About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ
Trending

ಕುಕ್ಕೆಯಲ್ಲಿ ತುಲಾಭಾರ ಸೇವೆ ಸಲ್ಲಿಸಿದ ಮುಖ್ಯಮಂತ್ರಿ (ವಿಡಿಯೊ)

ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಕುಮಾರಸ್ವಾಮಿ, ದೇವರ ದರ್ಶನ ಪಡೆದಿದ್ದಾರೆ. ಈ ವೇಳೆ ಒಣದ್ರಾಕ್ಷಿಯಿಂದ ತುಲಾಭಾರ ಸೇವೆ ಸಲ್ಲಿಸಿ, ಆಶ್ಲೇಷ ಬಲಿ ಮುಗಿಸಿ ಅನ್ನ ಪ್ರಸಾದ ಸ್ವೀಕರಿಸಿದರು.

ಕುಕ್ಕೆ ಸುಬ್ರಹ್ಮಣ್ಯಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿರುವ ಕುಮಾರಸ್ವಾಮಿ, ಮಳೆಯಿಂದಾಗಿ ಬದಲಿ ಮಾರ್ಗದಲ್ಲಿ ಸಂಚರಿಸಬೇಕಾಯಿತು. ಮಳೆಗೆ ಪುತ್ತೂರು ಬಳಿ ಉದನೆ ಎಂಬಲ್ಲಿ ಮಾರ್ಗ ಸಂಚಾರ ಬಂದ್ ಆಗಿರುವುದರಿಂದ ಸುಳ್ಯ, ಜಾಲ್ಸೂರು ಮಾರ್ಗವಾಗಿ ಸಿಎಂ ಸುಬ್ರಹ್ಮಣ್ಯಕ್ಕೆ ಆಗಮಿಸಿದರು.

ಧರ್ಮಸ್ಥಳ ದೇಗುಲಕ್ಕೆ ಭೇಟಿ ನೀಡಿ ಮಾತನಾಡಿದ ಸಿಎಂ, ಶ್ರಾವಣ ಮಾಸದ ಸೋಮವಾರ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದಿರುವುದಾಗಿ ತಿಳಿಸಿದರು. ಕುಮಾರಸ್ವಾಮಿ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ 82 ದಿನಗಳಲ್ಲಿ 40 ದೇವಸ್ಥಾನಗಳಿಗೆ ಭೇಟಿ‌ ನೀಡಿದ್ದಾರೆ. ‘ನನ್ನ ಮೇಲೆ ಬಿದ್ದಿರುವ  ಕೆಟ್ಟ ದೃಷ್ಟಿ ನಿವಾರಣೆಗೆ ದೇವರ ದರ್ಶನ ಮಾಡುತ್ತಿದ್ದೇನೆ’ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಇನ್ನು ಇದೇ ವೇಳೆ ಬೆಂಗಳೂರು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ನಿಂದ ಬಿ ಫಾರ್ಮ್ ನೀಡುವ ಅಭ್ಯರ್ಥಿಗಳ ಹೆಸರಿನಲ್ಲಿ ಪೂಜೆ ಮಾಡಿಸಿದರು.

Related Articles

Leave a Reply

Your email address will not be published. Required fields are marked *

Language
Close