ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಸಂಸದ ಡಾ.ಕೆ.ಸುಧಾಕರ್ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ಧಾಗಲಿ : ಗ್ರಾಮಾಂತರ ಮಂಡಲ ಅಧ್ಯಕ್ಷ ಸಂತೋಷ್ ಆಗ್ರಹ

ಚಾಲಕ ಬಾಬು ಬೇರೆ ಬೇರೆ ಕಾರಣಗಳಿಂದ ಸಾಲ ಮಾಡಿದ್ದರು. ಅವರಿಗೆ ಕೆಲವರು ವಂಚಿಸಿದ್ದರು. ವಂಚಿಸಿದವರಲ್ಲಿ ಸರ್ಕಾರಿ ನೌಕರ ಮಂಜುನಾಥ್ ಇದ್ದಾರೆ. ಅವರು ನಮ್ಮ ನಾಯಕರ ಹೇಸರೇಳಿ ಹಣ ಪಡೆದಿದ್ದರೆ ವಂಚನೆಯೇ? ತನಿಖೆ ನಡೆಸಿ ಅವರ ವಿರುದ್ಧ ಕ್ರಮವಾಗಲಿ. ಆದರೆ ಇದರಲ್ಲಿ ಡಾ.ಕೆ.ಸುಧಾಕರ್ ಪಾತ್ರವೇನು ಎಂಬುದು ಸ್ಪಷ್ಟವಾಗಿಲ್ಲ

ಸಂಸದ ಡಾ.ಕೆ.ಸುಧಾಕರ್ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ಧಾಗಲಿ

Ashok Nayak Ashok Nayak Aug 10, 2025 11:00 AM

ಚಿಕ್ಕಬಳ್ಳಾಪುರ: ನಮ್ಮ ನಾಯಕ ಹಾಗೂ ಸಂಸದ ಡಾ.ಕೆ.ಸುಧಾಕರ್ ರವರ ಹೆಸರಿಗೆ ಕಳಂಕ ತರುವ ಉದ್ದೇಶದಿಂದ ಅವರ ವಿರುದ್ದ ಪಿತೂರಿ ನಡೆಸಿದ ಕಾಂಗ್ರೆಸ್ ದುರುದ್ದೇಶವಾಗಿ ಎಫ್‌ಐಆರ್ ದಾಖಲಿಸಿದೆ. ಸಂಸದರ ವಿರುಧ್ಧ ದಾಖಲಾಗಿರುವ ಎಫ್‌ಐಆರ್ ರದ್ದು ಮಾಡಬೇಕು ಎಂದು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಂತೋಷ್ ಆಗ್ರಹಿಸಿದರು.

ನಗರದ ಸಂಸದ ಡಾ.ಕೆ.ಸುಧಾಕರ್ ಅವರ ಗೃಹ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲಾ ಪಂಚಾಯತಿಯ ಗುತ್ತಿಗೆ ಚಾಲಕ ಎಂ.ಬಾಬು ಕಚೇರಿ ಆವರಣದಲ್ಲಿ ಆತ್ಮಹತ್ಯೆ ಪ್ರಕರಣದಲ್ಲಿ ಸಂಸದ ಡಾ.ಕೆ.ಸುಧಾಕರ್ ವಿರುದ್ಧ ಎಫ್‌ಐಆರ್ ಮಾಡಿ ಎ೧ ಆರೋಪಿ ಮಾಡಿದ್ದಾರೆ. ಆತ್ಮಹತ್ಯೆಗೆ ಅವರೇ ಸಂಪೂರ್ಣ ಒತ್ತಡ ಹೇರಿದರೆ ಮಾತ್ರ ಈ ರೀತಿ ಎಫ್‌ಐಆರ್ ಮಾಡಬೇಕಾಗುತ್ತದೆ. ಆದರೆ ಡಾ.ಕೆ.ಸುಧಾಕರ್ ಅವರಿಗೆ ಮೃತ ಚಾಲಕ ಬಾಬು ಅವರ ಜೊತೆ ಆಪ್ತ ಸಂಬಂಧವೇನೂ ಇಲ್ಲ. ಅಲ್ಲದೆ, ಈ ಪ್ರಕರಣದಲ್ಲಿ ಜಾತಿ ನಿಂದನೆಯ ಆರೋಪ ಬರುವುದೇ ಇಲ್ಲ. ಸಂಸದರು ಆ ವ್ಯಕ್ತಿಯನ್ನು ಎದುರಿಗೆ ನಿಲ್ಲಿಸಿಕೊಂಡು ನಿಂದಿಸಿಲ್ಲ, ಅಥವಾ ಸಂದೇಶ ಕಳುಹಿಸಿಲ್ಲ. ಆದರೂ ಆರೋಪಿ ಮಾಡಿರುವುದು ನೋಡಿದರೆ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಪ್ರತಿಪಕ್ಷಗಳ ನಾಯಕರನ್ನು ಗುರಿಯಾಗಿಸಿರುವುದು ಸ್ಪಷ್ಟವಾಗಿದೆ ಎಂದರು.

ಇದನ್ನೂ ಓದಿ: Chikkaballapur News: ರಾಜಲಕ್ಷ್ಮೀ ದೇವಸ್ಥಾನಕ್ಕೆ ಹರಿದು ಬಂದ ಭಕ್ತ ಸಾಗರ

ಚಾಲಕ ಬಾಬು ಬೇರೆ ಬೇರೆ ಕಾರಣಗಳಿಂದ ಸಾಲ ಮಾಡಿದ್ದರು. ಅವರಿಗೆ ಕೆಲವರು ವಂಚಿಸಿದ್ದರು. ವಂಚಿಸಿದವರಲ್ಲಿ ಸರ್ಕಾರಿ ನೌಕರ ಮಂಜುನಾಥ್ ಇದ್ದಾರೆ. ಅವರು ನಮ್ಮ ನಾಯಕರ ಹೇಸರೇಳಿ ಹಣ ಪಡೆದಿದ್ದರೆ ವಂಚನೆಯೇ? ತನಿಖೆ ನಡೆಸಿ ಅವರ ವಿರುದ್ಧ ಕ್ರಮವಾಗಲಿ. ಆದರೆ ಇದರಲ್ಲಿ ಡಾ.ಕೆ.ಸುಧಾಕರ್ ಪಾತ್ರವೇನು ಎಂಬುದು ಸ್ಪಷ್ಟವಾಗಿಲ್ಲ. ವಿರೋಧ ಪಕ್ಷದವರಿಗೆ ಕಿರುಕುಳ ಕೊಡಲು ಸರ್ಕಾರ ಹೀಗೆ ಮಾಡುತ್ತಿದೆ. ಪ್ರಕರಣದಲ್ಲಿ ಡೆತ್ ನೋಟ್ ಮುಂಚಿತವಾಗಿಯೇ ಸಿಕ್ಕರೂ ಅದನ್ನು ಪೊಲೀಸರಿಗೆ ಏಕೆ ತಿಳಿಸಿಲ್ಲ. ಚಾಲಕ ಬಾಬು ಅವರ ಕುಟುಂಬದವರು ಡಾ.ಕೆ.ಸುಧಾಕರ್ ಹೆಸರು ಪ್ರಸ್ತಾಪ ಮಾಡಿಲ್ಲ ಎಂದು ಹೇಳಿದ್ದರೂ, ಅವರನ್ನು ಬೇಕೆಂದೇ ಎ೧. ಆರೋಪಿ ಮಾಡಿ ದ್ದಾರೆ ಎಂದು ದೂರಿದರು.  

ಬಿಜೆಪಿ ಯುವ ಮುಖಂಡ ಮಂಡಿಕಲ್ ಆನಂದ್ ಮಾತನಾಡಿ,ಭಾರತೀಯ ಜನತಾ ಪಕ್ಷದ ನಾಯಕರಿಗೆ ಕಿರುಕುಳ ನೀಡಲು ಸರ್ಕಾರ ಪೊಲೀಸರನ್ನು ಬಳಸುತ್ತಿದೆ. ಚಾಲಕ ಬಾಬು ಆತ್ಮಹತ್ಯೆ ಪ್ರಕರಣದಲ್ಲಿ, ಸಂಸದ ಡಾ.ಕೆ.ಸುಧಾಕರ್ ಅವರ ಪಾತ್ರ ಇಲ್ಲದಿದ್ದರೂ ಅವರ ವಿರುದ್ದ ಎಫ್‌ಐಆರ್ ದಾಖಲಿಸಲಾಗಿದೆ. ಮಂಜುನಾಥ್ ಹಾಗೂ ನಾಗೇಶ್ ಹಣ ಪಡೆದು ಮೋಸ ಮಾಡಿದ್ದಾರೆ ಎಂದು ಚಾಲಕ ಬಾಬು ಆತ್ಮಹತ್ಯೆ ಪತ್ರದಲ್ಲಿ ಬರೆದಿದ್ದಾರೆ. ಹಾಗೆಯೇ ಆನ್ ಲೈನ್ ಗೇಮ್‌ನಿಂದಲೂ ನಷ್ಟವಾಗಿದೆ ಎಂದು ತಿಳಿಸಿದ್ದಾರೆ. ಇಲ್ಲಿ ಎಲ್ಲೂ ಸಂಸದ ಡಾ.ಕೆ.ಸುಧಾಕರ್ ಅವರ ಬಗ್ಗೆ ಆರೋಪ ಮಾಡಿಲ್ಲ.  ಸಂಸದರ ಬಳಿ ಯಾರೇ ಬಂದರೂ ಸಹಾಯ ಮಾಡುತ್ತಾರೆ. ಆದರೆ ಹಾಗೆ ಸಹಾಯ ಕೇಳಿ ಹೋದವರು ಆತ್ಮಹತ್ಯೆ ಮಾಡಿಕೊಂಡರೆ ಅದಕ್ಕೆ ನಾವೇ ಕಾರಣರಾಗುವುದಿಲ್ಲ ಎಂದರು.

ಯುವ ಮುಖಂಡ ಸುಮಾಮತ್ ರೆಡ್ಡಿ ಮಾತನಾಡಿ,ಚಾಲಕನಿಗೆ ಕೆಲಸ ಕೊಡಿಸಲು ಸಂಸದ ಡಾ. ಕೆ.ಸುಧಾಕರ್ ಈ ಹಿಂದೆ ಮೂರು ಬಾರಿ ಶಾಸಕರಾಗಿ, ಎರಡು ಬಾರಿ ಸಚಿವರಾಗಿ ಉತ್ತಮ ಕಾರ್ಯ ನಿರ್ವಹಿಸಿದ್ದು, ಅವರ ಅವಧಿಯಲ್ಲಿ ಸಾವಿರಾರು ಯುವಕರಿಗೆ ಯಾವುದೇ ಫಲಾಪೇಕ್ಷೆ ಇಲ್ಲದೆ ಉದ್ಯೂಗಗಳನ್ನು ಕೊಡಿಸಿದ್ದಾರೆ . ಅವರ ವಿರುದ್ಧ ವಿನಾಕಾರಣ ಸಂಚು ಮಾಡಲಾಗಿದೆ. ದೂರಿನಲ್ಲಿ ಮೊದಲು ನಾಗೇಶ್ ಮತ್ತು ಮಂಜುನಾಥ್ ಹೆಸರಿತ್ತು. ಆದರೆ ಕಾಂಗ್ರೆಸ್ ನವರು ಷಡ್ಯಂತ್ರ ಮಾಡಿ ನಮ್ಮ ನಾಯಕ ಸುಧಾಕರ್ ಹೆಸರು ಸೇರಿಸಿ ಎ೧ ಮಾಡಿದ್ದಾರೆ. ಆದ್ದರಿಂದ ಈ ಎಫ್‌ಐಆರ್‌ನಿಂದ ಹೆಸರು ಕೈ ಬಿಡಬೇಕು. ಇಲ್ಲವಾದರೆ ಕೋರ್ಟ್ನಲ್ಲಿ ನಮಗೆ ನ್ಯಾಯ ದೊರೆತು ಸರ್ಕಾರಕ್ಕೆ ಮುಖಭಂಗವಾಗುತ್ತದೆ ಎಂದು ಎಚ್ಚರಿಸಿದರು.