Bengaluru Stampede: ನೀವು ವಿಧಾನಸೌಧದ ಮೆಟ್ಟಲುಗಳಿಗೆ ಮಾತ್ರ ಮುಖ್ಯಮಂತ್ರಿಯೇ: ಸಿದ್ದರಾಮಯ್ಯಗೆ ಎಚ್‌ಡಿ ಕುಮಾರಸ್ವಾಮಿ ವ್ಯಂಗ್ಯ
ದುರಂತದ ಹೊಣೆಯನ್ನು ಪೊಲೀಸರ ಮೇಲಷ್ಟೇ ಎತ್ತಿಹಾಕಿ 'ಕೈ' ತೊಳೆದುಕೊಳ್ಳುವುದು ಎಷ್ಟು ಸರಿ? ಪ್ರತಿಪಕ್ಷಗಳನ್ನು ದೂರಿ ಪಾರಾಗುವ ಹುನ್ನಾರವೇಕೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಷ್ಟೇ ಕಾಲ್ತುಳಿತ (Bengaluru Stampede) ಸಂಭವಿಸಿ ಜನ ಸತ್ತಿದ್ದಾರೆ ಎಂದಿರುವ ಸಿಎಂ ಹೇಳಿಕೆಯನ್ನು ಅವರು ಟೀಕಿಸಿದ್ದಾರೆ.


ಬೆಂಗಳೂರು: ಸಿದ್ದರಾಮಯ್ಯನವರೇ, ನೀವು ಕರ್ನಾಟಕದ ಮುಖ್ಯಮಂತ್ರಿಯೋ (Karnataka Chief minister) ಅಥವಾ ವಿಧಾನಸೌಧದ (vidhana soudha) ಮೆಟ್ಟಿಲುಗಳಿಗಷ್ಟೇ ಮುಖ್ಯಮಂತ್ರಿಯೋ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ (HD Kumaraswamy) ವ್ಯಂಗ್ಯವಾಡಿದ್ದಾರೆ. ವಿಧಾನಸೌಧದ ಮೆಟ್ಟಿಲು ಮೇಲೆ ಸರಕಾರ ಆರ್‌ಸಿಬಿ ವಿಜಯೋತ್ಸವ ಆಚರಿಸಿತು. ಅಲ್ಲಿ ಯಾರೂ ಸಾಯಲಿಲ್ಲ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಷ್ಟೇ ಕಾಲ್ತುಳಿತ (Bengaluru Stampede) ಸಂಭವಿಸಿ ಜನ ಸತ್ತಿದ್ದಾರೆ ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಮಾತಿಗೆ ಎಚ್‌ಡಿಕೆ ಈ ಟೀಕೆ ಮಾಡಿದ್ದಾರೆ.
ಎಚ್‌ಡಿಕೆ ಅವರು ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ:
ʼವಿಧಾನಸೌಧ ಮೆಟ್ಟಿಲು ಮೇಲೆ ಸರಕಾರ ವಿಜಯೋತ್ಸವ ಆಚರಿಸಿತು. ಅಲ್ಲಿ ಯಾರೂ ಸಾಯಲಿಲ್ಲ! ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಷ್ಟೇ ಕಾಲ್ತುಳಿತ ಸಂಭವಿಸಿ ಜನ ಸತ್ತಿದ್ದಾರೆ!! - ಮುಖ್ಯಮಂತ್ರಿ ಸಿದ್ದರಾಮಯ್ಯ.
ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ಅವರೇ... ನೀವು ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ವಿಧಾನಸೌಧ ಮೆಟ್ಟಿಲುಗಳಿಗಷ್ಟೇ ಮುಖ್ಯಮಂತ್ರಿಯೋ!? ದಯವಿಟ್ಟು ಹೇಳುವಿರಾ? ದುರಂತದ ಹೊಣೆಯನ್ನು ಪೊಲೀಸರ ಮೇಲಷ್ಟೇ ಎತ್ತಿಹಾಕಿ 'ಕೈ' ತೊಳೆದುಕೊಳ್ಳುವುದು ಎಷ್ಟು ಸರಿ? ಪ್ರತಿಪಕ್ಷಗಳನ್ನು ದೂರಿ ಪಾರಾಗುವ ಹುನ್ನಾರವೇಕೆ? #ಮೆಟ್ಟಿಲುಮುಖ್ಯಮಂತ್ರಿʼ ಎಂದು ಎಚ್‌ಡಿಕೆ ಪೋಸ್ಟ್‌ನಲ್ಲಿ ಬರೆದಿದ್ದಾರೆ.
➡️ ವಿಧಾನಸೌಧ ಮೆಟ್ಟಿಲು ಮೇಲೆ ಸರಕಾರ ವಿಜಯೋತ್ಸವ ಆಚರಿಸಿತು. ಅಲ್ಲಿ ಯಾರೂ ಸಾಯಲಿಲ್ಲ!
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 9, 2025
➡️ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಷ್ಟೇ ಕಾಲ್ತುಳಿತ ಸಂಭವಿಸಿ ಜನ ಸತ್ತಿದ್ದಾರೆ!!
- ಮುಖ್ಯಮಂತ್ರಿ ಸಿದ್ದರಾಮಯ್ಯ
ಸನ್ಮಾನ್ಯ ಶ್ರೀ @siddaramaiah ನವರೇ.. ನೀವು ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ವಿಧಾನಸೌಧ ಮೆಟ್ಟಿಲುಗಳಿಗಷ್ಟೇ ಮುಖ್ಯಮಂತ್ರಿಯೋ!?…
ʼವಿಧಾನಸೌಧದ ಬಳಿ ಏನೂ ಆಗಿಲ್ಲ, ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಆಗಿದೆʼ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು.
ಮೋದಿ ಬದುಕಿರುವುದು ಪ್ರಚಾರದಿಂದ: ಸಿಎಂ ಸಿದ್ದರಾಮಯ್ಯ
ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಬದುಕಿರುವುದು ಬರಿಯ ಪ್ರಚಾರದಿಂದ. ಮೋದಿ ಅವರ ಸರಕಾರಕ್ಕೆ ಸೊನ್ನೆ ಅಂಕ ಕೊಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಇಂದು ಮೈಸೂರಿನ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದರು. ನೋಟು ಅಮಾನ್ಯೀಕರಣದಿಂದ ಯಾರಿಗೆ ಅನುಕೂಲವಾಗಿದೆ? ಅಚ್ಚೆ ದಿನ್ ಆಯೇಗಾ, ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಕೊಡುತ್ತೇನೆ ಎಂದರು. ರೈತರ ಸಮಸ್ಯೆ ಬಗೆಹರಿಸುತ್ತೇನೆ ಎಂದರು. ರೈತರು ಒಂದು ವರ್ಷ ಕಾಲ ಚಳುವಳಿಯನ್ನು ಏಕೆ ಮಾಡಿದರು ಎಂದು ಪ್ರಶ್ನಿಸಿದರು.
ಪ್ರಧಾನ ಮಂತ್ರಿಗಳು ಪ್ರಮುಖವಾಗಿ ಏನು ಹೇಳಿದ್ದರೋ ಅದನ್ನು ಮಾಡಿಲ್ಲ. ಹನ್ನೊಂದು ವರ್ಷ ತುಂಬಿಸಿದ್ದಾರೆ ಅಷ್ಟೇ ಎಂದು ತಿಳಿಸಿದರು. ಮಾಧ್ಯಮಗಳು ಅವರಿಗೆ ಹೆಚ್ಚಿನ ಪ್ರಚಾರ ನೀಡುತ್ತಿವೆ. ಅವುಗಳ ಮೂಲಕ ಸುಳ್ಳು ವಿಚಾರಗಳಿಗೆ ಪ್ರಚಾರ ನೀಡುತ್ತಿದ್ದಾರೆ. ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದಾಗ ಇದನ್ನು ಅನುಷ್ಠಾನ ಮಾಡಲಾಗುವುದಿಲ್ಲ,ರಾಜ್ಯ ಸರ್ಕಾರ ದಿವಾಳಿಯಾಗುತ್ತದೆ ಎಂದವರು ಅದನ್ನೇ ನಕಲು ಮಾಡಿದರು ಎಂದರು.
ರಾಜಸ್ಥಾನ, ಉತ್ತರ ಪ್ರದೇಶ, ದೆಹಲಿಯಲ್ಲಿ ಅದನ್ನೇ ಜಾರಿ ಮಾಡಿದರು. ಗುಜರಾತ್ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಶೇ.50ರಷ್ಟು ತೆರಿಗೆ ಹಂಚಿಕೆ ಮಾಡಿದರು. ಇವರೇ ಪ್ರಧಾನಿಗಳಾದಾಗ ಏನು ಮಾಡಿದರು? ಎಂದು ಪ್ರಶ್ನಿಸಿದರು. ನಿರ್ಮಲಾ ಸೀತಾರಾಮನ್ 5300 ಕೋಟಿಗಳನ್ನು ಕೊಡುವುದಾಗಿ ಘೋಷಿಸಿದರು, ಆದರೆ ಕೊಡಲಿಲ್ಲ. 15ನೇ ಹಣಕಾಸು ಆಯೋಗದವರು 11495 ಕೋಟಿ ಕೊಡಬೇಕು ಎಂದು ಶಿಫಾರಸ್ಸು ಮಾಡಿದರೂ ಕೊಡಲಿಲ್ಲ. ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ಬಿಜೆಪಿ ಪ್ರಶ್ನೆ ಮಾಡುವುದನ್ನು ಬಿಟ್ಟು ಅಪಪ್ರಚಾರ ಮಾಡುತ್ತಿದೆ ಎಂದರು.