Electric Shock: ಬೀದರ್‌ನಲ್ಲಿ ಪಂಪ್ ಸೆಟ್ ಆನ್ ಮಾಡಲು ಹೋದಾಗ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾವು
Electric Shock: ಬೀದರ್ ಜಿಲ್ಲೆ ಹುಲಸೂರು ತಾಲೂಕಿನ ತೋಗಲೂರ ಗ್ರಾಮದಲ್ಲಿ ಅವಘಡ ನಡೆದಿದೆ. ಹೊಸ ಮನೆ ನಿರ್ಮಾಣ ಮಾಡುತ್ತಿರುವಾಗ ಮನೆಗೆ ನೀರು ಹಾಕಲು ಪಂಪ್ ಸೆಟ್ ಆನ್ ಮಾಡಲು ಹೋದಾಗ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.


ಬೀದರ್: ಹೊಸ ಮನೆ ನಿರ್ಮಾಣ ಮಾಡುತ್ತಿರುವಾಗ ಮನೆಗೆ ನೀರು ಹಾಕಲು ಪಂಪ್ ಸೆಟ್ ಆನ್ ಮಾಡಲು ಹೋದಾಗ ವಿದ್ಯುತ್ ಸ್ಪರ್ಶಿಸಿ 8ನೇ ತರಗತಿಯ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ (Electric Shock) ಹುಲಸೂರು ತಾಲೂಕಿನ ತೋಗಲೂರ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಪಲ್ಲವಿ ರಾಜೇಂದ್ರ ದೇವಗೊಂಡ (15) ಎಂದು ಗುರುತಿಸಲಾಗಿದೆ. ಸೋಮವಾರ ಬೆಳಗ್ಗೆ ಹೊಸ ಮನೆಗೆ ನೀರು ಹಾಕಲು ನೀರಿನ ಮೋಟರ್ ಆನ್ ಮಾಡಲು ಹೋದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಘಟನೆ ನಡೆದಿದೆ ತಿಳಿದು ಬಂದಿದೆ. ಈ ಕುರಿತು ಹುಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ತಂದೆಯ ಗನ್‌ನಿಂದ ಗುಂಡು ಸಿಡಿಸಿಕೊಂಡು ಮಗ ಆತ್ಮಹತ್ಯೆ

ದೇವನಹಳ್ಳಿ: ತಂದೆಯ ಸಿಂಗಲ್ ಬ್ಯಾರಲ್ ಗನ್‌ನಿಂದ ಗುಂಡು ಹಾರಿಸಿಕೊಂಡು (firing) ಮಾಡಿಕೊಂಡು ಮಗ ಆತ್ಮಹತ್ಯೆ (self harming) ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ (Devanahalli) ತಾಲೂಕಿನ ಗ್ರಾಮದಲ್ಲಿ ನಡೆದಿದೆ. ನಿನ್ನೆ ಮುಂಜಾನೆ ಫಾರ್ಮ್ಹೌಸ್ನಲ್ಲಿ ಬೈಯೇಶ್(28) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೈಯೇಶ್ ಇತ್ತೀಚೆಗಷ್ಟೆ ವಿದೇಶದಲ್ಲಿ ವಿದ್ಯಾಭ್ಯಾಸ ಮುಗಿಸಿ ಬಂದಿದ್ದ.
ನಿನ್ನೆ ಮನೆಯ ಕುಟುಂಬಸ್ಥರು ಎಲ್ಲಾ ತಿರುಪತಿಗೆ ಹೋಗಿದ್ದಾರೆ. ಬೈಯೇಶ್ ಮನೆಯಲ್ಲಿ ಒಬ್ಬಂಟಿಯಾಗಿದ್ದರು. ಏಕಾಏಕಿ ಫೈರಿಂಗ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಮುಂಜಾನೆ ಕುಟುಂಬಸ್ಥರು ವಾಪಸ್ ಬಂದು ನೋಡಿದಾಗ ಆತ್ಮಹತ್ಯೆ ಬೆಳಕಿಗೆ ಬಂದಿದೆ. ಸದ್ಯ ಸ್ಥಳಕ್ಕೆ ತಿರುಮಲಶೆಟ್ಟಿಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
ಆಸ್ತಿಗಾಗಿ ತಾಯಿ- ಮಗನ ಕೊಂದು ಪರಾರಿ
ಬಾಗಲಕೋಟೆ: ಜಿಲ್ಲೆಯಲ್ಲಿ ಆಸ್ತಿಗಾಗಿ (property dispute) ಇಬ್ಬರನ್ನು ಬರ್ಬರವಾಗಿ ಕೊಚ್ಚಿ ಕೊಲೆ (Double Murder Case) ಮಾಡಲಾಗಿದೆ. ಬಾಗಲಕೋಟೆ (Bagalakote news) ಜಿಲ್ಲೆಯ ಇಳಕಲ್ ತಾಲ್ಲೂಕಿನ ನಂದವಾಡಗಿ ಗ್ರಾಮದಲ್ಲಿ ಆಸ್ತಿ ವಿವಾದಕ್ಕೆ ವ್ಯಕ್ತಿಯೊಬ್ಬ ತಾಯಿ, ಮಗನನ್ನೇ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ತಾಯಿ ಸಂಗಮ್ಮ ಗೋನಾಳ (45), ಮಗ ಸೋಮಪ್ಪ (26) ಎಂಬವರನ್ನು ಕೊಡಲಿಯಿಂದ ಕೊಚ್ಚಿ ಸಣ್ಣ ಸೋಮಪ್ಪ ಗೋನಾಳ ಎಂಬಾತ ಹತ್ಯೆ ಮಾಡಿದ್ದಾನೆ. ಸ್ಥಳಕ್ಕೆ ಇಳಕಲ್ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ: Murder Case: ಬೆಂಗಳೂರಿನಲ್ಲೊಂದು ಪೈಶಾಚಿಕ ಕೃತ್ಯ, ಪಕ್ಕದ ಮನೆಯವರ ಮೇಲಿನ ದ್ವೇಷಕ್ಕೆ ಬಾಲಕನ ಅಪಹರಿಸಿ ಬರ್ಬರ ಕೊಲೆ
ಟೆಂಪೋ ಡಿಕ್ಕಿಯಾಗಿ ಬೈಕ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ
ಹೊಸಕೋಟೆ: ಟೆಂಪೋ ಡಿಕ್ಕಿಯಾಗಿ ಬೈಕ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಚಿಕ್ಕಹುಲ್ಲೂರು ಗ್ರಾಮದ ಬಳಿ ನಡೆದಿದೆ. ಮತ್ತೊಬ್ಬನಿಗೆ ಗಂಭೀರ ಗಾಯವಾಗಿದ್ದು, ಹೊಸಕೋಟೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಸಕೋಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.