About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ

ಸರಕಾರ ಉರುಳಿಸಲು ಯಡಿಯೂರಪ್ಪ ದೆಹಲಿಗೆ ಹೋಗುತ್ತಾರೆ: ಸಿಎಂ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​. ಯಡಿಯೂರಪ್ಪ ಆಗಾಗ ದೆಹಲಿಗೆ ಹೋಗಿ ಮೈತ್ರಿ ಸರಕಾರವನ್ನು ಉರುಳಿಸಲು ಪ್ಲಾನ್‌ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, “ಯಡಿಯೂರಪ್ಪ ದೆಹಲಿಯಲ್ಲಿ ನಡೆಸುತ್ತಿರುವ ಕರಾಮತ್ತು ಏನೇನು ಎಂಬುದು ಗೊತ್ತು. ಸಮಯ ಬಂದಾಗ ಈ ಬಗ್ಗೆ ಹೇಳುತ್ತೇನೆ. ಸಾಲ ಮನ್ನಾ ಸೇರಿದಂತೆ ಯಾವ್ಯಾವ ಯೋಜನೆಗೆ ಅಡ್ಡಿ ಮಾಡುತ್ತಿದ್ದಾರೆ ಎಲ್ಲಾ ಗೊತ್ತು. ಆದರೆ ಇದಕ್ಕೆಲ್ಲ ನಾನು ಹೆದರುವುದಿಲ್ಲ. ರಾಜ್ಯದಲ್ಲಿ ಮೈತ್ರಿ ಸರ್ಕಾರ ಭದ್ರವಾಗಿದೆ. ಏನೇ ತಂತ್ರ, ಕುತಂತ್ರ ನಡೆಸಿದರೂ ಸರ್ಕಾರ ಉರುಳಿಸಲು ಸಾಧ್ಯವಿಲ್ಲ,” ಎಂದು ಹೇಳಿದ್ದಾರೆ.

ರಾಜ್ಯ ರಾಜಕಾರಣದಲ್ಲಿ ಕುಮಾರಸ್ವಾಮಿ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿದ್ದು, ಬಿಜೆಪಿ ಮತ್ತೆ ಆಪರೇಶನ್‌ ಕಮಲ ಮಾಡುತ್ತಿದೆ ಎಂಬ ಅನುಮಾನ ದೋಸ್ತಿಗಳಲ್ಲಿ ಕಾಡಲು ಆರಂಭಿಸಿದೆ ಎನ್ನಲಾಗಿದೆ.

Tags

Related Articles

Leave a Reply

Your email address will not be published. Required fields are marked *

Language
Close