Actor Darshan: ದರ್ಶನ್ ಜಾಮೀನು ಭವಿಷ್ಯ ನಾಳೆ ನಿರ್ಧಾರ; ಸುಪ್ರೀಂ ಕೋರ್ಟ್‌ನತ್ತ ಎಲ್ಲರ ಚಿತ್ತ!
Actor Darshan: ಹೈಕೋರ್ಟ್ ನೀಡಿರುವ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದರೇ, ನಟ ದರ್ಶನ್ ಮತ್ತೆ ಜೈಲು ಪಾಲಾಗಬೇಕಾಗುತ್ತದೆ. ಹೀಗಾಗಿ ಸುಪ್ರೀಂಕೋರ್ಟ್ನಲ್ಲಿ ಜುಲೈ 22ರ ಮಂಗಳವಾರ ನಡೆಯುವ ಜಾಮೀನು ಅರ್ಜಿಯ ಮೇಲ್ಮನವಿ ವಿಚಾರಣೆಯು ನಟ ದರ್ಶನ್ ಪಾಲಿಗೆ ಮಹತ್ವದ್ದಾಗಿದೆ.


ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ (Actor Darshan) ನೀಡಿರುವ ಜಾಮೀನು ರದ್ದು ಕೋರಿ ಬೆಂಗಳೂರು ಪೊಲೀಸರು ಸಲ್ಲಿಸಿರುವ ಮೇಲ್ಮನವಿ ಅರ್ಜಿಯ ವಿಚಾರಣೆ ನಾಳೆ (ಜು. 22) ರಂದು ಸುಪ್ರೀಂಕೋರ್ಟ್ನಲ್ಲಿ ನಡೆಯಲಿದೆ. ಪ್ರಕರಣದಲ್ಲಿ ನಟ ದರ್ಶನ್ ಮತ್ತೆ ಜೈಲು ಪಾಲಾಗ್ತಾರಾ, ಇಲ್ಲವೇ ಹೈಕೋರ್ಟ್ ಕೊಟ್ಟಿರುವ ಜಾಮೀನು ಆದೇಶ ಮುಂದುವರಿಯುತ್ತಾ ಎಂಬುವುದು ಸುಪ್ರೀಂಕೋರ್ಟ್ ನೀಡುವ ಆದೇಶದ ಮೇಲೆ ಅವಲಂಬಿಸಿದೆ.
ಹೈಕೋರ್ಟ್ ನೀಡಿರುವ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದರೇ, ನಟ ದರ್ಶನ್ ಮತ್ತೆ ಜೈಲು ಪಾಲಾಗಬೇಕಾಗುತ್ತದೆ. ಸುಪ್ರೀಂಕೋರ್ಟ್ನಲ್ಲಿ ಕಳೆದ ವಾರ ನಡೆದ ವಿಚಾರಣೆ ವೇಳೆ, ನಮಗೆ ಪೊಲೀಸರು ನೀಡಿರುವ ಸಾಕ್ಷ್ಯಗಳು ತೃಪ್ತಿ ತಂದಿವೆ ಎಂದು ಸುಪ್ರೀಂಕೋರ್ಟ್ ಹೇಳಿತ್ತು. ಜತೆಗೆ ಹೈಕೋರ್ಟ್ ಜಾಮೀನು ನೀಡಲು ನೀಡಿರುವ ಕಾರಣಗಳು ಸಮಂಜಸವಾಗಿಲ್ಲ. ಹೈಕೋರ್ಟ್ ತನ್ನ ವಿವೇಚನೆ ಸೂಕ್ತವಾಗಿ ಬಳಸಿಲ್ಲ ಎಂದು ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು. ಹೈಕೋರ್ಟ್ ನಟ ದರ್ಶನ್‌ಗೆ ನೀಡಿರುವ ಜಾಮೀನಿನ ವಿಷಯದಲ್ಲಿ ನಾವೇಕೆ ಮಧ್ಯಪ್ರವೇಶ ಮಾಡಬಾರದೆಂದು ಹೇಳಿ ಎಂದು ದರ್ಶನ್ ಪರ ವಕೀಲ ಕಪಿಲ್ ಸಿಬಲ್‌ಗೆ ಸುಪ್ರೀಂಕೋರ್ಟ್ ಪ್ರಶ್ನಿಸಿತ್ತು.
ಜಾಮೀನು ನೀಡುವಾಗ ಹೈಕೋರ್ಟ್ ತನ್ನ ವಿವೇಚನೆಯನ್ನು ಸೂಕ್ತವಾಗಿ ಬಳಸಿಲ್ಲ ಎಂದು ನ್ಯಾ. ಪರ್ದಿವಾಲಾ ಆಕ್ಷೇಪಿಸಿದ್ದರು. ಈ ಬಗ್ಗೆ ಏನು ಹೇಳಬಯಸುತ್ತೀರಿ ಎಂದು ದರ್ಶನ್ ಪರ ಹಿರಿಯ ವಕೀಲ ಕಪಿಲ್ ಸಿಬಲ್‌ಗೆ ಸುಪ್ರೀಂ ಕೋರ್ಟ್ ಪ್ರಶ್ನಿಸಿತ್ತು. ಈ ಮೂಲಕ ನಟ ದರ್ಶನ್ ಹಾಗೂ ಉಳಿದವರಿಗೆ ಜಾಮೀನು ನೀಡಿರುವುದಕ್ಕೆ ಸುಪ್ರೀಂ ಕೋರ್ಟ್ ಅತೃಪ್ತಿ, ಅಸಮಾಧಾನ ವ್ಯಕ್ತಪಡಿಸಿತ್ತು.
ಸರ್ಕಾರಿ ವಕೀಲ ಅನಿಲ್ ನಿಶಾನಿ ಅವರು, ನಾವು ಸುಪ್ರೀಂ ಕೋರ್ಟ್ಗೆ ಕೊಟ್ಟಿರುವ ದಾಖಲೆಯನ್ನು ಕೋರ್ಟ್ ಪರಿಶೀಲನೆ ಮಾಡಿದೆ. ದರ್ಶನ್ ಅವರ ಇತರೆ ಕ್ರೈಮ್ಗಳ ಬಗ್ಗೆಯೂ ದಾಖಲೆ ನೀಡಿದ್ದೇವೆ. ಜತೆಗೆ ಜೈಲಿನಲ್ಲಿ ಮಾಡಿರುವ ಬೇರೆ ಚಟುವಟಿಕೆಗಳ ಬಗ್ಗೆಯೂ ದಾಖಲೆ ಕೊಟ್ಟಿದ್ದೇವೆ. ಹೈಕೋರ್ಟ್ ಬೇಲ್ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ ಎಂದು ಹೇಳಿದ್ದರು.
ಈ ಸುದ್ದಿಯನ್ನೂ ಓದಿ | The Devil Movie: ದರ್ಶನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್; ʼದಿ ಡೆವಿಲ್ʼ ಚಿತ್ರದ ಮೋಷನ್ ಪೋಸ್ಟರ್ ಔಟ್
ಹೀಗಾಗಿ ಸುಪ್ರೀಂಕೋರ್ಟ್ನಲ್ಲಿ ಜುಲೈ 22ರ ಮಂಗಳವಾರ ನಡೆಯುವ ಜಾಮೀನು ಅರ್ಜಿಯ ಮೇಲ್ಮನವಿ ವಿಚಾರಣೆಯು ನಟ ದರ್ಶನ್ ಪಾಲಿಗೆ ಮಹತ್ವದ್ದು. ದರ್ಶನ್, ಸದ್ಯ ಥೈಲ್ಯಾಂಡ್ನಲ್ಲಿ ಡೆವಿಲ್ ಸಿನಿಮಾದ ಶೂಟಿಂಗ್ನಲ್ಲಿದ್ದಾರೆ.