About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ

ಇಂದು ಉತ್ತರಕ್ಕೆ ಸಿಎಂ ಕುಮಾರಸ್ವಾಮಿ

ಬೆಂಗಳೂರು:  ಕೇವಲ ಮಂಡ್ಯ, ಹಾಸನ ಹಾಗೂ ರಾಮನಗರಕ್ಕೆ ಮಾತ್ರ ಮುಖ್ಯಮಂತ್ರಿ ಎಂಬ  ಟೀಕೆಗೆ ಒಳಗಾಗಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಇಂದು ಉತ್ತರ ಕನ್ನಡ ಪ್ರವಾಸ ಕೈಗೊಂಡಿದ್ದಾರೆ.

ಇಂದು ಬೆಳಗ್ಗೆ 11ಗಂಟೆಗೆ ಹುಬ್ಬಳ್ಳಿಯಲ್ಲಿ ಸುಸಜ್ಜಿತ ನ್ಯಾಯಾಲಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು,ಮ ಬಳಿಕ ಕೃಷ್ಣಾ ನದಿಗೆ ಬಾಗಿನ ಅರ್ಪಿಸಲಿದ್ದಾರೆ. ಹುಬ್ಬಳ್ಳಿಯಲ್ಲಿ ಕಳೆದ 2 ವರ್ಷಗಳಿಂದ ಉದ್ಘಾಟನೆಯಾಗದದೇ ಉಳಿದಿದ್ದ ನ್ಯಾಯಾಲಯ ಸಂಕೀರ್ಣವನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಇಂದು ಲೋಕಾರ್ಪಣೆ ಮಾಡುತ್ತಿದ್ದಾರೆ. ತಿಮ್ಮಸಾಗರ ಎಂಬಲ್ಲಿ ಹೈಕೋರ್ಟ್ ಮಾದರಿಯಲ್ಲೇ ನಿರ್ಮಾಣವಾಗಿರುವ ನೂತನ ನ್ಯಾಯಾಲಯವನ್ನು ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಬೆಳಗ್ಗೆ 11 ಗಂಟೆಗೆ ಉದ್ಘಾಟಿಸಲಿದ್ದಾರೆ. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಸಚಿವರಾದ ಆರ್.ವಿ. ದೇಶಪಾಂಡೆ, ಎಚ್.ಡಿ. ರೇವಣ್ಣ, ಕೃಷ್ಣ ಬೈರೇಗೌಡ ಭಾಗಿಯಾಗಲಿದ್ದಾರೆ.

ಬಳಿಕ ಮಧ್ಯಾಹ್ನ ಮೂರು ಗಂಟೆಗೆ ವಿಜಯಪುರದ ಬಸವನ ಬಾಗೇವಾಡಿ ತಾಲೂಕಿನ ಆಲಮಟ್ಟಿ ಡ್ಯಾಂಗೆ ತೆರಳಲಿರುವ ಸಿಎಂ, ಕೃಷ್ಣಾ ನದಿಗೆ ಬಾಗಿನ ಅರ್ಪಿಸಲಿದ್ದಾರೆ.

Tags

Related Articles

Leave a Reply

Your email address will not be published. Required fields are marked *

Language
Close