About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ
Trending

ಪ್ರವಾಹ ಸಂತ್ರಸ್ತರಿಗೆ ಮುಖ್ಯಮಂತ್ರಿ ಅಭಯ

ಮನೆ ಕಳೆದುಕೊಂಡವರಿಗೆ ಎರಡು ಲಕ್ಷ, ಮೃತರ ಸಂಬಂಧಿಗಳಿಗೆ ಐದು ಲಕ್ಷ ರು ಪರಿಹಾರ ಘೋಷಿಸಿದ ಮುಖ್ಯಮಂತ್ರಿ

ಧಾರಕಾರ ಮಳೆಯಿಂದ ಕೊಡುಗು, ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮನೆಗಳನ್ನು ಕಳೆದುಕೊಂಡಿರುವ ಸಂತ್ರಸ್ತರಿಗೆ ಎರಡು ಲಕ್ಷ ರು. ಪರಿಹಾರ ಒದಗಿಸಲು ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ.

ಕೂಡಲೇ ಎಚ್‌ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ಹೆಲಿಕಾಪ್ಟರ್‌ ಏರಿದ ಮುಖ್ಯಮಂತ್ರಿ ಕುಮಾರಸ್ವಾಮಿ ಮಡಿಕೇರಿಯತ್ತ ಪಯಣ ಬೆಳೆಸಿದ್ದಾರೆ.

ಕೊಡಗು ಸೇರಿದಂತೆ ಅತಿವೃಷ್ಟಿ ಪೀಡಿತ ಜಿಲ್ಲೆಗಳ ಪರಿಸ್ಥಿತಿ, ರಕ್ಷಣೆ ಹಾಗೂ ಪರಿಹಾರ ಕಾರ್ಯಾಚರಣೆ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಹಮ್ಮಿಕೊಂಡಿದ್ದ ಉನ್ನತ ಮಟ್ಟದ ಸಭೆ ಕುರಿತು ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ.

“ಕೊಡಗು ಜಿಲ್ಲೆಯಲ್ಲಿ 800ಕ್ಕೂ ಹೆಚ್ಚು ಮನೆಗಳು ಸಂಪೂರ್ಣ ನಾಶವಾಗಿದ್ದು, ಸಂತ್ರಸ್ತರ ದಾಖಲೆಗಳು ನಾಶವಾಗಿದೆ. ತಕ್ಷಣವೇ ಅವುಗಳ ನಕಲು ಪ್ರತಿಗಳನ್ನು ನೀಡಲು ವ್ಯವಸ್ಥೆ ಮಾಡಬೇಕು. ಮನೆಗಳನ್ನು ಕಳೆದುಕೊಂಡ ಅರ್ಹ ಫಲಾನುಭವಿಗಳಿಗೆ 2 ಲಕ್ಷ ರು. ಪರಿಹಾರ ನೀಡಬೇಕು. ಮಳೆ ಪೀಡಿತ ಪ್ರದೇಶಗಳಲ್ಲಿ ಕಡಿತಗೊಂಡಿರುವ ವಿದ್ಯುತ್ ಸಂಪರ್ಕಗಳನ್ನು ಪತ್ತೆ ಹಚ್ಚಿ ಕೂಡಲೆ ವಿದ್ಯುತ್ ಪೂರೈಸಬೇಕು. ಗ್ಯಾಸ್, ಪೆಟ್ರೋಲ್ ಮತ್ತು ಡೀಸಲ್ ಪೂರೈಸಬೇಕು” ಎಂದು ಅಧಿಕಾರಿಗಳಿಗೆ ಸಿಎಂ  ಸೂಚನೆ ನೀಡಿದರು.

“ವಿಕೋಪದೊಂದಿಗೆ ಮಾನವ ನಿರ್ಮಿತ ಲೋಪದೋಷಗಳನ್ನು ಕೂಲಂಕುಷವಾಗಿ ಅಧ್ಯಯನ ನಡೆಸಿ, ಮುನ್ನೆಚರಿಕೆ ವಹಿಸಬೇಕು. ಪಶ್ಚಿಮಘಟ್ಟ ಭಾಗದಲ್ಲಿ ಭೂ ಪರಿವರ್ತನೆ ಕಾರ್ಯಗಳನ್ನು ಕೂಡಲೆ ಸ್ಥಗಿತಗೊಳಿಸಬೇಕು. ಮುಖ್ಯಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಹಿರಿಯ ಅಧಿಕಾರಿಗಳನ್ನೊಳಗೊಂಡ ಸಮಿತಿಯನ್ನು ರಚಿಸಿ ಪರಿಹಾರ ಹಾಗೂ ರಕ್ಷಣಾ ಕಾರ್ಯಾಚರಣೆಗೆ ಯಾವುದೇ ಆರ್ಥಿಕ ಮುಗ್ಗಟ್ಟು ಎದುರಾಗದಂತೆ ಎಚ್ಚರವಹಿಸಬೇಕು” ಎಂದು ಕುಮಾರಸ್ವಾಮಿ  ಸೂಚಿಸಿದರು.

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, “ಕೊಡಗು ಜಿಲ್ಲೆಗೆ 10 ವೈದ್ಯಕೀಯ ಮತ್ತು ನರ್ಸಿಂಗ್ ಸಿಬ್ಬಂದಿಯನ್ನು ಈಗಾಗಲೇ ಒದಗಿಸಲಾಗಿದೆ. ಶಿಶು ಆಹಾರ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯ ಮುಕೊಡ್ಲು ಗ್ರಾಮದಲ್ಲಿ ಗರ್ಭಿಣಿ ಮಹಿಳೆ ಸೇರಿದಂತೆ ಹಲವು ಜನ ಸಿಲುಕಿರುವ ಬಗ್ಗೆ ಮಾಹಿತಿ ಇದ್ದು, ಅವರನ್ನು ರಕ್ಷಿಸಲು ಸೇನಾ ತಂಡ ಈಗಾಗಲೇ ತರಳಿ ರಕ್ಷಣಾ ಕಾರ್ಯದಲ್ಲಿ ತೊಡಗಿದೆ” ಎಂದು ತಿಳಿಸಿದರು.

3500 ಮಂದಿ ರಕ್ಷಣೆ

“ಮಳೆಯಿಂದ ಸೃಷ್ಟಿಯಾಗಿರುವ ಪ್ರವಾಹದಲ್ಲಿ ಸಿಲುಕಿರುವವರಲ್ಲಿ 3500 ಜನರನ್ನು ರಕ್ಷಿಸಲಾಗಿದೆ. ರಕ್ಷಣಾ ಕಾರ್ಯದಲ್ಲಿ ಎನ್‌ಡಿಆರ್‌ಎಫ್, ಸಿವಿಲ್ ಡಿಫೆನ್‌ಸ್, ಅಗ್ನಿಶಾಮಕ ದಳ, ಭೂ ಸೇನೆಯ ಡೋಗ್ರಾ ರೆಜಿಮೆಂಟ್ , ಎನ್‌ಸಿಸಿಯ 200 ವಾಯುಪಡೆಯ ತಂಡ ಸೇರಿದಂತೆ ರಕ್ಷಣ ಕಾರ್ಯದಲ್ಲಿ ಒಟ್ಟು 948 ಜನ ತೊಡಗಿದ್ದಾರೆ. ರಕ್ಷಣ ಕಾರ್ಯಕ್ಕೆ ಅಗತ್ಯವಿರುವ ವಾಹನಗಳನ್ನು ಬಾಡಿಗೆ ಪಡೆಯಲು ಸೂಚಿಸಲಾಗಿದೆ” ಎಂದು ಮುಖ್ಯಮಂತ್ರಿ ವಿವರಿಸಿದರು.

“ಶುಕ್ರವಾರ ಸಂಜೆ ದಕ್ಷಿಣ ಕನ್ನಡ, ಕೊಡಗು ಗಡಿಭಾಗದ ಜೋಡುಪಾಲ ಎಂಬಲ್ಲಿ ಗುಡ್ಡ ಕುಸಿತದಿಂದ ಸಿಲುಕಿಕೊಂಡಿದ್ದ 347 ಜನರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ನೇತೃತ್ವದ ತಂಡ ರಕ್ಷಣೆ ಮಾಡಿದೆ. ಕೊಡಗು ಭಾಗದಲ್ಲೂ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ” ಕುಮಾರಸ್ವಾಮಿ ಹೇಳಿದ್ದಾರೆ.

“ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ ಕಾಫಿ ಹಾಗೂ ಅಡಿಕೆಗೆ ಕೊಳೆ ರೋಗ ಕಾಣಿಸಿಕೊಂಡಿದೆ. ಕಾಫಿ ನಷ್ಟ ಅಂದಾಜು ಮಾಡಲು ಸಂಬಂಧಿಸಿದಂತೆ ಹೆಚ್ಚುವರಿ ಅಧಿಕಾರಿಗಳನ್ನು ನಿಯೋಜಿಸುವಂತೆ ಕಾಫಿ ಮಂಡಳಿಗೆ ಪತ್ರ ಬರೆಲಾಗುವುದು” ಎಂದು ಸ್ವಾಮಿ ತಿಳಿಸಿದರು.

ಅಗತ್ಯಬಿದ್ದರೆ ಹೆಚ್ಚಿನ ಗಂಜಿ ಕೇಂದ್ರಗಳ ಸ್ಥಾಪನೆ
“ಮಳೆ ಪೀಡಿತ ಪ್ರದೇಶಗಳಲ್ಲಿ 31 ಗಂಜಿ ಕೇಂದ್ರಗಳನ್ನು ತೆರದಿದ್ದು, 2,250 ಜನರು ಆಶ್ರಯ ಪಡೆದಿದ್ದಾರೆ. ಅಗತ್ಯವಿದ್ದಲ್ಲಿ ಇನ್ನೂ ಹೆಚ್ಚಿನ ಗಂಜಿ ಕೇಂದ್ರಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು” ಎಂದು ಸಿಎಂ ಕುಮಾರಸ್ವಾಮಿ ಭರವಸೆ ನೀಡಿದರು.

ಎಟಿಎಂಗಳಲ್ಲಿ ನಗದು ಕೊರತೆಯನ್ನು ನೀಗಿಸಲು ಎಲ್ಲ ಬ್ಯಾಂಕುಗಳ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲು ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿಲಾಗಿದೆ ಎಂದರು.

Tags

Related Articles

Leave a Reply

Your email address will not be published. Required fields are marked *

Language
Close