ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Illegal Mining: ಅಕ್ರಮ ಗಣಿಗಾರಿಕೆ ಪ್ರಕರಣಗಳ ಪರಿಶೀಲನೆಗೆ ಎಚ್.ಕೆ. ಪಾಟೀಲ್ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿ

Illegal Mining: ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ಪ್ರಕರಣಗಳನ್ನು ತಾರ್ಕಿಕ ಘಟ್ಟಕ್ಕೆ ಕೊಂಡೊಯ್ಯುವಲ್ಲಿ ಆಡಳಿತ ವ್ಯವಸ್ಥೆ ನಿರ್ಲಕ್ಷ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾನೂನು ಸಚಿವ ಎಚ್.ಕೆ. ಪಾಟೀಲ್ ಅವರು ಇತೀಚೆಗೆ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ಅಕ್ರಮ ಗಣಿಗಾರಿಕೆ ಪರಿಶೀಲನೆಗೆ ಸಂಪುಟ ಉಪ ಸಮಿತಿಯನ್ನು ರಚಿಸಲು ಕ್ಯಾಬಿನೆಟ್‌ ಸಭೆಯಲ್ಲಿ ನಿರ್ಣಯ ಮಾಡಲಾಗಿದೆ.

ಅಕ್ರಮ ಗಣಿಗಾರಿಕೆ ಪ್ರಕರಣಗಳ ಪರಿಶೀಲನೆಗೆ ಸಂಪುಟ ಉಪ ಸಮಿತಿ ರಚನೆ

Profile Prabhakara R Jul 2, 2025 8:41 PM

ಚಿಕ್ಕಬಳ್ಳಾಪುರ: ಅಕ್ರಮ ಗಣಿಗಾರಿಕೆಗೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಇದುವರೆಗೆ ಆಗಿರುವ ಪ್ರಗತಿ, ಆಗಬೇಕಾಗಿರುವ ಕ್ರಮಗಳು ಸೇರಿ ಹಲವು ವಿಷಯಗಳ ಕುರಿತು ಪರಿಶೀಲಿಸಲು ಕಾನೂನು ಸಚಿವ ಎಚ್.ಕೆ. ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿಯನ್ನು ರಚಿಸಲು ಬುಧವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ಪ್ರಕರಣಗಳನ್ನು ತಾರ್ಕಿಕ ಘಟ್ಟಕ್ಕೆ ಕೊಂಡೊಯ್ಯುವಲ್ಲಿ ಆಡಳಿತ ವ್ಯವಸ್ಥೆ ನಿರ್ಲಕ್ಷ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾನೂನು ಸಚಿವ ಎಚ್.ಕೆ. ಪಾಟೀಲ್ ಅವರು ಇತೀಚೆಗೆ ಪತ್ರ ಬರೆದಿದ್ದರು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಮತ್ತು ಕಳೆದು ಹೋದ ಸಂಪತ್ತನ್ನು ಮರಳಿ ಪಡೆಯಬೇಕು ಎಂದು ಪತ್ರದಲ್ಲಿ ಕೋರಿದ್ದರು. ಇದರ ಬೆನ್ನಲ್ಲೇ ಅಕ್ರಮ ಗಣಿಗಾರಿಕೆಗೆ ಪ್ರಕರಣಗಳ ಪರಿಶೀಲನೆಗೆ ಸಂಪುಟ ಉಪ ಸಮಿತಿಯನ್ನು ರಚಿಸಲು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್‌ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಬೆಂಗಳೂರು: ಎತ್ತಿನಹೊಳೆ ಯೋಜನೆ ಸೇರಿ ಒಟ್ಟು 48 ಮಹತ್ವದ ವಿಷಯಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಂದಿಬೆಟ್ಟದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶೇ.90 ರಷ್ಟು ಬೆಂಗಳೂರು ವಿಭಾಗದ ವಿಷಯಗಳನ್ನೇ ಈ ವಿಶೇಷ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಣಯ ಕೈಗೊಂಡಿದ್ದೇವೆ. ಒಟ್ಟು 48 ವಿಷಯಗಳು ಚರ್ಚೆಯಾಗಿದೆ. 3400 ಕೋಟಿ ಮೊತ್ತವನ್ನು ಮಂಜೂರು ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

ನಂದಿ ಬೆಟ್ಟದಲ್ಲಿ ನಡೆದ ಈ ಸಚಿವ ಸಂಪುಟ ಸಭೆಯು ಈ ವರ್ಷದ 14ನೇ ಸಭೆಯಾಗಿದೆ. ನಾವು ಆಡಳಿತವನ್ನು ಬೆಂಗಳೂರು ಕೇಂದ್ರಿತ ಎಂಬುದನ್ನು ತಪ್ಪಿಸಿ ವಿಕೇಂದ್ರೀಕರಣ ಮಾಡುವುದಕ್ಕಾಗಿಯೆ ಆಯಾ ಭಾಗದ ಸಮಸ್ಯೆಗಳ ಮೇಲೆ ಗಮನ ಹರಿಸಿ ಅವುಗಳಿಗೆ ಚಿಕಿತ್ಸಕ ಪರಿಹಾರ ನೀಡುವ ಉದ್ದೇಶದಿಂದ ಸಚಿವ ಸಂಪುಟ ಸಭೆಗಳನ್ನು ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆಸುತ್ತಿದ್ದೇವೆ. ಮೊದಲಿಗೆ ಕಲಬುರಗಿ, ಆ ನಂತರ ಮಲೈ ಮಹದೇಶ್ವರ ಬೆಟ್ಟದಲ್ಲಿ ಸಭೆ ನಡೆಸಿದ್ದೆವು. ಮೂರಣೇಯದಾಗಿ ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆಯನ್ನು ನಡೆಸಿದ್ದೇವೆ ಎಂದು ಸಿಎಂ ತಿಳಿಸಿದರು.

2050 ಕೋಟಿ ಬೆಂಗಳೂರು ಜಿಲ್ಲಾ ಭಾಗಕ್ಕೇ ಕೊಟ್ಟಿದ್ದೇವೆ. ಎತ್ತಿನಹೊಳೆ ಯೋಜನೆಗೆ ಒಟ್ಟು 23251 ಕೋಟಿ ಪರಿಷ್ಕೃತ ಅಂದಾಜು ಮಾಡಲಾಗಿದ್ದು, ಇಲ್ಲಿಯವರೆಗೂ 17147 ಕೋಟಿ ಖರ್ಚಾಗಿದೆ. ಮೂಲತಃ ಕುಡಿಯುವ ನೀರಿನ ಯೋಜನೆ ಇದಾಗಿದೆ. ಕೆರೆಗಳಿಗೆ ನೀರು ತುಂಬಿಸುವುದು ನಂತರದ ಆದ್ಯತೆಯಾಗಿದೆ.

24.1 TMC ನೀರಿನಲ್ಲಿ ಕುಡಿಯುವ ನೀರಿಗೆ 14 TMC ಬೇಕಾಗಿದೆ. ಆದ್ದರಿಂದ ಮೊದಲು ಕುಡಿಯುವ ನೀರನ್ನು ಕೊಡುವ ಯೋಜನೆ ಮುಗಿಸಲು ಸಂಪುಟ ಸಭೆ ತೀರ್ಮಾನ. ಎರಡು ವರ್ಷಗಳಲ್ಲಿ ಉದ್ದೇಶಿತ ಜಿಲ್ಲೆ, ತಾಲೂಕುಗಳಿಗೆ ನೀರು ಕೊಡುತ್ತೇವೆ. 9807 ಕೋಟಿಮೊತ್ತದಲ್ಲಿ ಗ್ರಾವಿಟಿ ಮುಖ್ಯ ಕೆನಲ್ ನ‌ ಕೆಲಸ 85% ಮಗಿದಿದೆ. ಹೆಚ್ಚುವರಿಯಾಗಿ ಇದಕ್ಕೆ 8000 ಕೋಟಿ ಬೇಕಾಗಿದೆ. ಬಾಕಿ ಉಳಿದಿರುವುದು 6000 ಚಿಲ್ಲರೆ ಕೋಟಿ. ಒಟ್ಟು 9 ಜಿಲ್ಲೆಗಳ 75 ಲಕ್ಷ ಜನರಿಗೆ ಕುಡಿಯುವ ನೀರು ಕೊಡ್ತೀವಿ. ಬೆಂಗಳೂರು ಜಿಲ್ಲೆಗಳ 31 ವಿಷಯಗಳು ಚರ್ಚೆಯಾಗಿ 2250 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು.

ಸಚಿವ ಸಂಪುಟದ ಪ್ರಮುಖ ನಿರ್ಣಗಳು

  • ಪ್ರತೀ ಜಿಲ್ಲೆಯಲ್ಲಿ ಕಾರ್ಮಿಕರ ಮಕ್ಕಳಿಗೆ ವಸತಿ ಶಾಲೆ ನಿರ್ಮಿಸಲು ತೀರ್ಮಾನಿಸಲಾಗಿದ್ದು, ಇದಕ್ಕೆ 1125.25 ಕೋಟಿ ಮಂಜೂರು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ನೀರಾವರಿ ಯೋಜನೆ, ಕೆರೆ ತುಂಬಿಸುವ ಯೋಜನೆಗಳ ಬಗ್ಗೆ ಚರ್ಚೆ.
  • ಹಿಂದುಳಿದ ವರ್ಗದ ಅಭ್ಯರ್ಥಿಗಳು IAS, IRS, IPS ಸೇರಿ ಸ್ಪರ್ಧಾತ್ಮಕ ಪರೀಕ್ಷಾ‌ ತರಭೇತಿಗೆ 10 ಕೋಟಿ ವೆಚ್ಚದ ಎರಡು ವಸತಿ ಶಾಲೆ ಬೆಂಗಳೂರಿನಲ್ಲಿ ನಿರ್ಮಾಣಕ್ಕೆ ಒಪ್ಪಿಗೆ
  • ಬೆಂಗಳೂರು ಕೇಂದ್ರ ವಿವಿಗೆ "ಡಾ.ಮನಮೋಹನ್ ಸಿಂಗ್ ಬೆಂಗಳೂರು ಸಿಟಿ ವಿವಿ" ಎಂದು ಹೆಸರಿಡಲು ತೀರ್ಮಾನ.
  • PHC ಗಳಿಲ್ಲದ ಹೊಸ ತಾಲ್ಲೂಕುಗಳಲ್ಲಿ CHC ಗಳನ್ನು ಆರಂಭಿಸಲು ತೀರ್ಮಾನ
  • ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ʼಬೆಂಗಳೂರು ಉತ್ತರ ಜಿಲ್ಲೆʼ ಎಂದು ಬಾಗೇಪಲ್ಲಿಗೆ ʼಭಾಗ್ಯನಗರʼ ಎಂದು ಮರುನಾಮಕರಣಕ್ಕೆ ಒಪ್ಪಿಗೆ
  • ಬೆಂಗಳೂರು ವಿಭಾಗದ ಜಿಲ್ಲೆಗಳಿಗೆ ಸಂಬಂಧಿಸಿದಂತೆ 31 ವಿಷಯಗಳಿಗೆ 2525 ಕೋಟಿ ರೂಗಳನ್ನು ಒದಗಿಸುವ ಕಾಮಗಾರಿ/ ಯೋಜನೆಗಳ ಕುರಿತು ಚರ್ಚಿಸಿ ಅನುಮೋದನೆ ನೀಡಲಾಯಿತು.
  • ಶಿಕ್ಷಣಕ್ಕೆ- 1627.25 ಕೋಟಿ ರೂ. ಇದರಲ್ಲಿ ಕಾಲೇಜು, ವಿಶ್ವವಿದ್ಯಾಲಯಗಳ ಮೂಲಭೂತ ಸೌಕರ್ಯ ಒದಗಿಸಲು ನಿರ್ಣಯ.
  • ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಐಎಎಸ್, ಐಪಿಎಸ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ತರಬೇತಿ ನೀಡಲು ಬೆಂಗಳೂರಿನಲ್ಲಿ 10 ಕೋಟಿ ರೂ ವೆಚ್ಚದಲ್ಲಿ ಎರಡು ವಸತಿ ನಿಲಯ ನಿರ್ಮಿಸಲು ತೀರ್ಮಾನಿಸಿದ್ದೇವೆ.
  • ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ 1125.25 ಕೋಟಿ ವೆಚ್ಚದಲ್ಲಿ ಸ್ಥಾಪಿಸಲು ಅನುಮೋದನೆ.
  • ನೀರಾವರಿ ಯೋಜನೆಗಳಿಗೆ - 1154 ಕೋಟಿ. ಇದರಲ್ಲಿ 237 ಕೋಟಿ ರೂಗಳನ್ನು ಬೆಂಗಳೂರಿನ ತ್ಯಾಜ್ಯ ನೀರನ್ನು ಶುದ್ಧೀಕರಣ ಮಾಡಿ ಶಿಡ್ಲಘಟ್ಟ ಮತ್ತು ಚಿಂತಾಮಣಿ ತಾಲ್ಲೂಕಿನ 164 ಕೆರೆಗಳಿಗೆ ತುಂಬಿಸುವ ಯೋಜನೆಗೆ ಅನುಮೋದನೆ.
  • ಚಿಕ್ಕಬಳ್ಳಾಪುರದಲ್ಲಿ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರವನ್ನು 10 ಕೋಟಿ ರೂ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲು ಅನುಮೋದನೆ. ಜತೆಗೆ ಚಿಕ್ಕಬಳ್ಳಾಪುರದಲ್ಲಿ ಎಪಿಎಂಸಿ ವತಿಯಿಂದ 141.5 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ಹೂವಿನ ಮಾರುಕಟ್ಟೆ ಸ್ಥಾಪಿಸಲು ಅನುಮೋದನೆ ನೀಡಲಾಗಿದೆ.
  • ಆರೋಗ್ಯ ಇಲಾಖೆ ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 46 ಕೋಟಿ ರೂ ವೆಚ್ಚದಲ್ಲಿ ಸಮುದಾಯ ಆರೋಗ್ಯ ಕೇಂದ್ರಗಳಾಗಿ ಅಭಿವೃದ್ಧಿ ಪಡಿಸಲು ಹಾಗೂ 21.40 ಕೋಟಿ ವೆಚ್ಚದಲ್ಲಿ ಚಿಕ್ಕಬಳ್ಳಾಪುರ ಮತ್ತು ಹುಬ್ಬಳ್ಳಿಯಲ್ಲಿನ ಮೆಡಿಕಲ್ ಕಾಲೇಜುಗಳಿಗೆ ಎಂಆರ್‌ಐ ಯಂತ್ರಗಳನ್ನು ಖರೀದಿಸಲು ಅನುಮತಿ.
  • 56 ಕೋಟಿ ರೂ ವೆಚ್ಚದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಕೈವಾರ ಪಿಎಚ್‌ಸಿ, ಹಾಗೂ ಮಂಚೇನಹಳ್ಳಿಯ ಆಸ್ಪತ್ರೆಗಳನ್ನು ಉನ್ನತೀಕರಿಸಲು ಹಾಗೂ ಹೆಚ್ಚುವರಿ ಕಾಮಗಾರಿ ತೆಗೆದುಕೊಳ್ಳಲು ತೀರ್ಮಾನ. ಒಟ್ಟಾರೆ 123 ಕೋಟಿ ರೂ ವೆಚ್ಚದಲ್ಲಿ ಆರೋಗ್ಯ ಸಂಬಂಧಿತ ಚಟುವಟಿಕೆಗಳಿಗೆ ಅನುಮತಿ.

ಈ ಸುದ್ದಿಯನ್ನೂ ಓದಿ | Cabinet Meeting: ಸಚಿವ ಸಂಪುಟ ಸಭೆಯಲ್ಲಿ 48 ವಿಷಯಗಳ ಬಗ್ಗೆ ಚರ್ಚೆ, 3400 ಕೋಟಿ ಮಂಜೂರು: ಸಿಎಂ