ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Farmers Protest: ದೇವನಹಳ್ಳಿ ರೈತ ಹೋರಾಟ; ಸರ್ಕಾರದ ಅಂತಿಮ ನಿರ್ಧಾರ ಪ್ರಕಟಕ್ಕೆ 10 ದಿನ ಕಾಲಾವಕಾಶ ಕೋರಿದ ಸಿಎಂ

Farmers Protest: ಕಾನೂನು ಕಾಯ್ದೆಗೆ ವಿರುದ್ಧವಾಗಿ ಸರ್ಕಾರ ಯಾವುದೇ ಕ್ರಮಗಳನ್ನು ಕೈಗೊಳ್ಳಲು ಸಾಧ್ಯವಿಲ್ಲ. ನಿಯಮಾನುಸಾರ ಅಂತಿಮ ನೋಟಿಫಿಕೇಶ್ ಆಗಿರುವ ಕಾರಣ, ಅದರ ಕಾನೂನು ಅಂಶಗಳನ್ನು ಪರಿಶೀಲಿಸುವ ಅಗತ್ಯವಿದೆ. 10 ದಿನಗಳ ಬಳಿಕ ಮತ್ತೆ ಸಭೆ ನಡೆಸಿ ಸರ್ಕಾರದ ನಿಲುವು ಸ್ಪಷ್ಟಪಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಭೂಸ್ವಾಧೀನ; ಅಂತಿಮ ನಿರ್ಧಾರ ಪ್ರಕಟಕ್ಕೆ 10 ದಿನ ಕಾಲಾವಕಾಶ ಕೋರಿದ ಸಿಎಂ

Profile Prabhakara R Jul 4, 2025 2:50 PM

ಬೆಂಗಳೂರು: ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರೆ ಗ್ರಾಮಗಳಲ್ಲಿ ಕೆಐಎಡಿಬಿ ಭೂಸ್ವಾಧೀನ ವಿರೋಧಿಸಿ ರೈತರು ನಿರಂತರ ಹೋರಾಟ (Farmers Protest) ನಡೆಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧ ಸಭಾಂಗಣದಲ್ಲಿ ರೈತ ಸಂಘಟನೆಗಳ ಪ್ರತಿನಿಧಿಗಳ ಜತೆ ಶುಕ್ರವಾರ ಸಭೆ ನಡೆಸಿದರು. ಈ ವೇಳೆ ಮಾತನಾಡಿನ ಸಿಎಂ, ಈ ವಿಷಯದ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲು 10 ದಿನಗಳ ಕಾಲಾವಕಾಶ ಅಗತ್ಯವಿದೆ. ಈ ಕಾಲಾವಧಿಯಲ್ಲಿ ಸರ್ಕಾರಕ್ಕೆ ಒಂದು ಸ್ಪಷ್ಟ ನಿರ್ಧಾರಕ್ಕೆ ಬರಲು ಸಾಧ್ಯವಿದೆ ಎಂದು ತಿಳಿಸಿದ್ದಾರೆ.

ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವುದಕ್ಕೆ ಸಂಬಂಧಿಸಿದಂತೆ ಕೆಲವು ಕಾನೂನು ತೊಡಕುಗಳಿದ್ದು, ಅದನ್ನು ಸರಿಪಡಿಸಿಕೊಳ್ಳುವ ಸಲಹೆಯನ್ನು ಕಾನೂನು ತಜ್ಞರು ನೀಡಿದ್ದಾರೆ. ಈಗಾಗಲೇ ಏಪ್ರಿಲ್ ತಿಂಗಳಲ್ಲಿ ಅಂತಿಮ ನೋಟಿಫಿಕೇಶನ್ ಅಗಿರುವ ಕಾರಣ ಅದರ ಸಾಧಕ ಬಾಧಕಗಳ ಕುರಿತು ಚರ್ಚೆ ನಡೆಸುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ 10 ದಿನಗಳ ಕಾಲಾವಕಾಶ ಅಗತ್ಯವಿದೆ. ಈ ಕಾಲಾವಧಿಯಲ್ಲಿ ಸರ್ಕಾರಕ್ಕೆ ಒಂದು ಸ್ಪಷ್ಟ ನಿರ್ಧಾರಕ್ಕೆ ಬರಲು ಸಾಧ್ಯವಿದೆ ಎಂದು ಹೇಳಿದ್ದಾರೆ.

farmers Protest  (1)

ಕಾನೂನು ಕಾಯ್ದೆಗೆ ವಿರುದ್ಧವಾಗಿ ಸರ್ಕಾರ ಯಾವುದೇ ಕ್ರಮಗಳನ್ನು ಕೈಗೊಳ್ಳಲು ಸಾಧ್ಯವಿಲ್ಲ. ನಿಯಮಾನುಸಾರ ಅಂತಿಮ ನೋಟಿಫಿಕೇಶ್ ಆಗಿರುವ ಕಾರಣ, ಅದರ ಕಾನೂನು ಅಂಶಗಳನ್ನು ಪರಿಶೀಲಿಸುವ ಅಗತ್ಯವಿದೆ. ಈ ಕುರಿತು ನಿನ್ನೆ ಪೂರ್ವಭಾವಿ ಸಭೆ ನಡೆಸಿದ್ದೇವೆ. ಇಂದೇ ಸರ್ಕಾರದ ನಿಲುವು ಪ್ರಕಟಿಸಲು ಸಾಧ್ಯವಿಲ್ಲ. ಕಾನೂನು ಸಮಸ್ಯೆ ನಿವಾರಿಸಲು ಸರ್ಕಾರಕ್ಕೆ ಹತ್ತು ದಿನಗಳ ಕಾಲಾವಾಕಾಶ ಬೇಕಿದ್ದು, ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಂಡು ಜುಲೈ 15 ರಂದು ರೈತ ಹೋರಾಟಗಾರರೊಂದಿಗೆ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದರು.

ನಾವು ಪ್ರಜಾಪ್ರಭುತ್ವದಲ್ಲಿ ಮತ್ತು ಸಂವಾದದಲ್ಲಿ ನಂಬಿಕೆಯಿರುವವರು. ಪ್ರತಿಭಟನೆಗೆ ಯಾವುದೇ ಅಡ್ಡಿಪಡಿಸಿಲ್ಲ. ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಯತ್ನ ಸರ್ಕಾರ ಮಾಡಿಲ್ಲ. ನಾನೂ ರೈತ ಸಂಘದಲ್ಲಿದ್ದವನು ಎಂದು ಹೇಳಿದ್ದಾರೆ.

ಈ ಸುದ್ದಿಯನ್ನೂ ಓದಿ | Heart attack: ಭೂ ಸ್ವಾಧೀನ ವಿರೋಧಿ ಪ್ರತಿಭಟನೆಗಾಗಿ ಬೆಂಗಳೂರಿಗೆ ಬಂದಿದ್ದ ರೈತ ಹೃದಯಾಘಾತದಿಂದ ಸಾವು

ಸಚಿವರಾದ ಕೆ.ಎಚ್.ಮುನಿಯಪ್ಪ, ಭೈರತಿ ಸುರೇಶ್, ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕಾನೂನು ಸಲಹೆಗಾರ ಪೊನ್ನಣ್ಣ, ಚಿತ್ರನಟ ಪ್ರಕಾಶ್ ರಾಜ್ ಸೇರಿದಂತೆ ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ಫ್ರೀಡಂ ಪಾರ್ಕ್‌ನಲ್ಲಿ ʼನಾಡ ಉಳಿಸಿʼ ಬೃಹತ್‌ ಪ್ರತಿಭಟನಾ ಸಮಾವೇಶ

ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರ 1777 ಎಕರೆ ಭೂಮಿಯ ಉಳಿವಿಗಾಗಿ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ, ಸಂಯುಕ್ತ ಹೋರಾಟ ಕರ್ನಾಟಕ ಹಾಗೂ ಸಮಾನ ಮನಸ್ಕ ಸಂಘಟನೆಗಳ ವತಿಯಿಂದ ನಾಡ ಉಳಿಸಿ ಸಮಾವೇಶವನ್ನು ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದೆ.

ಸಮಾವೇಶದಲ್ಲಿ ಭಾರತೀಯ ಕಿಸಾನ್ ಯೂನಿಯನ್ (BKU) ನಾಯಕ ರಾಕೇಶ್ ಟಿಕಾಯತ್‌, ನಟ ಪ್ರಕಾಶ್‌ ರಾಜ್‌ ಸೇರಿ ಪ್ರಮುಖರು ಹಾಗೂ ಸಾವಿರಾರು ರೈತರು ಭಾಗಿಯಾಗಿದ್ದಾರೆ.