ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Actor Darshan: ನಟ ದರ್ಶನ್‌, ವಿಜಯಲಕ್ಷ್ಮಿಗೆ ಮತ್ತೊಂದು ಕೋರ್ಟ್‌ ಸಮನ್ಸ್‌

ಬೇರೊಂದು ಪ್ರಕರಣದ ವಿಚಾರಣೆಯು ಮೈಸೂರು ಜಿಲ್ಲೆ ಟಿ.‌ನರಸೀಪುರ ನ್ಯಾಯಾಲಯದಲ್ಲಿ ನಡೆಯುತ್ತಿದ್ದು, ಇದೀಗ ನ್ಯಾಯಾಲಯವು ನಟ ದರ್ಶನ್ (Actor Darshan) ಹಾಗೂ ವಿಜಯಲಕ್ಷ್ಮಿ ಅವರಿಗೆ ಸಮನ್ಸ್ ಜಾರಿ ಮಾಡಿದ್ದು ಜುಲೈ 4 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿದೆ.

ನಟ ದರ್ಶನ್‌, ವಿಜಯಲಕ್ಷ್ಮಿಗೆ ಮತ್ತೊಂದು ಕೋರ್ಟ್‌ ಸಮನ್ಸ್‌

ಹರೀಶ್‌ ಕೇರ ಹರೀಶ್‌ ಕೇರ May 23, 2025 12:35 PM

ಬೆಂಗಳೂರು: ರೇಣುಕಾ ಸ್ವಾಮಿ (Renuka Swamy murder Case) ಕೊಲೆ ಪ್ರಕರಣದಲ್ಲಿ ಜಾಮೀನು (Bail) ಪಡೆದಿರುವ ನಟ ದರ್ಶನ್​ಗೆ (Actor Darshan) ಇದೀಗ ಮತ್ತೊಂದು ಪ್ರಕರಣದಲ್ಲಿ ಸಮನ್ಸ್ ಜಾರಿ ಆಗಿದೆ. ದರ್ಶನ್ ಮಾತ್ರವೇ ಅಲ್ಲದೆ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರಿಗೂ ಸಹ ಸಮನ್ಸ್ ಜಾರಿ ಮಾಡಲಾಗಿದೆ. ದರ್ಶನ್ ತಮ್ಮ ಮೈಸೂರು ಫಾರಂ ಹೌಸ್​ನಲ್ಲಿ ವಿದೇಶಿ ಬಾತುಕೋಳಿ ಸಾಕಿದ್ದರು. ಈ ಬಗ್ಗೆ ಈ ಹಿಂದೆ ಪ್ರಕರಣ ದಾಖಲಾಗಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮನ್ಸ್ ಜಾರಿ ಆಗಿದೆ.

‘ಬಾರ್‌ ಹೆಡೆಡ್‌ ಗೂಸ್‌’ ಎಂಬ ಬಾತುಕೋಳಿಗಳನ್ನು ಸಾಕಿದ್ದ ದರ್ಶನ್ ಅವರ ಕೆಂಪಯ್ಯನ ಹುಂಡಿಯಲ್ಲಿರುವ ತೋಟದ ಮನೆಯ ಮೇಲೆ ದಾಳಿ ಮಾಡಿದ್ದ ಅರಣ್ಯಾಧಿಕಾರಿಗಳು, ಈ ವೇಳೆ ವಿದೇಶಿ ಪ್ರಭೇದದ ಬಾತು ಕೋಳಿ ವಶಕ್ಕೆ ಪಡೆದಿದ್ದರು. ಪ್ರಕರಣದ ವಿಚಾರಣೆಯು ಮೈಸೂರು ಜಿಲ್ಲೆ ಟಿ.‌ನರಸೀಪುರ ನ್ಯಾಯಾಲಯದಲ್ಲಿ ನಡೆಯುತ್ತಿದ್ದು, ಇದೀಗ ನ್ಯಾಯಾಲಯವು ದರ್ಶನ್ ಹಾಗೂ ವಿಜಯಲಕ್ಷ್ಮಿ ಅವರಿಗೆ ಸಮನ್ಸ್ ಜಾರಿ ಮಾಡಿದ್ದು ಜುಲೈ 4 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿದೆ.

ಬಾರ್‌ ಹೆಡೆಡ್‌ ಗೂಸ್‌ ಹೆಚ್ಚಾಗಿ ಮಧ್ಯ ಏಷ್ಯಾ ಪ್ರದೇಶದ್ದಾಗಿದ್ದು, ಇವು ವಲಸೆ ಹಕ್ಕಿಗಳಾಗಿವೆ. ಈ ಹಕ್ಕಿಗಳನ್ನು ಸಾಕುವುದು ವನ್ಯಜೀವಿ ಸಂರಕ್ಷಣೆಯ ಕಾಯ್ದೆಯಡಿ ಅಪರಾಧ ಎನಿಸಿಕೊಂಡಿದೆ. ಈ ಹಿಂದೆ ಪ್ರಕರಣ ದಾಖಲಾಗಿದ್ದಾಗ, ಬಾತುಕೋಳಿಗಳನ್ನು ಸ್ನೇಹಿತರು ನೀಡಿದ್ದರು ಎಂದು ಸ್ಪಷ್ಟನೆಯನ್ನು ನೀಡಿದ್ದರು ದರ್ಶನ್. ಬಾತುಕೋಳಿಗಳನ್ನು ವಶಕ್ಕೆ ಪಡೆದಿದ್ದ ಅಧಿಕಾರಿಗಳು ನಟ ದರ್ಶನ್ ವಿರುದ್ಧ ನಿಷೇಧಿತ ವನ್ಯ ಪಕ್ಷಿಗಳ ಸಾಕಣೆಗಾಗಿ ಪ್ರಕರಣ ದಾಖಲಿಸಿದ್ದರು.

ದರ್ಶನ್ ಫಾರಂ ಹೌಸ್​ನಲ್ಲಿ ಹಲವು ವಿಧದ ಪ್ರಾಣಿ ಪಕ್ಷಿಗಳನ್ನು ಸಾಕಿದ್ದಾರೆ. ಪ್ರಾಣಿ ಪ್ರೇಮಿಯಾದ ದರ್ಶನ್ ಫಾರಂ ಹೌಸ್​​ನಲ್ಲಿ, ಹಸು, ಎತ್ತು, ಕುದುರೆ, ಗಿಳಿಗಳು, ಬಾತುಕೋಳಿ, ಕುರಿ, ಕೋಳಿ ಇನ್ನೂ ಕೆಲವಾರು ಪ್ರಾಣಿಗಳು ಇವೆ. ಈ ಹಿಂದೆ ಯೂಟ್ಯೂಬರ್ ಒಬ್ಬಾತ ದರ್ಶನ್ ಫಾರಂ ಹೌಸ್​​ನ ವಿಡಿಯೋ ಮಾಡಿದ್ದರು. ಆ ವಿಡಿಯೋ ಗಮನಿಸಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಫಾರಂ ಹೌಸ್​ ಮೇಲೆ ದಾಳಿ ಮಾಡಿ ನಿಯಮಬಾಹಿರವಾಗಿ ಇರಿಸಿಕೊಂಡಿದ್ದ ಪಕ್ಷಿಗಳನ್ನು ವಶಕ್ಕೆ ಪಡೆದಿದ್ದರು.‌

ಇದನ್ನೂ ಓದಿ: Actor Darshan: ರೇಣುಕಾಸ್ವಾಮಿ ಕೊಲೆ ಕೇಸ್‌; ನಟ ದರ್ಶನ್‌ ವಿರುದ್ಧ 132 ಪುಟಗಳ ಹೆಚ್ಚುವರಿ ಚಾರ್ಜ್‌ಶೀಟ್‌ ಸಲ್ಲಿಕೆ