ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Murder case: ಚಿತ್ರದುರ್ಗದಲ್ಲಿ ಪೈಶಾಚಿಕ ಕೃತ್ಯ: ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ ಕೊಂದು ಸುಟ್ಟು ಹಾಕಿದ ದುರುಳರು

Chitradurga: ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಕೋವೇರಹಟ್ಟಿ ಮೂಲದ 19 ವರ್ಷದ ವರ್ಷಿತಾ ಎಂಬಾಕೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ವರ್ಷಿತಾ ಚಿತ್ರದುರ್ಗ ನಗರದ ಬಾಲಕಿಯರ ವಸತಿ ಶಾಲೆಯ ಪದವಿ ವಿದ್ಯಾರ್ಥಿನಿಯಾಗಿದ್ದು, ಈಕೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ಬೆಂಕಿಯಿಟ್ಟಿರುವ ಶಂಕೆ ವ್ಯಕ್ತವಾಗಿದೆ.

ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ, ಕೊಂದು ಸುಟ್ಟ ದುರುಳರು

ಕೊಲೆಯಾದ ವರ್ಷಿತಾ

ಹರೀಶ್‌ ಕೇರ ಹರೀಶ್‌ ಕೇರ Aug 20, 2025 9:04 AM

ಚಿತ್ರದುರ್ಗ: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದ್ದು, ಚಿತ್ರದುರ್ಗದಲ್ಲಿ (chitradurga) ವಿದ್ಯಾರ್ಥಿನಿಯೊಬ್ಬಳ (Student) ಮೇಲೆ ಅತ್ಯಾಚಾರ (physical Abuse) ಎಸಗಿ ಕೊಲೆ (Murder case) ಮಾಡಿರುವ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಕೋವೇರಹಟ್ಟಿ ಮೂಲದ 19 ವರ್ಷದ ವರ್ಷಿತಾ ಎಂಬಾಕೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ವರ್ಷಿತಾ ಚಿತ್ರದುರ್ಗ ನಗರದ ಬಾಲಕಿಯರ ವಸತಿ ಶಾಲೆಯ ಪದವಿ ವಿದ್ಯಾರ್ಥಿನಿಯಾಗಿದ್ದು, ಈಕೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ಬೆಂಕಿಯಿಟ್ಟಿರುವ ಶಂಕೆ ವ್ಯಕ್ತವಾಗಿದೆ.

ನಿನ್ನೆ ವರ್ಷಿತಾ ಶವ ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿಯ ಬಳಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕೃತ್ಯದಲ್ಲಿ ಸ್ಥಳದಲ್ಲಿ ಉದ್ವಿಗ್ನತೆ ನೆಲೆಸಿದ್ದು, ಈ ಬರ್ಬರ ಕೃತ್ಯ ಎಸಗಿದವರನ್ನು ಹಿಡಿದು ಕಠೋರ ಶಿಕ್ಷೆ ನೀಡಬೇಕು ಎಂದು ಕುಟುಂಬದವರು, ಗ್ರಾಮಸ್ಥರು ಆಗ್ರಹಿಸಿದ್ದಾರೆ. ಪೊಲೀಸರು ಸ್ಥಳೀಯ ಸಿಸಿಟಿವಿ ಕ್ಯಾಮರಾಗಳನ್ನು ಪರಿಶೀಲಿಸುತ್ತಿದ್ದಾರೆ ಹಾಗೂ ಇತರ ವಿವರಗಳನ್ನು ಸಂಗ್ರಹಿಸಿ ತನಿಖೆ ಮುಂದುವರಿಸಿದ್ದಾರೆ. ಒಬ್ಬನಿಗಿಂತ ಹೆಚ್ಚು ಜನ ಈ ಕೃತ್ಯದಲ್ಲಿ ಭಾಗಿಯಾಗಿರಬಹುದು ಎಂದು ಶಂಕಿಸಲಾಗಿದೆ. ವೈಯಕ್ತಿಕ ದ್ವೇಷದ ಸಾಧ್ಯತೆಯನ್ನೂ ಪರಿಶೀಲಿಸಲಾಗುತ್ತಿದೆ.

ಶಿವಸೇನೆ ಮಾಜಿ ಶಾಸಕನ ವಿರುದ್ಧ ಬೆಂಗಳೂರಿನಲ್ಲಿ ಅತ್ಯಾಚಾರ ಆರೋಪ ದಾಖಲು

ಬೆಂಗಳೂರು : ಉತ್ತರಪ್ರದೇಶದ ಶಿವಸೇನೆಯ ಮಾಜಿ ಶಾಸಕನ (Shiv sena Ex MLA) ವಿರುದ್ಧ ಅತ್ಯಾಚಾರ (Harassment) ಆರೋಪ ಕೇಳಿಬಂದಿದ್ದು, ಬೆಂಗಳೂರಿನ ಕೆಂಪೇಗೌಡ ಏರ್ ಪೋರ್ಟ್ ಠಾಣೆಯಲ್ಲಿ ಎಫ್ಐಆರ್ (FIR) ದಾಖಲಾಗಿದೆ. ಮಾಜಿ ಶಾಸಕ ಭಗವಾನ್ ಶರ್ಮಾ ವಿರುದ್ಧ ಈ ಆರೋಪ ಕೇಳಿಬಂದಿದೆ. 40 ವರ್ಷದ ಸಂತ್ರಸ್ತ ಮಹಿಳೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ರಿಜಿಸ್ಟರ್ಡ್‌ ಮದುವೆ ಆಗುವುದಾಗಿ ನಂಬಿಸಿ ಮಹಿಳೆಯನ್ನು ಏರ್‌ಪೋರ್ಟ್ ಹೋಟೆಲ್‌ಗೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯ (Physical Abuse) ಎಸಗಲಾಗಿದೆ ಎನ್ನಲಾಗಿದೆ.

ಜೊತೆಗೆ ತನ್ನ ಮೇಲಿನ ದೌರ್ಜನ್ಯದ ಖಾಸಗಿ ವಿಡಿಯೋ ಇಟ್ಟುಕೊಂಡು ಹೆದರಿಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಚಿತ್ರದುರ್ಗ, ಬೆಂಗಳೂರಿನಲ್ಲಿ ಮಹಿಳೆ ಮೇಲೆ ಅತ್ಯಾಚಾರ ಎಸಗಿರುವ ಮಾಜಿ ಶಾಸಕ ನಂತರ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಕೆಂಪೇಗೌಡ ಏರ್‌ಪೋರ್ಟ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಇದನ್ನೂ ಓದಿ: Physical Assault: ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ: 10 ಆರೋಪಿಗಳ ಬಂಧನ