ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Cyber Fraud: ಸೈಬರ್‌ ವಂಚನೆ, ದಯಾನಾಯಕ್‌ ಹೆಸರು ಬಳಸಿ ಭೂವಿಜ್ಞಾನಿಯಿಂದ ಲಕ್ಷಾಂತರ ಹಣ ಸುಲಿಗೆ

Cyber Fraud: ಚಿಕ್ಕಬಳ್ಳಾಪುರದ ಸೈಬರ್ ಠಾಣೆ ಪೊಲೀಸರು, ದೂರು ದಾಖಲು ಮಾಡಿಕೊಂಡು ತನಿಖೆ ನಡೆಸಿದರು. ಆರೋಪಿಗಳು ಕಾಂಬೋಡಿಯಾದಲ್ಲಿ ಕುಳಿತು ವಂಚನೆ ಮಾಡಿರುವುದು ಬೆಳಕಿಗೆ ಬಂದಿದ್ದು, ಮುಂಬೈ ಎನ್ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ ಅವರ ಹೆಸರನ್ನು ದುರುಪಯೋಗ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಸೈಬರ್‌ ವಂಚನೆ, ದಯಾನಾಯಕ್‌ ಹೆಸರಿನಲ್ಲಿ ಭೂವಿಜ್ಞಾನಿಯಿಂದ ಹಣ ಸುಲಿಗೆ

ಹರೀಶ್‌ ಕೇರ ಹರೀಶ್‌ ಕೇರ Jul 17, 2025 7:32 AM

ಚಿಕ್ಕಬಳ್ಳಾಪುರ: ಎನ್ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ (Daya Nayak) ಹೆಸರಿನಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿವೃತ್ತ ಹಿರಿಯ ಭೂ ವಿಜ್ಞಾನಿಗೆ ಸೈಬರ್​ ವಂಚಕರು ಲಕ್ಷಾಂತರ ಹಣ ವಂಚಿಸಿರುವ (Cyber Fraud) ಘಟನೆ ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ಸಬ್ಬೇನಹಳ್ಳಿಯಲ್ಲಿ ನಡೆದಿದೆ. ಎನ್ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ ಹೆಸರಿನಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿವೃತ್ತ ಹಿರಿಯ ಭೂ ವಿಜ್ಞಾನಿ ಬಿ.ಕೆ. ರಾಮಚಂದ್ರಪ್ಪ ಹಾಗೂ ಇವರ ಪತ್ನಿ ಸುಜಾತ ಅವರಿಗೆ ಸೈಬರ್ ವಂಚಕರು ಕರೆ ಮಾಡಿದ್ದಾರೆ.

ʼಮುಂಬೈನ ಕೆನರಾ ಬ್ಯಾಂಕ್​ನಲ್ಲಿ ನಿಮ್ಮ ಹೆಸರಿನ ಖಾತೆ ಇದೆ. ಕೆಲವರು ನಿಮ್ಮ ಖಾತೆಯನ್ನು ಮನಿ ಲಾಂಡರಿಂಗ್​ಗೆ ಬಳಸಿಕೊಂಡಿದ್ದಾರೆ. ಇದರಿಂದ ನಿಮ್ಮ ವಿರುದ್ಧ ಆರೆಸ್ಟ್ ವಾರೆಂಟ್ ಜಾರಿಯಾಗಿದೆ. ನಿಮ್ಮ ಕೆನರಾ ಬ್ಯಾಂಕ್ ಖಾತೆಗೆ ಈ ಕೂಡಲೇ 12,65,000 ಹಣ ವರ್ಗಾವಣೆ ಮಾಡಿ, ಇಲ್ಲವಾದಲ್ಲಿ ನಿಮ್ಮ ಮನೆಯ ಮೇಲೆ ದಾಳಿ ಮಾಡಿ, ಬಂಧಿಸಬೇಕಾಗುತ್ತದೆʼ ಎಂದು ಹೆದರಿಸಿದ್ದಾರೆ.

ಸೈಬರ್​ ವಂಚಕರ ಮಾತಿನಿಂದ ಹೆದರಿದ ಬಿ.ಕೆ. ರಾಮಚಂದ್ರಪ್ಪ ಹಾಗೂ ಅವರ ಪತ್ನಿ ಮನೆಯಲ್ಲಿದ್ದ 200 ಗ್ರಾಂ ಚಿನ್ನಾಭರಣಗಳನ್ನು ಮುತ್ತೂಟ್ ಫೈನಾನ್ಸ್​ನಲ್ಲಿ ಅಡ ಇಟ್ಟು, ಬಂದ ಹಣವನ್ನು ವಂಚಕರು ಹೇಳಿದ ಕೆನರಾ ಬ್ಯಾಂಕ್​ ಖಾತೆಗೆ ಆರ್‌ಟಿಜಿಎಸ್ ಮಾಡಿ ಮೋಸ ಹೋಗಿದ್ದಾರೆ. ಈಗ ನ್ಯಾಯಕ್ಕಾಗಿ ಚಿಕ್ಕಬಳ್ಳಾಪುರ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಚಿಕ್ಕಬಳ್ಳಾಪುರದ ಸೈಬರ್ ಠಾಣೆ ಪೊಲೀಸರು, ದೂರು ದಾಖಲು ಮಾಡಿಕೊಂಡು ತನಿಖೆ ನಡೆಸಿದರು. ಆರೋಪಿಗಳು ಕಾಂಬೋಡಿಯಾದಲ್ಲಿ ಕುಳಿತು ವಂಚನೆ ಮಾಡಿರುವುದು ಬೆಳಕಿಗೆ ಬಂದಿದ್ದು, ಮುಂಬೈ ಎನ್ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ ಅವರ ಹೆಸರನ್ನು ದುರುಪಯೋಗ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: Fraud Case: ಸಿಎಂ, ಡಿಸಿಎಂ ಹೆಸರಲ್ಲಿ ಸ್ನೇಹಿತೆಯರಿಗೆ ಕೋಟಿ ಕೋಟಿ ವಂಚನೆ ಮಾಡಿದ್ದ ಮಹಿಳೆ ಅರೆಸ್ಟ್