About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ

ಭಾರತ್ ಬಂದ್‍ಗೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬೆಂಬಲ

ಬೆಂಗಳೂರು: ಸೋಮವಾರ ಕಾಂಗ್ರೆಸ್ ಕರೆ ನೀಡಿದ ಭಾರತ್ ಬಂದ್‍ಗೆ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬೆಂಬಲ ನೀಡಿದೆ. ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿಯ ನೌಕರರ ಸಂಘಟನೆ ಬೆಂಬಲ ನೀಡಿದ್ದರಿಂದ ಸಾರಿಗೆ ಸಂಚಾರ ಸ್ತಬ್ಧವಾಗಲಿದೆ.

ನಿರಂತರವಾಗಿ ತೈಲ ಬೆಲೆ ಗಗನಕ್ಕೇರುತ್ತಿದ್ದರೂ, ಕೇಂದ್ರ ಸರಕಾರ ಕಣ್ಣು ಮುಚ್ಚಿ ಕುಳಿತಿದೆ, ಹೀಗಾಗಿ ಕೇಂದ್ರಕ್ಕೆ ಬಿಸಿ ಮುಟ್ಟಿಸಲು ಇದೇ ಸೆಪ್ಟೆಂಬರ್ 10ರಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಭಾರತ್ ಬಂದ್‍ಗೆ ಕರೆ ನೀಡಿದೆ ಎಂದು ಕಾಂಗ್ರೆಸ್ ವಕ್ತಾರೆ ರಂದೀಪ್ ಸುರ್ಜೆವಾಲಾ ಸುದ್ದಿಗೋಷ್ಠಿ ನಡೆಸಿ ತಿಳಿಸಿದ್ದರು.

ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಪೆಟ್ರೋಲ್, ಡಿಸೇಲ್ ಹಾಗೂ ಅಡುಗೆ ಅನಿಲಗಳ ಬೆಲೆಗಳಿಂದಾಗಿ ಜನಸಾಮಾನ್ಯರು ತತ್ತರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ದೇಶವ್ಯಾಪಿ ಪ್ರತಿಭಟನೆ ನಡೆಸಿ ಭಾರತ್ ಬಂದ್ ನಡೆಸಲಾಗುತ್ತದೆ.

Tags

Related Articles

Leave a Reply

Your email address will not be published. Required fields are marked *

Language
Close