ಫೋಟೋ ಗ್ಯಾಲರಿ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

CM Siddaramaiah: ತೇರ್ಗಡೆಯಾಗದಿದ್ದರೆ ಹತಾಶರಾಗದಿರಿ, ಮರಳಿ ಯತ್ನಿಸಿ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು

ಮರಳಿ ಪ್ರಯತ್ನಿಸಿದರೆ ಯಶಸ್ಸು ಖಂಡಿತಾ ಸಿಗಲಿದೆ. ರಾಜ್ಯದ 22 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದು ದಾಖಲೆ ನಿರ್ಮಿಸಿದ್ದಾರೆ. ಈ ಮಕ್ಕಳ ಸಾಧನೆ ಇತರರಿಗೆ ಮಾದರಿಯಾಗಲಿ ಎಂದು ಸಿಎಂ ಸಿದ್ದರಾಮಯ್ಯ ಅವರು ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸೋಶಿಯಲ್‌ ಮೀಡಿಯಾದಲ್ಲಿ ಹೇಳಿದ್ದಾರೆ.

ಹತಾಶರಾಗದಿರಿ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಸಿಎಂ ಕಿವಿಮಾತು

ಸಿಎಂ ಸಿದ್ದರಾಮಯ್ಯ

ಹರೀಶ್‌ ಕೇರ ಹರೀಶ್‌ ಕೇರ May 2, 2025 3:24 PM

ಬೆಂಗಳೂರು: ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗದ ವಿದ್ಯಾರ್ಥಿಗಳು ಆತಂಕ, ಹತಾಶೆಗೆ ಒಳಗಾಗುವುದು ಬೇಡ, ನಿಮ್ಮೆದುರು ಮತ್ತೆ ಪರೀಕ್ಷೆ ಬರೆಯುವ ಅವಕಾಶಗಳಿವೆ. ಮರಳಿ ಪ್ರಯತ್ನಿಸಿದರೆ ಯಶಸ್ಸು ಖಂಡಿತಾ ಸಿಗಲಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ್ದಾರೆ. ಈ ಬಗ್ಗೆ ಸೋಶಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ನಾಡಿನ ಎಲ್ಲ ವಿದ್ಯಾರ್ಥಿಗಳಿಗೆ ಅಭಿನಂದನೆಗಳು. ನಿಮ್ಮೆಲ್ಲರ ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸಿದ್ದಾರೆ.

ಈ ಪರೀಕ್ಷೆಯಲ್ಲಿ ತೇರ್ಗಡೆಯಾಗದ ವಿದ್ಯಾರ್ಥಿಗಳು ಆತಂಕ, ಹತಾಶೆಗೆ ಒಳಗಾಗುವುದು ಬೇಡ, ನಿಮ್ಮೆದುರು ಮತ್ತೆ ಪರೀಕ್ಷೆ ಬರೆಯುವ ಅವಕಾಶಗಳಿವೆ. ಮರಳಿ ಪ್ರಯತ್ನಿಸಿದರೆ ಯಶಸ್ಸು ಖಂಡಿತಾ ಸಿಗಲಿದೆ. ರಾಜ್ಯದ 22 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದು ದಾಖಲೆ ನಿರ್ಮಿಸಿದ್ದಾರೆ. ಈ ಮಕ್ಕಳ ಸಾಧನೆ ಇತರರಿಗೆ ಮಾದರಿಯಾಗಲಿ ಎಂದು ಹೇಳಿದ್ದಾರೆ.



2024-25ರ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇಂದು ಬೆಳಗ್ಗೆ ಪ್ರಕಟವಾಗಿದೆ. ಕಳೆದ ವರ್ಷಕ್ಕಿಂತ ಈ ಬಾರಿ ಶೇ.8ರಷ್ಟು ಉತ್ತಮ ಫಲಿತಾಂಶ ಬಂದಿದ್ದು, ಶೇ.66.14ನಷ್ಟು ಫಲಿತಾಂಶ ಬಂದಿದೆ. ಟಾಪ್ 5 ಜಿಲ್ಲೆಗಳ ಸ್ಥಾನದಲ್ಲಿ ದಕ್ಷಿಣ ಕನ್ನಡ (91.12%), ಉಡುಪಿ (89.96%), ಉತ್ತರ ಕನ್ನಡ (83.19%), ಶಿವಮೊಗ್ಗ (82.29%), ಕೊಡಗು (82.21%) ಇವೆ. ಹೆಣ್ಣುಮಕ್ಕಳು ಶೇ. 74 ಅಂಕ ಗಳಿಸಿದ್ದು, ಗಂಡು ಮಕ್ಕಳು 58.07 % ಫಲಿತಾಂಶ ಸಾಧಿಸಿದ್ದಾರೆ. ಒಟ್ಟು 921 ಶಾಲೆಗಳಲ್ಲಿ ಶೇಕಡ 100 ರಷ್ಟು ಫಲಿತಾಂಶ ಬಂದಿದೆ. ಸರ್ಕಾರಿ ಶಾಲೆ - 329, ಅನುದಾನಿತ ಶಾಲೆ - 53, ಅನುದಾನ ರಹಿತ ಶಾಲೆ - 530 ಔಟ್‌ ಆಫ್ ಔಟ್‌ ಫಲಿತಾಂಶ ಪಡೆದ ಶಾಲೆಗಳಾಗಿವೆ.

ಇದನ್ನೂ ಓದಿ: SSLC Result 2025: ಎಸ್‌ಎಸ್‌ಎಲ್‌ಸಿಯಲ್ಲಿ 625ಕ್ಕೆ 625 ಅಂಕ ಪಡೆದ 22 ಟಾಪರ್ಸ್‌ ಪಟ್ಟಿ ಇಲ್ಲಿದೆ