ಕಿರುಕುಳ ಆರೋಪ: ಸಚಿವರಿಗೆ ಪೇದೆ ಪತ್ರ

Posted In : ಕೊಪ್ಪಳ, ರಾಜ್ಯ

ಕೊಪ್ಪಳ: ಪಿ ಎಸ್ ಐ ಹಾಗೂ ಪೇದೆಗಳು ಕಿರುಕುಳ ನೀಡುತ್ತಿದ್ದರೆಂದು ಆರೋಪಿಸಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರೆಡ್ಡಿಗೆ ಪೊಲಿಸ್ ಪೇದೆ ಪತ್ರ ಬರೆದಿರುವುದು ಇದೀಗ ಪತ್ರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. 

ಕೊಪ್ಪಳ ನಗರ ಠಾಣೆಯ ಪೊಲೀಸ್ ಪೇದೆ ಚನ್ನಪ್ಪ ಪತ್ರ ಬರೆದಿದ್ದಾರೆ.

ಸ್ಥಳೀಯ ಶಾಸಕ ರಾಘವೇಂದ್ರ ಹಿಟ್ನಾಳ ಹೆಸರು ದುರ್ಬಳಕೆ ಮಾಡಿಕೊಂಡು ಮುನಿರಾಬಾದ್ ಪೊಲೀಸ್ ಠಾಣೆ ಪಿಎಸ್ ಐ ಜಯಪ್ರಕಾಶ್,  ಪೇದೆಗಳಾದ ಮಲ್ಲಪ್ಪ, ಪರಶುರಾಮ್, ಯಮನೂರಪ್ಪ ನಾಲ್ವರ ವಿರುದ್ಧ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಚನ್ನಪ್ಪ ಅವರು ಸಚಿವರಿಗೆ ಪತ್ರ ಬರೆದಿದ್ದಾರೆ. ಈ ಪತ್ರವು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿ ಹರಿದಾಡುತ್ತಿದೆ. 
 
ಚನ್ನಪ್ಪ ಅವರು ಕೆಲ ತಿಂಗಳ ಹಿಂದೆ ಮುನಿರಾಬಾದ್ ಠಾಣೆಯಿಂದ ಕೊಪ್ಪಳಕ್ಕೆ ವರ್ಗವಾವಣೆಗೊಂಡಿದ್ದರು. ಮುನಿರಾಬಾದ್ ಠಾಣೆಯಲ್ಲಿದ್ದಾಗ ಎಸ್ ಪಿ ಗೆ ಸುಳ್ಳು ಮಾಹಿತಿ ನೀಡಿ ಕಿರುಕುಳ ನೀಡುತ್ತಿದ್ದರೆಂದು ಪತ್ರದಲ್ಲಿ ಆರೋಪಿಸಿದ್ದಾರೆ. 

Leave a Reply

Your email address will not be published. Required fields are marked *

five × 1 =

Wednesday, 26.04.2017

ಶ್ರೀ ಹೇಮಲಂಬಿ ಸಂವತ್ಸರ, ಉತ್ತರಾಯಣ, ವಸಂತ -ಋತು, ಚೈತ್ರ ಮಾಸ, ಕೃಷ್ಣಪಕ್ಷ, ಅಮವಾಸ್ಯೆ, ನಿತ್ಯನಕ್ಷತ್ರ: ಅಶ್ವಿನಿ ಯೋಗ: ಪ್ರೀತಿ, ಕರಣ: ಚತುಷ್ಫಾನ್

ರಾಹುಕಾಲಗುಳಿಕಕಾಲಯಮಗಂಡಕಾಲ
12.00-01.30 10.30-12.00 07.30-09.00

Read More

 

Wednesday, 26.04.2017

ಶ್ರೀ ಹೇಮಲಂಬಿ ಸಂವತ್ಸರ, ಉತ್ತರಾಯಣ, ವಸಂತ -ಋತು, ಚೈತ್ರ ಮಾಸ, ಕೃಷ್ಣಪಕ್ಷ, ಅಮವಾಸ್ಯೆ, ನಿತ್ಯನಕ್ಷತ್ರ: ಅಶ್ವಿನಿ ಯೋಗ: ಪ್ರೀತಿ, ಕರಣ: ಚತುಷ್ಫಾನ್

ರಾಹುಕಾಲಗುಳಿಕಕಾಲಯಮಗಂಡಕಾಲ
12.00-01.30 10.30-12.00 07.30-09.00

Read More

Back To Top