ.

ರಾಹುಕಾಲಗುಳಿಕಕಾಲಯಮಗಂಡಕಾಲ
3.00-4.30 12.00-1.30 9.00-10.30

Read More

Back To Top