ಎಲ್‌ಒಸಿಯಲ್ಲಿ ಪಾಕ್ ಅಪ್ರಚೋದಿತ ಗುಂಡಿನ ದಾಳಿ; 3 ನಾಗರಿಕರ ಸಾವು
ಕೊಟ್ಪಿ, ಮುಜಾಫರ್‌ಬಾದ್, ಬಹವಲ್ಪುರ್ ಬಳಿ ಏರ್‌ಸ್ಟ್ರೈಕ್ ನಡೆದಿದೆ. ಭಾರತದ ದಾಳಿಯನ್ನು ಖಚಿತಪಡಿಸಿರುವ ಪಾಕಿಸ್ತಾನ, ಭಾರತೀಯ ದಾಳಿಯಲ್ಲಿ 6 ಸ್ಥಳಗಳು ಹಾನಿಗೊಳಗಾಗಿವೆ ಮತ್ತು 8 ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಿದೆ. ಲಷ್ಕರ್ ಎ ತಯಬಾ ಮತ್ತು ಜೈಷ್ ಎ ಮೊಹಮ್ಮದ್ ಉಗ್ರ ಸಂಘಟನೆಗಳ ನೆಲೆಗಳನ್ನು ಗುರಿಯಾಗಿಸಿಕೊಂಡು ಭಾರತದಿಂದ ದಾಳಿ ನಡೆಸಲಾಗಿತ್ತು.

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಪಾಕಿಸ್ತಾನ ಕದನ ವಿರಾಮ ನಿಯಮ ಉಲ್ಲಂಘಿಸಿ ಮಂಗಳವಾರ ತಡರಾತ್ರಿ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಕನಿಷ್ಠ ಮೂವರು ಭಾರತೀಯರು ಸಾವನ್ನಪ್ಪಿದ್ದಾರೆ ಎಂದು ಭಾರತೀಯ ಸೇನೆ ಬುಧವಾರ ಬೆಳಗ್ಗೆ ತಿಳಿಸಿದೆ. ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದನಾ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ಮಂಗಳವಾರ ತಡರಾತ್ರಿ ಪಾಕ್ ಆಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದಲ್ಲಿರುವ ಉಗ್ರರ ನೆಲೆಗಳನ್ನು ಗುರಿಯಾಗಿಸಿಕೊಂಡು(Operation Sindoor) ನಿರ್ದಿಷ್ಟ ದಾಳಿ ನಡೆಸಿತ್ತು. ಇದರ ಬೆನ್ನಲ್ಲೇ ಪಾಕಿಸ್ತಾನ ಎಲ್‌ಒಸಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ.
ಸದ್ಯ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಜಮ್ಮು, ಸಾಂಬಾ, ಕಥುವಾ, ರಾಜೌರಿ ಮತ್ತು ಪೂಂಚ್‌ನಲ್ಲಿರುವ ಎಲ್ಲಾ ಶಾಲೆಗಳು, ಕಾಲೇಜುಗಳು ಮತ್ತು ಶಿಕ್ಷಣ ಸಂಸ್ಥೆಗಳು ಇಂದು ಮುಚ್ಚಲ್ಪಡುತ್ತವೆ. ಪಠಾಣ್‌ಕೋಟ್‌ನಲ್ಲಿರುವ ಎಲ್ಲಾ ಶಾಲೆಗಳು 72 ಗಂಟೆಗಳ ಕಾಲ ಮುಚ್ಚಲ್ಪಟ್ಟಿದೆ.
ಕೊಟ್ಪಿ, ಮುಜಾಫರ್‌ಬಾದ್, ಬಹವಲ್ಪುರ್ ಬಳಿ ಏರ್‌ಸ್ಟ್ರೈಕ್ ನಡೆದಿದೆ. ಭಾರತದ ದಾಳಿಯನ್ನು ಖಚಿತಪಡಿಸಿರುವ ಪಾಕಿಸ್ತಾನ, ಭಾರತೀಯ ದಾಳಿಯಲ್ಲಿ 6 ಸ್ಥಳಗಳು ಹಾನಿಗೊಳಗಾಗಿವೆ ಮತ್ತು 8 ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಿದೆ. ಲಷ್ಕರ್ ಎ ತಯಬಾ ಮತ್ತು ಜೈಷ್ ಎ ಮೊಹಮ್ಮದ್ ಉಗ್ರ ಸಂಘಟನೆಗಳ ನೆಲೆಗಳನ್ನು ಗುರಿಯಾಗಿಸಿಕೊಂಡು ಭಾರತದಿಂದ ದಾಳಿ ನಡೆಸಲಾಗಿತ್ತು.
ನಿರ್ದಿಷ್ಟ ದಾಳಿ ನಡೆಸಿರುವ ಬಗ್ಗೆ ಭಾರತೀಯ ಸೇನೆಯು ಟ್ವಿಟರ್ ಎಕ್ಸ್‌ನಲ್ಲಿ ಟ್ವೀಟ್ ಮಾಡಿದ್ದು, ʼಆಪರೇಷನ್ ಸಿಂಧೂರʼ ಎಂಬ ಚಿತ್ರದ ಪೋಸ್ಟ್ ಜತೆಗೆ ಹ್ಯಾಶ್‌ಟ್ಯಾಗ್ ಪಹಲ್ಗಾಮ್ ಭಯೋತ್ಪಾದನಾ ದಾಳಿ ನ್ಯಾಯ ದೊರಕಿತು ಜೈ ಹಿಂದ್ ಎಂದು ಬರೆದಿದೆ. ದಾಳಿಗಳಲ್ಲಿ ಮೂವತ್ತಕ್ಕೂ ಹೆಚ್ಚು ಉಗ್ರರು ಸತ್ತಿದ್ದಾರೆ ಎಂಬುದಾಗಿ ಕೆಲ ವರದಿಗಳು ಹೇಳಿವೆ.