IPL 2025: ಪ್ಲೇಆಫ್ಸ್ಗೆ ಅರ್ಹತೆ ಪಡೆಯಬಲ್ಲ 4 ತಂಡಗಳನ್ನು ಆರಿಸಿದ ಅಂಬಾಟಿ ರಾಯುಡು!
ಪ್ರಸ್ತುತ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ನಿರ್ಣಾಯಕ ಹಂತವನ್ನು ತಲುಪಿದೆ. ಪ್ಲೇಆಫ್ಸ್ಗೆ ಅರ್ಹತೆ ಪಡೆಯಲು 8 ತಂಡಗಳ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ. ಇದರ ನಡುವೆ ಚೆನ್ನೈ ಸೂಪರ್ ಕಿಂಗ್ಸ್ ಮಾಜಿ ಬ್ಯಾಟ್ಸ್ಮನ್ ಅಂಬಾಟಿ ರಾಯುಡು, ಈ ಬಾರಿ ಪ್ಲೇಆಫ್ಸ್ಗೆ ಅರ್ಹತೆ ಪಡೆಯಬಲ್ಲ ನಾಲ್ಕು ತಂಡಗಳನ್ನು ಆರಿಸಿದ್ದಾರೆ.



ನಿರ್ಣಾಯಕ ಘಟ್ಟ ತಲುಪಿರುವ ಐಪಿಎಲ್ 2025
ಪ್ರಸ್ತುತ ನಡೆಯುತ್ತಿರುವ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ನಿರ್ಣಾಯಕ ಘಟ್ಟವನ್ನು ತಲುಪಿದೆ. ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಟೂರ್ನಿಯಿಂದ ಹೊರ ಬಿದ್ದಿವೆ. ಇದೀಗ ಪ್ಲೇಆಫ್ಸ್ಗೆ ಅರ್ಹತೆ ಪಡೆಯಲು ಎಂಟು ತಂಡಗಳ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ.

ಅಂಬಾಟಿ ರಾಯುಡು ಭವಿಷ್ಯ
2025ರ ಐಪಿಎಲ್ ಟೂರ್ನಿಯ ಪ್ಲೇಆಫ್ಸ್ಗೆ ಅರ್ಹತೆ ಪಡೆಯಬಲ್ಲ ನಾಲ್ಕು ತಂಡಗಳನ್ನು ಭಾರತ ತಂಡದ ಮಾಜಿ ಬ್ಯಾಟ್ಸ್ಮನ್ ಅಂಬಾಟಿ ರಾಯುಡು ಆಯ್ಕೆ ಮಾಡಿದ್ದಾರೆ. ಇದರಲ್ಲಿ ಅವರು ಗುಜರಾತ್ ಟೈಟನ್ಸ್, ಪಂಜಾಬ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳನ್ನು ಆರಿಸಿದ್ದಾರೆ.

ಅನಿಲ್ ಕುಂಬ್ಳೆ ಭವಿಷ್ಯ
ಇದೇ ವೇಳೆ ಸ್ಪಿನ್ ದಿಗ್ಗಜ ಅನಿಲ್ ಕುಂಬ್ಲೆ ಅವರು ಕೂಡ ಈ ಬಾರಿ ಪ್ಲೇಆಫ್ಸ್ಗೆ ಅರ್ಹತೆ ಪಡೆಯಬಲ್ಲ ನಾಲ್ಕು ತಂಡಗಳನ್ನು ಆಯ್ಕೆ ಮಾಡಿದ್ದಾರೆ. ಗುಜರಾತ್ ಟೈಟನ್ಸ್, ಡೆಲ್ಲಿ ಕ್ಯಾಪಿಟಲ್ಸ್, ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್-ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ಪೈಕಿ ಒಂದನ್ನು ಆಯ್ಕೆ ಮಾಡಿದ್ದಾರೆ.

ಪ್ಲೇಆಫ್ಸ್ ಬಗ್ಗೆ ಕೈಫ್ ಭವಿಷ್ಯ
ಭಾರತ ತಂಡದ ಮಾಜಿ ಬ್ಯಾಟ್ಸ್ಮನ್ ಮೊಹಮ್ಮದ್ ಕೈಫ್ ಅವರು, ಪ್ಲೇಆಫ್ಸ್ಗೆ ಅರ್ಹತೆ ಪಡೆಯಬಲ್ಲ ತಮ್ಮ ನೆಚ್ಚಿನ ತಂಡಗಳನ್ನು ಆರಿಸಿದ್ದಾರೆ. ಇವರು ಗುಜರಾತ್ ಟೈಟನ್ಸ್, ಡೆಲ್ಲಿ ಕ್ಯಾಪಿಟಲ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳನ್ನು ಆಯ್ಕೆ ಮಾಡಿದ್ದಾರೆ.

ಮುಂಬೈ-ಆರ್ಸಿಬಿ ಪ್ರಾಬಲ್ಯ
10 ತಂಡಗಳಲ್ಲಿ 8 ತಂಡಗಳು ಪ್ಲೇಆಫ್ಸ್ಗೆ ತಲುಪಲು ಶ್ರಮಿಸುತ್ತಿವೆ. ಪ್ರಸ್ತುತ ಮುಂಬೈ ಇಂಡಿಯನ್ಸ್ ತಂಡ 14 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಅಷ್ಟೇ ಅಂಕಗಳೊಂದಿಗೆ ಆರ್ಸಿಬಿ ತಂಡ ಎರಡನೇ ಸ್ಥಾನದಲ್ಲಿದೆ. ಅದೇ ಸಮಯದಲ್ಲಿ, ಪಂಜಾಬ್ ಕಿಂಗ್ಸ್ 13 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ ಮತ್ತು ಗುಜರಾತ್ ಟೈಟನ್ಸ್ 12 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ.

ಅಗ್ರ ಎರಡು ಸ್ಥಾನಗಳ ಮೇಲೆ ಆರ್ಸಿಬಿ ಒಲವು
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ರಸ್ತುತ ಅತ್ಯುತ್ತಮ ಲಯದಲ್ಲಿದೆ. ಇಲ್ಲಿಯ ತನಕ ಆಡಿದ 10 ಪಂದ್ಯಗಳಲ್ಲಿ ಆರ್ಸಿಬಿ ಕೇವಲ ಮೂರು ಪಂದ್ಯಗಳಲ್ಲಿ ಸೋಲು ಅನುಭವಿಸಿದ್ದು, ಇನ್ನುಳಿದ ಏಳೂ ಪಂದ್ಯಗಳನ್ನು ಗೆದ್ದಿದೆ. ಆ ಮೂಲಕ ಪಾಯಿಂಟ್ಸ್ ಟೇಬಲ್ನಲ್ಲಿ ಎರಡನೇ ಸ್ಥಾನದಲ್ಲಿದೆ.