Dharmasthala case: ಧರ್ಮಸ್ಥಳ ಕೇಸ್ ಹಿಂದಿನ ಮಾಸ್ಟರ್ ಮೈಂಡ್ ಕಾಂಗ್ರೆಸ್ ಸಂಸದ ಸಸಿಕಾಂತ್ ಸೆಂಥಿಲ್: ಜನಾರ್ದನ ರೆಡ್ಡಿ ಆರೋಪ
Janardhan reddy: ಧರ್ಮಸ್ಥಳದ ಸಂಪೂರ್ಣ ಪ್ರಕರಣದ ಹಿಂದಿನ ಮಾಸ್ಟರ್ ಮೈಂಡ್ ಸಂಸದ ಸಸಿಕಾಂತ್ ಸೆಂಥಿಲ್ ಆಗಿದ್ದಾನೆ. ಅನಾಮಿಕ ಮಾಸ್ಕ್ ಮ್ಯಾನ್ ಕೂಡ ತಮಿಳುನಾಡಿನವನಾಗಿದ್ದು, ಸಸಿಕಾಂತ್ ಸೆಂಥಿಲ್ ಅವರೊಂದಿಗೆ ನಿಕಟ ಸಂಬಂಧ ಹೊಂದಿದ್ದಾನೆ ಎಂದು ಜನಾರ್ದನ ರೆಡ್ಡಿ ಆರೋಪಿಸಿದ್ದಾರೆ.


ಬೆಂಗಳೂರು: ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿರುವ ಧರ್ಮಸ್ಥಳ ಪ್ರಕರಣದಲ್ಲಿ ದೊಡ್ಡ ಷಡ್ಯಂತ್ರ ನಡೆದಿದ್ದು, ಇದರಲ್ಲಿ ಕಾಂಗ್ರೆಸ್ ಸಂಸದ ಹಾಗೂ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ (Sasikanth Senthil) ಕೈವಾಡವಿದೆ ಎಂದು ಶಾಸಕ ಜನಾರ್ದನ ರೆಡ್ಡಿ (Janardhan reddy) ಗಂಭೀರ ಆರೋಪ ಮಾಡಿದ್ದಾರೆ.
ನಗರದಲ್ಲಿ ಈ ಕುರಿತು ಮಾತನಾಡಿರುವ ಅವರು, ತಮಿಳುನಾಡಿನ ಸಸಿಕಾಂತ್ ಸೆಂಥಿಲ್ ಕಾಂಗ್ರೆಸ್ ಹೈಕಮಾಂಡ್‌ನ ರೈಟ್ ಹ್ಯಾಂಡ್ ಆಗಿದ್ದಾನೆ. ಈ ಸಂಪೂರ್ಣ ಪ್ರಕರಣದ ಹಿಂದಿನ ಮಾಸ್ಟರ್ ಮೈಂಡ್ ಸಸಿಕಾಂತ್ ಸೆಂಥಿಲ್ ಆಗಿದ್ದಾನೆ. ಅನಾಮಿಕ ಮಾಸ್ಕ್ ಮ್ಯಾನ್ ಕೂಡ ತಮಿಳುನಾಡಿನವನಾಗಿದ್ದು, ಸಸಿಕಾಂತ್ ಸೆಂಥಿಲ್ ಅವರೊಂದಿಗೆ ನಿಕಟ ಸಂಬಂಧ ಹೊಂದಿದ್ದಾನೆ ಎಂದು ರೆಡ್ಡಿ ಆರೋಪಿಸಿದ್ದಾರೆ.
'ದಕ್ಷಿಣ ಕನ್ನಡದ ಇಬ್ಬರು ವ್ಯಕ್ತಿಗಳೊಂದಿಗೆ ಸಸಿಕಾಂತ್ ಸೆಂಥಿಲ್ ಸೇರಿ ಧರ್ಮಸ್ಥಳಕ್ಕೆ ಕೆಟ್ಟ ಹೆಸರು ತರುವ ಉದ್ದೇಶದಿಂದ ಕಾರ್ಯಸೂಚಿಗಳನ್ನು ಸಿದ್ಧಪಡಿಸಿದ್ದಾರೆ. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳಿಗೆ ಈ ಪ್ರಕರಣದಲ್ಲಿ ಆಸಕ್ತಿ ಇರಲಿಲ್ಲವಾದರೂ, ಹೈಕಮಾಂಡ್‌ನ ಒತ್ತಡ ತಂದು ಎಸ್‌ಐಟಿ ತನಿಖೆ ಮಾಡಿಸಲಾಗಿದೆ. ಎಡಪಂಥೀಯ ನಿಲುವುಗಳನ್ನು ಹೊಂದಿರುವ ಸಸಿಕಾಂತ್ ಸೆಂಥಿಲ್ ಅವರನ್ನು ತನಿಖೆಗೆ ಒಳಪಡಿಸಬೇಕು ಎಂದು ಜನಾರ್ದನ ರೆಡ್ಡಿ ಆಗ್ರಹಿಸಿದ್ದಾರೆ.
ಈ ಪ್ರಕರಣದ ಬಗ್ಗೆ ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್‌ನ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು, ಇಲ್ಲವೇ ಸಿಬಿಐ ತನಿಖೆ ನಡೆಸುವ ಅಗತ್ಯವಿದೆ ಎಂದು ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಸುದ್ದಿಯನ್ನೂ ಓದಿ | D Veerendra Heggade: ಧರ್ಮಸ್ಥಳ ವಿರುದ್ಧದ ಆರೋಪಗಳ ಬಗ್ಗೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಫಸ್ಟ್ ರಿಯಾಕ್ಷನ್
ಸಸಿಕಾಂತ್ ಸೆಂಥಿಲ್ ಯಾರು?
ಸಸಿಕಾಂತ್ ಸೆಂಥಿಲ್ 2009ರಿಂದ 2019ರವರೆಗೆ ಕರ್ನಾಟಕದಲ್ಲಿ ಐಎಎಸ್ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ. 2017 ರಿಂದ ದಕ್ಷಿಣ ಕನ್ನಡದಲ್ಲಿ ಜಿಲ್ಲಾಧಿಕಾರಿಯಾಗಿದ್ದು, 2019 ರಲ್ಲಿ ಹುದ್ದೆಗೆ ರಾಜೀನಾಮೆ ನೀಡಿ 2020 ರಲ್ಲಿ ಕಾಂಗ್ರೆಸ್ ಸೇರಿದ್ದರು. ಪ್ರಸ್ತುತ ತಮಿುನಾಡಿದ ತಿರುವಲ್ಲೂರು ಕ್ಷೇತ್ರದ ಕಾಂಗ್ರೆಸ್ ಸಂಸದರಾಗಿದ್ದಾರೆ.