ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Self Harming: ಬೆಂಗಳೂರಿನಲ್ಲಿ ಮತ್ತೊಬ್ಬ ಬಿಜೆಪಿ ಕಾರ್ಯಕರ್ತ ವಿಡಿಯೋ ಮಾಡಿಕೊಂಡು ಆತ್ಮಹತ್ಯೆ

ಫೇಸ್ಬುಕ್‌ನಲ್ಲಿ ವಿಡಿಯೋ ಮಾಡಿಕೊಳ್ಳುತ್ತಾ ಬಿಜೆಪಿ ಕಾರ್ಯಕರ್ತ ಪ್ರವೀಣ್ ಗೌಡ ಬೇಲೂರು (35) ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆನೇಕಲ್ ಪಟ್ಟಣದ ಎಸ್‌ವಿಎಂ ಸ್ಕೂಲ್ ಬಳಿ ಈ ಘಟನೆ ನಡೆದಿದೆ. ಸಾವಿಗೆ ಕಾರಣರಾದವರ ಹೆಸರುಗಳನ್ನು ವಿಡಿಯೋದಲ್ಲಿ ರೆಕಾರ್ಡ್ ಮಾಡಿರುವ ಪ್ರವೀಣ್, ಇವರುಗಳಿಗೆ ಶಿಕ್ಷೆ ಆಗಬೇಕು ಎಂದು ಕೋರಿದ್ದಾರೆ.

ಬೆಂಗಳೂರಿನಲ್ಲಿ ಮತ್ತೊಬ್ಬ ಬಿಜೆಪಿ ಕಾರ್ಯಕರ್ತ ವಿಡಿಯೊ ಮಾಡಿ ಆತ್ಮಹತ್ಯೆ

ಸಾಂದರ್ಭಿಕ ಚಿತ್ರ

ಹರೀಶ್‌ ಕೇರ ಹರೀಶ್‌ ಕೇರ Apr 18, 2025 9:28 AM

ಬೆಂಗಳೂರು: ಇತ್ತೀಚಿಗೆ ಬಿಜೆಪಿ ಕಾರ್ಯಕರ್ತ (BJP worker) ವಿನಯ್ ಸೋಮಯ್ಯ ಅವರು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದರು. ಈ ಪ್ರಕರಣ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿತ್ತು. ಆ ಪ್ರಕರಣ ಇನ್ನೂ ತನಿಖೆಯ ಹಂತದಲ್ಲಿ ಇರುವಾಗಲೇ ಬೆಂಗಳೂರಿನಲ್ಲಿ (Bengaluru Crime News) ಮತ್ತೊಬ್ಬ ಬಿಜೆಪಿ ಕಾರ್ಯಕರ್ತ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ದುರಂತ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನಲ್ಲಿ ನಡೆದಿದೆ.

ಫೇಸ್ಬುಕ್‌ನಲ್ಲಿ ವಿಡಿಯೋ ಮಾಡಿಕೊಳ್ಳುತ್ತಾ ಬಿಜೆಪಿ ಕಾರ್ಯಕರ್ತ ಪ್ರವೀಣ್ ಗೌಡ ಬೇಲೂರು (35) ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆನೇಕಲ್ ಪಟ್ಟಣದ ಎಸ್ವಿಎಂ ಸ್ಕೂಲ್ ಬಳಿ ಈ ಘಟನೆ ನಡೆದಿದೆ. ಸಾವಿಗೆ ಕಾರಣರಾದವರ ಹೆಸರುಗಳನ್ನು ವಿಡಿಯೋದಲ್ಲಿ ರೆಕಾರ್ಡ್ ಮಾಡಿರುವ ಪ್ರವೀಣ್, ನಂತರ ಎಸ್‌ವಿಎಂ ಸ್ಕೂಲ್ ಬಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಿಡಿಯೋದಲ್ಲಿ ಏನಿದೆ?

ಕಳೆದ ಎರಡು ತಿಂಗಳಿನಿಂದ ಮಾನಸಿಕವಾಗಿ ನೊಂದಿದ್ದೇನೆ. ನನ್ನ ಸಾವಿಗೆ ಕೆಲವರು ನೇರವಾಗಿ ಕಾರಣರಾಗಿದ್ದಾರೆ. ಸಮಂದು ಕಿರಣ್, ಗೋಕುಲ್ ಪ್ಯಾಶನ್ ಹರೀಶ್, ಭಾಸ್ಕರ್, ನಾರಾಯಣಪ್ಪ ದೊಡ್ಡಹಾಗೆ, ಮಧುಗೌಡ, ಹಾಗು ಸರವಣ ಎಂಬವರ ಹೆಸರು ವಿಡಿಯೋದಲ್ಲಿ ಉಲ್ಲೇಖಿಸಿದ್ದು ಯಾರನ್ನು ಬಿಟ್ಟರೂ ಕಿರಣ್‌ನನ್ನು ದಯವಿಟ್ಟು ಬಿಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಕಿರಣ್ ಹಲವು ಹೆಣ್ಣು ಮಕ್ಕಳಿಗೆ ಫೋನ್ ಮಾಡಿ ಕಿರುಕುಳ ಕೊಡುತ್ತಿದ್ದಾನೆ. ಕಿರಣ್ ಮಾಡಿರುವ ಇಂತಹ ಕೆಲಸಗಳೆಲ್ಲ ನನ್ನ ಮೇಲೆ ಬಂದಿವೆ. ಹಣದ ವಿಚಾರವಾಗಿ ಮಾತುಕತೆಗೆ ಎಂದು ಕರೆಸಿಕೊಂಡು ಹಲ್ಲೆ ನಡೆಸಿದ್ದಾರೆ. ನನ್ನನ್ನು ಬಿಜೆಪಿ ಮುಖಂಡ ನಾಯನಹಳ್ಳಿ ಮುನಿರಾಜು ಮನೆಗೆ ಕರೆದಿದ್ದರು. ಈ ವೇಳೆ ಆನೇಕಲ್ ಕೌನ್ಸಿಲರ್ ಭಾಗ್ಯ ಮತ್ತು ಆಕೆಯ ಪ್ರತಿ ಶ್ರೀನಿವಾಸ್ ಏಕಾಏಕಿ ಹತ್ತಾರು ಮಂದಿಯನ್ನು ಕರೆಸಿಕೊಂಡಿದ್ದಾರೆ. ಈ ವೇಳೆ ಮೊಬೈಲ್ ಕಿತ್ತುಕೊಂಡು ಎರಡು ಗಂಟೆಗಳ ಕಾಲ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ. ಮನಸೋ ಇಚ್ಛೆ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪ್ರವೀಣ್ ಬೇಲೂರು ವಿಡಿಯೋದಲ್ಲಿ ಆರೋಪಿಸಿದ್ದಾರೆ.

ನಾನು ಸತ್ತ ಮೇಲೆ ನನ್ನ ದೇಹದ ಮೇಲಿರುವ ಗಾಯದ ಗುರುತನ್ನು ಪರಿಶೀಲಿಸಿ, ಪೊಲೀಸರು ನ್ಯಾಯ ಕೊಡಿಸಬೇಕು ಎಂದು ಮನವಿ ಮಾಡಿದ್ದಾರೆ. ಸಾವಿಗೂ ಮುನ್ನ ವಿಡಿಯೋ ಮಾಡಿ ಫೇಸ್ ಬುಕ್‌ನಲ್ಲಿ ಪ್ರವೀಣ್ ಬೇಲೂರು ಪೋಸ್ಟ್ ಮಾಡಿದ್ದಾರೆ. ಬಳಿಕ ನಿನ್ನೆ ರಾತ್ರಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ಆನೇಕಲ್ ಟಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Vinay Somaiah death: ಆತ್ಮಹತ್ಯೆಗೆ ಮುನ್ನ ಪತ್ನಿಗೆ ಪತ್ರ ಬರೆದಿದ್ದ ವಿನಯ್, ಲೆಟರ್​ನಲ್ಲಿ ಏನಿದೆ?