ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

N Ravikumar: ಸಿಎಸ್‌ ಕುರಿತು ಅವಹೇಳನ: ಬಿಜೆಪಿ ಎಂಎಲ್‌ಸಿ ರವಿಕುಮಾರ್‌ ವಿರುದ್ಧ ಸಭಾಪತಿಗೆ ದೂರು

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹರ ನೇತೃತ್ವದ ನಿಯೋಗ ಸಭಾಪತಿಗಳನ್ನು ಭೇಟಿಯಾಗಿ ಮನವಿ ನೀಡಿದೆ. ಬಿಜೆಪಿ ಎಂಎಲ್‌ಸಿ ರವಿಕುಮಾರ್‌ ಇತ್ತೀಚೆಗೆ ಕಲ್ಬುರ್ಗಿಯ ಜಿಲ್ಲಾಧಿಕಾರಿ ಫೌಜಿಯಾ ತರುನ್ನಂ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದರು. ಸರ್ಕಾರದ ಸಿಎಸ್ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಕಾಂಗ್ರೆಸ್ ತೀವ್ರ ಅಕ್ರೋಶ ವ್ಯಕ್ತಪಡಿಸಿದೆ.

ಸಿಎಸ್‌ ಕುರಿತು ಅವಹೇಳನ: ಎಂಎಲ್‌ಸಿ ರವಿಕುಮಾರ್‌ ವಿರುದ್ಧ ಸಭಾಪತಿಗೆ ದೂರು

ಎನ್‌ ರವಿಕುಮಾರ್

ಹರೀಶ್‌ ಕೇರ ಹರೀಶ್‌ ಕೇರ Jul 3, 2025 4:35 PM

ಬೆಂಗಳೂರು: ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗಳ (Chief secretary) ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವ ಬಿಜೆಪಿ ಎಂಎಲ್‌ಸಿ ಎನ್ ರವಿಕುಮಾರ್ (BJP MLC N Ravikumar) ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್‌ ನಿಯೋಗ ಸಭಾಪತಿಗಳಿಗೆ ದೂರು ನೀಡಿದೆ. ರವಿಕುಮಾರ್ ಹೆಣ್ಣು ಮಕ್ಕಳ ಬಗ್ಗೆ ಕೀಳಾಗಿ ಮಾತನಾಡಿದ್ದಾರೆ. ಈ ಹಿಂದೆ ಜಿಲ್ಲಾಧಿಕಾರಿಗಳ ವಿರುದ್ಧವೂ ಇದೇ ರೀತಿ ಮಾತನಾಡಿದ್ದರು. ಅವರನ್ನು ಎಂಎಲ್ಸಿ ಸ್ಥಾನದಿಂದ ರವಿಕುಮಾರ್ ಅವರನ್ನು ವಜಾಗೊಳಿಸಿ ಎಂದು ಮನವಿ ಮಾಡಿದೆ.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹರ ನೇತೃತ್ವದ ನಿಯೋಗ ಸಭಾಪತಿಗಳನ್ನು ಭೇಟಿಯಾಗಿ ಮನವಿ ನೀಡಿದೆ. ಬಿಜೆಪಿ ಎಂಎಲ್‌ಸಿ ರವಿಕುಮಾರ್‌ ಇತ್ತೀಚಿಗೆ ಸರ್ಕಾರಿ ಅಧಿಕಾರಿಗಳ ವಿರುದ್ಧ ನಾಲಿಗೆ ಹರಿಬಿಡುತ್ತಿದ್ದಾರೆ. ಇತ್ತೀಚೆಗೆ ಕಲ್ಬುರ್ಗಿಯ ಜಿಲ್ಲಾಧಿಕಾರಿ ಫೌಜಿಯಾ ತರುನ್ನಂ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದರು. ಸರ್ಕಾರದ ಸಿಎಸ್ ಶಾಲಿನಿ ರಜನಿಶ್ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಕಾಂಗ್ರೆಸ್ ತೀವ್ರ ಅಕ್ರೋಶ ವ್ಯಕ್ತಪಡಿಸಿದೆ.

ಜೂನ್ 30ರಂದು ಪ್ರತಿಭಟನೆ ವೇಳೆ ಶಾಲಿನಿ ರಜನೀಶ್ ಅವರನ್ನು ರವಿಕುಮಾರ್‌ ನಿಂದಿಸಿದ್ದಾರೆ. ಬೆಂಗಳೂರಿನಲ್ಲಿ ಸಿಎಸ್‌ಗೆ ದೂರು ಕೊಡಲು ನಿಯೋಗ ತೆರಳಿತ್ತು. ಈ ವೇಳೆ ರವಿಕುಮಾರ್ ಅವಹೇಳನಕಾರಿಯಾಗಿ ಮಾತನಾಡಿರುವ ಆರೋಪ ಕೇಳಿ ಬಂದಿದೆ. ಈ ಹಿಂದೆ ಕಲ್ಬುರ್ಗಿ ಜಿಲ್ಲಾಧಿಕಾರಿಯ ವಿರುದ್ಧ ಅವರು ನಾಲಿಗೆ ಹರಿಬಿಟ್ಟಿದ್ದರು. ಜಿಲ್ಲಾಧಿಕಾರಿ ಪಾಕಿಸ್ತಾನದಿಂದ ಬಂದಿದ್ದಾರಾ ಎಂದು ಹೇಳಿಕೆ ನೀಡಿದ್ದರು. ಇದೀಗ ಸಿಎಸ್ ವಿರುದ್ಧ ಮಾತನಾಡಿರುವ ಹಿನ್ನೆಲೆಯಲ್ಲಿ ಸಭಾಪತಿಗೆ ರವಿಕುಮಾರ್ ವಿರುದ್ಧ ದೂರು ನೀಡಲಾಗಿದೆ.

ಇದನ್ನೂ ಓದಿ: Laxmi Hebbalkar: ಎಂಎಲ್‌ಸಿ ರವಿಕುಮಾರ್ ಹೇಳಿಕೆ ಸಮಸ್ತ ಮಹಿಳಾ ಕುಲಕ್ಕೆ ಮಾಡಿರುವ ಅವಮಾನ: ಲಕ್ಷ್ಮೀ ಹೆಬ್ಬಾಳ್ಕರ್