ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Narendra Modi: ಕೆಟ್ಟ ರಸ್ತೆಗಳು, ಟ್ರಾಫಿಕ್‌ ಸಮಸ್ಯೆ; ಪ್ರಧಾನಿ ಮೋದಿಗೆ ಬೆಂಗಳೂರಿನ 5 ವರ್ಷದ ಬಾಲಕಿ ಬರೆದ ಪತ್ರ ವೈರಲ್‌!

ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಿದ ಹಿನ್ನೆಲೆಯಲ್ಲಿ ನಗರದ 5 ವರ್ಷದ ಬಾಲಕಿ ಪ್ರಧಾನಿಗೆ ಪತ್ರ ಬರೆದಿದ್ದಾಳೆ. ರಾಜಧಾನಿಯಲ್ಲಿನ ರಸ್ತೆಗಳ ದುಸ್ಥಿತಿ ಹಾಗೂ ಸಂಚಾರ ದಟ್ಟಣೆ ಸಮಸ್ಯೆ ಬಗ್ಗೆ ಗಮನ ಸೆಳೆದಿದ್ದಾಳೆ. ಈ ಸಮಸ್ಯೆಗಳ ಪರಿಹರಿಸಲು ಸಹಾಯ ಮಾಡಬೇಕು ಎಂದು ಬಾಲಕಿ ಕೋರಿದ್ದಾಳೆ. ಸದ್ಯ ಈ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ.

ಪ್ರಧಾನಿ ಮೋದಿಗೆ ಬೆಂಗಳೂರಿನ 5 ವರ್ಷದ ಬಾಲಕಿ ಬರೆದ ಪತ್ರ ವೈರಲ್‌!

Prabhakara R Prabhakara R Aug 10, 2025 5:59 PM

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿನಲ್ಲಿ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ, ಮೆಟ್ರೋ 3ನೇ ಹಂತದ ಯೋಜನೆಗೆ ಶಂಕುಸ್ಥಾಪನೆ ಹಾಗೂ ಮೂರು ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದ್ದಾರೆ. ಇನ್ನು ಬೆಂಗಳೂರಿಗೆ ಮೋದಿ (Narendra Modi) ಆಗಮಿಸಿದ ಹಿನ್ನೆಲೆಯಲ್ಲಿ ನಗರದ 5 ವರ್ಷದ ಬಾಲಕಿ ಪ್ರಧಾನಿಗೆ ಪತ್ರ ಬರೆದಿದ್ದು, ರಾಜಧಾನಿಯಲ್ಲಿನ ರಸ್ತೆಗಳ ದುಸ್ಥಿತಿ (Bengaluru Roads) ಹಾಗೂ ಸಂಚಾರ ದಟ್ಟಣೆ ಸಮಸ್ಯೆ (traffic problems) ಬಗ್ಗೆ ಗಮನ ಸೆಳೆದಿದ್ದಾಳೆ. ಸದ್ಯ ಈ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ.

ಬೆಂಗಳೂರು ನಿವಾಸಿ ಅಭಿರೂಪ್ ಚಟರ್ಜಿ ಎಂಬುವವರು, ತಮ್ಮ 5 ವರ್ಷದ ಪುತ್ರಿ ಬರೆದ ಪತ್ರವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಪ್ರಧಾನಿ ಮೋದಿ ಬೆಂಗಳೂರು ಭೇಟಿ ಸಂದರ್ಭದಲ್ಲಿ ಹಲವು ದಿನಗಳಿಂದ ಎದುರಿಸುತ್ತಿರುವ ಸಮಸ್ಯೆ ಪರಿಹಾರಕ್ಕಾಗಿ ನನ್ನ ಪುತ್ರಿ ಪತ್ರದ ಮೂಲಕ ಪ್ರಯತ್ನಿಸಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

ಬಾಲಕಿಯ ಬರೆದ ಪತ್ರದಲ್ಲಿ ಏನಿದೆ?

ನರೇಂದ್ರ ಮೋದೀಜಿ, ಇಲ್ಲಿ ಭಾರಿ ಟ್ರಾಫಿಕ್ ಸಮಸ್ಯೆ ಇದೆ. ಇದರಿಂದ ನಾವು ಶಾಲೆಗೆ ಹೋಗಲು ತುಂಬಾ ತಡವಾಗುತ್ತಿದೆ, ಜತೆಗೆ ಆಫೀಸ್ ತೆರಳುವವರಿಗೂ ಲೇಟ್‌ ಆಗುತ್ತಿದೆ. ಹಾಗೆಯೇ ಇಲ್ಲಿನ ರಸ್ತೆ ಬಹಳ ಕೆಟ್ಟದಾಗಿದ್ದು, ಈ ಸಮಸ್ಯೆಗಳನ್ನು ಪರಿಹರಿಸಲು ದಯವಿಟ್ಟು ಸಹಾಯಮಾಡಿ ಎಂದು 5 ವರ್ಷದ ಬಾಲಕಿ ಆರ್ಯ ಪತ್ರ ಬರೆದಿದ್ದಾರೆ.



ಬೆಂಗಳೂರು ಕೆಲ ಭಾಗದಲ್ಲಿನ ಟ್ರಾಫಿಕ್ ಸಮಸ್ಯೆ ಕುರಿತು ಹಲವರು ಧ್ವನಿ ಎತ್ತಿದ್ದಾರೆ. ಈ ಬಾಲಕಿ ಪತ್ರದ ಅಭಿಪ್ರಾಯ ನಮ್ಮದು. ಪ್ರತಿ ದಿನ ಟ್ರಾಫಿಕ್ ಸಮಸ್ಯೆಯಿಂದ ತೀವ್ರ ಸಮಸ್ಯೆ ಎದುರಿಸುತ್ತಿದ್ದೇವೆ. ರಸ್ತೆಗಳು ಹಾಳಾಗಿವೆ. ಜತೆಗೆ ವಾಹನಗಳ ಸಂಖ್ಯೆ ಹೆಚ್ಚಾಗಿದೆ. ಸಣ್ಣ ರಸ್ತೆಗಳು, ಅವೈಜ್ಞಾನಿಕ ಫ್ಲೈಓವರ್ ಸೇರಿ ಹಲವು ಸಮಸ್ಯೆಗಳು ಬೆಂಗಳೂರಿನ ಕೆಲ ಭಾಗದ ಟ್ರಾಫಿಕ್ ಸಮಸ್ಯೆ ಹೆಚ್ಚಿಸುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಈ ಪತ್ರಕ್ಕೆ ಕೆಲವರು ವಿರೋಧ ವ್ಯಕ್ತಪಡಿಸಿದ್ದು, ಇದು ಬೆಂಗಳೂರಿಗೆ ಮಸಿ ಬಳಿಯುವ ಪ್ರಯತ್ನ ಎಂದಿದ್ದಾರೆ.