About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ
Trending

ಶಾಸಕಿ ಲಕ್ಷ್ಮೀ ಬಣಕ್ಕೆ ಗೆಲುವು, ಭಿನ್ನಾಭಿಪ್ರಾಯ ಸುಖಾಂತ್ಯ

ಜಿಲ್ಲಾ ಕಾಂಗ್ರೆಸ್‍ನಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ: ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಸ್ಪಷ್ಟನೆ

ಬೆಳಗಾವಿ: ಪಿಎಲ್‍ಡಿ ಬ್ಯಾಂಕ್ ಚುನಾವಣೆಯಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಬಣಕ್ಕೆ ಗೆಲುವಾಗಿದೆ.

ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷರಾಗಿ ಮಹಾದೇವ್ ಪಾಟೀಲ್ ಅವಿರೋಧವಾಗಿ ಆಯ್ಕೆಯಾಗಿದ್ದು, ಉಪಾಧ್ಯಕ್ಷ ಸ್ಥಾನಕ್ಕೂ ಲಕ್ಷ್ಮೀ ಬಣದಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಧಾನದ ಬಳಿಕ ಜಾರಕಿಹೊಳಿ ಬೆಂಬಲಿಗರು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಲಕ್ಷ್ಮೀ ಬಣದಿಂದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇನ್ನು ಇದೇ ವೇಳೆ ಜಿಲ್ಲಾ ಕಾಂಗ್ರೆಸ್‍ನಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಸರ್ಕೀಟ್ ಹೌಸ್ ನಲ್ಲಿ ಕಾಂಗ್ರೆಸ್ ಜಂಟಿ ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಸ್ಪಷ್ಟಪಡಿಸಿದರು. ಸೌಹಾರ್ದತೆಯಿಂದ ಎಲ್ಲವೂ ಬಗೆಹರಿದಿದೆ. ಭಿನ್ನಾಭಿಪ್ರಾಯದಿಂದ ಚುನಾವಣೆ ಮುಂದೂಡಿಕೆಯಾಗಿತ್ತು. ವರಿಷ್ಠರ ಸೂಚನೆಯಂತೆ ಸಮಸ್ಯೆ ಬಗೆಹರಿದಿದೆ. ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಇಬ್ಬರನ್ನೂ ಬಿಟ್ಟು ಬೇರೆ ಯಾರೂ ನಾಮಪತ್ರ ಸಲ್ಲಿಸಿಲ್ಲ. ಹೀಗಾಗಿ ಇಬ್ಬರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಬ್ಬರಿಗೂ ಅಭಿನಂದನೆಗಳನ್ನು ಸಲ್ಲಿಸಿದರು. ಇದೇ ವೇಳೆ ಆಯ್ಕೆಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಸತೀಶ್ ಜಾರಕಿಹೊಳಿ, ಖಂಡ್ರೆ ನೇತೃತ್ವದಲ್ಲಿ ಸಮಸ್ಯೆ ಬಗೆಹರಿದಿದೆ. ಪಕ್ಷದ ಹಿತದೃಷ್ಟಿಯಿಂದ ಒಮ್ಮತದ ನಿರ್ಧಾರ ಕೈಗೊಂಡಿದ್ದೇವೆ. ನಮ್ಮಲ್ಲಿ ಯಾವುದೇ ಬಣವಿಲ್ಲ, ಕಾಂಗ್ರೆಸ್ ಪಕ್ಷದ ಹಿತ ಮುಖ್ಯವಾಗಿದ್ದು, ಲೋಕಸಭೆ ಚುನಾವಣೆಯನ್ನು ಎಲ್ಲರೂ ಒಗ್ಗಟ್ಟಿನಿಂದ ಎದುರಿಸಲಿದ್ದೇವೆ ಎಂದರು.

ಇನ್ನು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ವಿವಾದ ಸುಖಾಂತ್ಯ ಸಂತಸ ತಂದಿದೆ. ಎಲ್ಲವೂ ದೇವರು ನೋಡಿಕೊಳ್ಳುತ್ತಾನೆ. ವೈಯಕ್ತಿಕ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಲ್ಲ ಎಂದು ಹೇಳಿದರು.

Tags

Related Articles

Leave a Reply

Your email address will not be published. Required fields are marked *

Language
Close