ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Temple Wall Collapse: ಆಂಧ್ರಪ್ರದೇಶದಲ್ಲಿ ಘೋರ ದುರಂತ; ದೇವಾಲಯದ ಗೋಡೆ ಕುಸಿದು 8 ಮಂದಿ ಸಾವು

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ (Temple Wall Collapse) ಸಿಂಹಾಚಲಂ ದೇವಾಲಯದಲ್ಲಿ ಹೊಸದಾಗಿ ನಿರ್ಮಿಸಲಾದ ಗೋಡೆ ಕುಸಿದು ಎಂಟು ಜನರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಹಹಲವರಿಗೆ ಗಂಭೀರ ಗಾಯಗಳಾಗಿವೆ. ಈ ಗೋಡೆಯನ್ನು 20 ದಿನಗಳ ಹಿಂದೆ ನಿರ್ಮಿಸಲಾಗಿದೆ ಎಂದು ವರದಿಯಾಗಿದೆ.

ದೇವಾಲಯದ ಗೋಡೆ ಕುಸಿದು 8 ಮಂದಿ ಸಾವು

Profile Vishakha Bhat Apr 30, 2025 7:52 AM

ಹೈದರಾಬಾದ್:‌ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ (Temple Wall Collapse) ಸಿಂಹಾಚಲಂ ದೇವಾಲಯದಲ್ಲಿ ಹೊಸದಾಗಿ ನಿರ್ಮಿಸಲಾದ ಗೋಡೆ ಕುಸಿದು ಎಂಟು ಜನರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಹಹಲವರಿಗೆ ಗಂಭೀರ ಗಾಯಗಳಾಗಿವೆ.ಬುಧವಾರ ಮುಂಜಾನೆ ಚಂದನೋತ್ಸವಂ ಹಬ್ಬದ ಸಂದರ್ಭದಲ್ಲಿ 20 ಅಡಿ ಉದ್ದದ ಗೋಡೆ ಕುಸಿದಿದೆ. ಈ ಗೋಡೆಯನ್ನು 20 ದಿನಗಳ ಹಿಂದೆ ನಿರ್ಮಿಸಲಾಗಿದೆ ಎಂದು ವರದಿಯಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ತಂಡಗಳು ತಕ್ಷಣವೇ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ.

ಗಾಯಗೊಂಡ ಭಕ್ತರನ್ನು ಚಿಕಿತ್ಸೆಗಾಗಿ ಕಿಂಗ್ ಜಾರ್ಜ್ ಆಸ್ಪತ್ರೆಗೆ (KGH) ಸಾಗಿಸಲಾಗಿದೆ. ಆಂಧ್ರಪ್ರದೇಶದ ಗೃಹ ಸಚಿವೆ ಮತ್ತು ವಿಪತ್ತು ನಿರ್ವಹಣಾ ಸಚಿವೆ ಅನಿತಾ ವಂಗಲಪುಡಿ ಅವರು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯ ಮೇಲ್ವಿಚಾರಣೆಗಾಗಿ ಸ್ಥಳಕ್ಕೆ ಭೇಟಿ ನೀಡಿದರು. ಸಿಂಹಾಚಲಂ ದೇವಾಲಯದ ಗೋಡೆ ಕುಸಿತಕ್ಕೆ ಆ ಪ್ರದೇಶದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಮಣ್ಣು ಸಡಿಲಗೊಂಡಿರುವುದು ಕಾರಣ ಎಂದು ಪ್ರಾಥಮಿಕ ವರದಿಗಳು ಸೂಚಿಸಿವೆ ಎಂದು ಅವರು ಹೇಳಿದ್ದಾರೆ.

ಈ ಸುದ್ದಿಯನ್ನೂ ಓದಿ: Building Collapse: ದೆಹಲಿಯ ಮುಸ್ತಫಾಬಾದ್‌ನಲ್ಲಿ ಕಟ್ಟಡ ಕುಸಿತ; ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ವಿಡಿಯೋ

ಚಂದನೋತ್ಸವಂ ಹಬ್ಬ ಅಥವಾ ಚಂದನ ಯಾತ್ರೆಯನ್ನು ಏಪ್ರಿಲ್ 30 ರಂದು ಆಚರಿಸಲಾಗುತ್ತದೆ. ಭಕ್ತರು ವರ್ಷಪೂರ್ತಿ ಶ್ರೀಗಂಧದ ಲೇಪದಿಂದ ಮುಚ್ಚಿದ ನರಸಿಂಹ ದೇವರನ್ನು ನೋಡಲು ಸಾಧ್ಯವಾಗುವ ಏಕೈಕ ಸಮಯ ಇದು. ಆನುವಂಶಿಕ ಟ್ರಸ್ಟಿ ಪೂಸಪತಿ ಅಶೋಕ್ ಗಜಪತಿ ರಾಜು ಅವರು ವರಾಹ ಲಕ್ಷ್ಮಿ ನರಸಿಂಹ ಸ್ವಾಮಿಯ ಮೊದಲ ದರ್ಶನಕ್ಕಾಗಿ ದೇವಾಲಯವನ್ನು ಪ್ರವೇಶಿಸುವ ಸ್ವಲ್ಪ ಸಮಯದ ಮೊದಲು ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.