ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IPL 2025 Suspended: 'ದೇಶ ಮೊದಲು'; ಐಪಿಎಲ್‌ ಟೂರ್ನಿ ರದ್ದುಗೊಳಿಸಿದ ಬಿಸಿಸಿಐ!

ಸಾಮಾಜಿಕ ತಾಣಗಳಲ್ಲೂ ಕ್ರೀಡಾಪ್ರೇಮಿಗಳು ಐಪಿಎಲ್‌ ಟೂರ್ನಿಯನ್ನು ಸ್ಥಗಿತಗೊಳಿಸಲು ಒತ್ತಾಯಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಐಪಿಎಲ್‌ ನಡೆಸುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು. ಇದೀಗ ಬಿಸಿಸಿಐ ಐಪಿಎಲ್‌ ಟೂರ್ನಿಯನ್ನು ಅರ್ಧಕ್ಕೆ ರದ್ದು ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ.

'ದೇಶ ಮೊದಲು'; ಐಪಿಎಲ್‌ ಟೂರ್ನಿ ರದ್ದುಗೊಳಿಸಿದ ಬಿಸಿಸಿಐ!

Profile Abhilash BC May 9, 2025 12:38 PM

ನವದೆಹಲಿ: ಆಪರೇಶನ್ ಸಿಂದೂರ(operation Sindoor) ನಡೆಸಿದ ಬಳಿಕ ಭಾರತ ಹಾಗೂ ಪಾಕಿಸ್ತಾನ(India-Pakistan tensions) ನಡುವಿನ ಉದ್ವಿಗ್ನತೆ(India-Pakistan Tensions) ಹೆಚ್ಚುತ್ತಿರುವ ಬೆನ್ನಲ್ಲೇ 18ನೇ ಆವೃತ್ತಿಯ ಐಪಿಎಲ್‌(IPL 2025 Suspended) ಟೂರ್ನಿಯನ್ನು ಅನಿರ್ದಿಷ್ಟಾವಧಿಗೆ ಅಮಾನತುಗೊಳಿಸಲಾಗಿದೆ .ದೇಶ ಯುದ್ಧದಲ್ಲಿರುವಾಗ ಕ್ರಿಕೆಟ್ ಮುಂದುವರಿಯುವುದು ಒಳ್ಳೆಯದಲ್ಲ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

"ನಾವು ದೇಶದ ಜತೆ ನಿಲ್ಲುವಂತೆ ಕಾಣಬೇಕೆಂದು ಬಯಸುತ್ತೇವೆ. ನಮ್ಮ ಆದ್ಯತೆ ರಾಷ್ಟ್ರ. ಆಟಗಾರರ ಸುರಕ್ಷತೆ ಅತಿಮುಖ್ಯ. ಕ್ರಿಕೆಟ್ ದೇಶಕ್ಕಿಂತ ಮಿಗಿಲಾದದ್ದಲ್ಲ" ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಬಿಸಿಸಿಐ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಐಪಿಎಲ್‌ ರದ್ದು ಎಂಬ ಸುದ್ದಿಯ ಬೆನ್ನಲ್ಲೇ ಆರ್‌ಸಿಬಿ ತನ್ನ ಅಧಿಕೃತ ಟ್ವಿಟರ್‌ ಎಕ್ಸ್‌ ಖಾತೆಯಲ್ಲಿ 'ಈ ರಾಷ್ಟ್ರೀಯ ಬಿಕ್ಕಟ್ಟಿನ ಸಮಯದಲ್ಲಿ, ನಮ್ಮ ಭಾರತೀಯ ಸಶಸ್ತ್ರ ಪಡೆಗಳ ಅಚಲ ಧೈರ್ಯ ಮತ್ತು ಶೌರ್ಯಕ್ಕೆ ನಾವು ನಮಸ್ಕರಿಸುತ್ತೇವೆ ಮತ್ತು ಭಾರತದ ಪ್ರತಿಯೊಬ್ಬರ ಸುರಕ್ಷತೆಗಾಗಿ ಪ್ರಾರ್ಥಿಸುತ್ತೇವೆ. ಜೈ ಹಿಂದ್‌! ಎಂದು ಪೋಸ್ಟ್‌ ಕೂಡ ಮಾಡಿದೆ.



ಸಾಮಾಜಿಕ ತಾಣಗಳಲ್ಲೂ ಕ್ರೀಡಾಪ್ರೇಮಿಗಳು ಐಪಿಎಲ್‌ ಸ್ಥಗಿತಗೊಳಿಸಲು ಒತ್ತಾಯಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಐಪಿಎಲ್‌ ನಡೆಸುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ IPL 2025: ಡೆಲ್ಲಿ vs ಪಂಜಾಬ್‌ ಪಂದ್ಯ ರದ್ದಾದ ಬಳಿಕ 7 ತಂಡಗಳ ಪ್ಲೇಆಫ್ಸ್‌ ಲೆಕ್ಕಾಚಾರ!

ಗುರುವಾರ ಬಿಸಿಸಿಐ ಉಪಾಧ್ಯಕ್ಷ ರಾಜೀವ್‌ ಶುಕ್ಲಾ, ‘ಭದ್ರತೆ ಕಾರಣಕ್ಕೆ ಗುರುವಾರದ ಪಂದ್ಯವನ್ನು ಅರ್ಧಕ್ಕೇ ಸ್ಥಗಿತಗೊಳಿಸಲಾಗಿತ್ತು. ಐಪಿಎಲ್ ಮುಂದುವರಿಸುವ ಬಗ್ಗೆ ನಾವು ಶುಕ್ರವಾರ ಅಂತಿಮ ನಿರ್ಧಾರ ಕೈಗೊಳ್ಳಲಿದ್ದೇವೆ. ಸದ್ಯದ ಮಟ್ಟಿಗೆ, ಆಟಗಾರರ ಭದ್ರತೆಯೇ ನಮ್ಮ ಮೊದಲ ಆದ್ಯತೆ’ ಎಂದು ತಿಳಿಸಿದ್ದರು.

ಹಿಮಾಚಲ ಪ್ರದೇಶದ ಧರ್ಮಶಾಲಾ ಕ್ರೀಡಾಂಗಣದಲ್ಲಿ ಗುರುವಾರ ನಡೆಯಬೇಕಿದ್ದ ಪಂಜಾಬ್ ಕಿಂಗ್ಸ್‌ ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌ ನಡುವೆ ಪಂದ್ಯವನ್ನು ಭಾರತೀಯ ಸೇನೆಯ ಸೂಚನೆ ಮೇರೆಗೆ ಪಂದ್ಯವನ್ನು ಸ್ಥಗಿತಗೊಳಿಸಲಾಗಿತ್ತು.