ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Body Found: 10 ದಿನ ಹಿಂದೆ ನಾಪತ್ತೆಯಾಗಿದ್ದ ಫಾರೆಸ್ಟ್‌ ಗಾರ್ಡ್‌ ಶವ ಬೆತ್ತಲೆಯಾಗಿ ಪತ್ತೆ

Body Found: ನೀಲಗಿರಿ ಪ್ಲಾಂಟೇಶನಿನಲ್ಲಿ ಜೂನ್ 24ರಂದು ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಶರತ್ ನಿಗೂಢವಾಗಿ ನಾಪತ್ತೆಯಾಗಿದ್ದರು. ಶರತ್‌ಗಾಗಿ ಅರಣ್ಯ ಇಲಾಖೆಯ ನೂರಾರು ಸಿಬ್ಬಂದಿ, ಪೊಲೀಸರು ನೀಲಗಿರಿ ಪ್ಲಾಂಟೇಶನ್, ಅರಣ್ಯದಲ್ಲಿ ಹುಡುಕಾಟ ನಡೆಸಿದ್ದರು. ಹುಡುಕಾಟದ ವೇಳೆ ಶರತ್ ಬೈಕ್ ಒಂದು ಕಡೆ ಸಿಕ್ಕಿದ್ದು, ಬಟ್ಟೆ ಹಾಗೂ ಪರ್ಸ್ ಒಂದೊಂದು ದಿಕ್ಕಿನಲ್ಲಿ ಪತ್ತೆಯಾಗಿತ್ತು.

10 ದಿನ ಹಿಂದೆ ನಾಪತ್ತೆಯಾದ ಫಾರೆಸ್ಟ್‌ ಗಾರ್ಡ್‌ ಶವ ಬೆತ್ತಲೆಯಾಗಿ ಪತ್ತೆ

ಮೃತ‌ ಶರತ್

ಹರೀಶ್‌ ಕೇರ ಹರೀಶ್‌ ಕೇರ Jul 4, 2025 9:10 PM

ಚಿಕ್ಕಮಗಳೂರು: ಕಳೆದ 10 ದಿನಗಳ ಹಿಂದೆ ನಾಪತ್ತೆಯಾಗಿದ್ದ ಫಾರೆಸ್ಟ್ ಗಾರ್ಡ್​ (Forest Guard) ಶವವಾಗಿ (Body Found) ಪತ್ತೆಯಾಗಿದ್ದಾರೆ. ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದ‌ ನೀಲಗಿರಿ ಪ್ಲಾಂಟೇಶನ್‌ನಲ್ಲಿ ಕಾರ್ಯ ನಿರ್ವಹಿಸುತ್ತಿರುವಾಗಲೇ ನಾಪತ್ತೆಯಾಗಿದ್ದ 33 ವರ್ಷದ KFDC ವಿಭಾಗದ ಫಾರೆಸ್ಟ್ ಗಾರ್ಡ್ ಶರತ್ ಶವವಾಗಿ ಪತ್ತೆಯಾಗಿದ್ದಾರೆ. ನೀಲಗಿರಿ ಪ್ಲಾಂಟೇಶನ್‌ನಿಂದ 5 ಕಿಮೀ ದೂರದಲ್ಲಿ ಬೆತ್ತಲೆ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಶರತ್ ಶವ ಪತ್ತೆಯಾಗಿದೆ. ಸಖರಾಯಪಟ್ಟಣ ನೀಲಗಿರಿ ಪ್ಲಾಂಟೇಶನ್‌ನಲ್ಲಿ ನರ್ಸರಿ ನೋಡಿಕೊಳ್ಳುವ ಕೆಲಸ ಮಾಡುತ್ತಿದ್ದ ಶರತ್ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದು ಅನುಮಾನಕ್ಕೆ ಕಾರಣವಾಗಿದೆ.

ಶರತ್ ಮೂಲತಃ ಕೊಡಗು ಜಿಲ್ಲೆಯ ಕಾಲೂರು ನಿವಾಸಿಯಾಗಿದ್ದು, ನಾಲ್ಕು ತಿಂಗಳ‌ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ KFDC ವಿಭಾಗದಿಂದ ಸಖರಾಯಪಟ್ಟಣ ಅರಣ್ಯ ಇಲಾಖೆಯ KFDC ವಿಭಾಗಕ್ಕೆ ವರ್ಗಾವಣೆಯಾಗಿದ್ದರು. ನೀಲಗಿರಿ ಪ್ಲಾಂಟೇಶನಿನಲ್ಲಿ ಜೂನ್ 24ರಂದು ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಶರತ್ ನಿಗೂಢವಾಗಿ ನಾಪತ್ತೆಯಾಗಿದ್ದರು. ಶರತ್‌ಗಾಗಿ ಅರಣ್ಯ ಇಲಾಖೆಯ ನೂರಾರು ಸಿಬ್ಬಂದಿ, ಪೊಲೀಸರು ನೀಲಗಿರಿ ಪ್ಲಾಂಟೇಶನ್, ಅರಣ್ಯದಲ್ಲಿ ಹುಡುಕಾಟ ನಡೆಸಿದ್ದರು. ಹುಡುಕಾಟದ ವೇಳೆ ಶರತ್ ಬೈಕ್ ಒಂದು ಕಡೆ ಸಿಕ್ಕಿದ್ದು, ಬಟ್ಟೆ ಹಾಗೂ ಪರ್ಸ್ ಒಂದೊಂದು ದಿಕ್ಕಿನಲ್ಲಿ ಪತ್ತೆಯಾಗಿತ್ತು. ಮೊಬೈಲ್ ಶರತ್ ಶವ ಸಿಕ್ಕ ಸ್ಥಳದಿಂದ 20 ಕಿಮೀ ದೂರದಲ್ಲಿ ಪತ್ತೆಯಾಗಿತ್ತು. ಇಂದು ಚಿಕ್ಕಮಗಳೂರು ಹಾಸನ ಅರಣ್ಯ ಇಲಾಖೆಯ ನೂರಾರು ಸಿಬ್ಬಂದಿಗಳು, ಪೊಲೀಸರು ಅರಣ್ಯದಲ್ಲಿ ಹುಡುಕಾಟ ನಡೆಸುವಾಗ ಶರತ್ ಶವ ಪತ್ತೆಯಾಗಿದೆ.

10 ದಿನಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ಫಾರೆಸ್ಟ್ ಗಾರ್ಡ್ ಅನುಮಾನಾಸ್ಪದವಾಗಿ ಶವವಾಗಿ ಪತ್ತೆಯಾದ ಹಿನ್ನೆಲೆಯಲ್ಲಿ ಶರತ್ ಕೊಲೆಯಾಗಿರುವ ಅನುಮಾನ ವ್ಯಕ್ತವಾಗಿದೆ. ಜೊತೆಯಲ್ಲೇ ಕೆಲಸ ಮಾಡುತ್ತಿದ್ದವರೋ ಅಥವಾ ಕಾಡುಗಳ್ಳರೋ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಶರತ್ ಮರಣೋತ್ತರ ಪರೀಕ್ಷೆಗಾಗಿ ಶಿವಮೊಗ್ಗದ‌ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸಖರಾಯಪಟ್ಟಣ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಶರತ್ ಶವ ಸಿಕ್ಕ ಸ್ಥಳಕ್ಕೆ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಸೊಕೊ ಟೀಮ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನದ ಹಿಂದೂ ಯುವಕ, ಅಪ್ರಾಪ್ತೆಯ ಮೃತದೇಹ ರಾಜಸ್ಥಾನದಲ್ಲಿ ಪತ್ತೆ; ನಿಗೂಢ ಸಾವಿಗೆ ಕಾರಣವೇನು?