ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಮುತ್ತತ್ತಿಯ ಕಾವೇರಿ ನದಿಯಲ್ಲಿ ಸರಣಿ ಸಾವು; ಜೀವಹಾನಿ ತಡೆಗೆ ಕ್ರಮ ಕೈಗೊಳ್ಳಲು ಗೃಹ ಸಚಿವ ಪ್ರಿಯಾಂಕ್‌ ಖರ್ಗೆಗೆ ಎಚ್‌ಡಿಕೆ ಪತ್ರ

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಪ್ರಸಿದ್ಧ ಪ್ರವಾಸಿ ಕ್ಷೇತ್ರವಾಗಿರುವ ಮುತ್ತತ್ತಿಯ ಕಾವೇರಿ ನದಿಯಲ್ಲಿ ಫೋಟೊ ತೆಗೆಸಿಕೊಳ್ಳಲು ಹೋಗಿ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪತ್ರ ಬರೆದಿದ್ದು, ಮುತ್ತತ್ತಿಯಲ್ಲಿ ಪ್ರಾಣಹಾನಿ ತಡೆಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಮುತ್ತತ್ತಿಯಲ್ಲಿ ಜೀವಹಾನಿ ತಡೆಗೆ ಕ್ರಮ ಕೈಗೊಳ್ಳಿ: ಎಚ್‌ಡಿಕೆ ಆಗ್ರಹ

-

Prabhakara R
Prabhakara R Jun 26, 2026 10:30 PM

ಬೆಂಗಳೂರು: ಮಂಡ್ಯ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಮುತ್ತತ್ತಿಯಲ್ಲಿ ಕಾವೇರಿ ನದಿಯ ನೀರಿನ ಸುಳಿಗೆ ಸಿಲುಕಿ ಸಂಭವಿಸುತ್ತಿರುವ ಸರಣಿ ಸಾವುಗಳನ್ನು ತಡೆಯಲು ತುರ್ತು ಕ್ರಮ ಕೈಗೊಳ್ಳುವಂತೆ ಹಾಗೂ ಅಲ್ಲಿ 'ಪೊಲೀಸ್ ಉಪ ಠಾಣೆ' ಸ್ಥಾಪಿಸುವಂತೆ ರಾಜ್ಯ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ (Priyank Kharge) ಅವರಿಗೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ (H D Kumaraswamy) ಅವರು ಮನವಿ ಮಾಡಿದ್ದಾರೆ.

ಈ ಬಗ್ಗೆ ಪತ್ರ ಬರೆದಿರುವ ಕೇಂದ್ರ ಸಚಿವರು, ಪ್ರವಾಸಿಗರ ಅಮೂಲ್ಯ ಪ್ರಾಣ ರಕ್ಷಣೆಯ ದೃಷ್ಟಿಯಿಂದ ನದಿ ದಂಡೆಗೆ ಮುಳ್ಳಿನ ತಂತಿ ಬೇಲಿ, ಎಚ್ಚರಿಕೆ ಫಲಕ ಹಾಗೂ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸುವಂತೆ ಒತ್ತಾಯಿಸಲಾಗಿದೆ. ರಾಜ್ಯ ಗೃಹ ಇಲಾಖೆ ಕೂಡಲೇ ಎಚ್ಚೆತ್ತು ಕಾರ್ಯಪ್ರವೃತ್ತವಾಗಲಿ ಎಂದು ಕೋರಿದ್ದಾರೆ.

ಮನವಿ ಪತ್ರದಲ್ಲಿ ಏನಿದೆ?

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ಹತ್ತಿರ ಇರುವ ಪ್ರಸಿದ್ಧ ಪ್ರವಾಸಿ ಕ್ಷೇತ್ರವಾಗಿರುವ ಮುತ್ತತ್ತಿಯಲ್ಲಿರುವ ಕಾವೇರಿ ನದಿಯಲ್ಲಿ ನಿರಂತರವಾಗಿ ಪ್ರವಾಸಿಗರು ನದಿಯ ನೀರಿನ ಸುಳಿಗಳಿಗೆ ಸಿಲುಕಿ ತಮ್ಮ ಅಮೂಲ್ಯ ಜೀವಗಳನ್ನು ಕಳೆದುಕೊಳ್ಳುತ್ತಿದ್ದಾರೆ.

ನದಿಯಲ್ಲಿ ನಿಗೂಢವಾಗಿರುವ ಸುಳಿಗಳಿಗೆ ಸಿಲುಕಿ ಪ್ರವಾಸಿಗರು ಜೀವ ತೆರುತ್ತಿರುವ ಪ್ರಕರಣಗಳು ದಿನೇದಿನ ಹೆಚ್ಚಾಗುತ್ತಿದ್ದು, ಕಳೆದ ಐದು ತಿಂಗಳಲ್ಲಿ 11ಕ್ಕೂ ಹೆಚ್ಚು ಪ್ರವಾಸಿಗರು ಈಜಲು ಹೋಗಿ ದುರಂತ ಮರಣ ಹೊಂದಿದ್ದಾರೆ. ಕಳೆದ ಐದು ವರ್ಷಗಳಲ್ಲಿ 36ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ ಎಂದು ಅಂಕಿ ಅಂಶಗಳು ಹೇಳುತ್ತವೆ. ಈ ಸಾವುಗಳಿಗೆ ತಡೆ ಹಾಕುವ ತುರ್ತು ಅಗತ್ಯವಿದೆ.



ಮುತ್ತತ್ತಿ ಕ್ಷೇತ್ರವು ನಾಡಿನಲ್ಲಿ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದಾಗಿದೆ. ಇಲ್ಲಿನ ಶ್ರೀ ಆಂಜನೇಯ ಸ್ವಾಮಿ ದೇವಾಲಯಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಬರುತ್ತಾರೆ. ಭಕ್ತರು ನದಿಗೆ ಇಳಿದು ಪುಣ್ಯಸ್ನಾನ ಮಾಡುತ್ತಾರೆ. ಆದರೆ ಇಲ್ಲಿ ಎಚ್ಚರಿಕೆ ಫಲಕಗಳು, ರಕ್ಷಣಾ ಸಿಬ್ಬಂದಿ ಇಲ್ಲದ ಕಾರಣ ತಮಗೆ ಅರಿವಿಲ್ಲದೆಯೇ ಜನರು ಸಾವಿನ ದವಡೆಗೆ ಸಿಲುಕುತ್ತಿದ್ದಾರೆ.

Bidadi township: ಬಿಡದಿಯಲ್ಲಿ ರೈತರನ್ನು ಒಕ್ಕಲೆಬ್ಬಿಸಲು ಬಿಜೆಪಿ ಬಿಡಲ್ಲ; ಶೀಘ್ರದಲ್ಲೇ ಹೋರಾಟ ಎಂದ ವಿಜಯೇಂದ್ರ

ಈ ಹಿನ್ನೆಲೆಯಲ್ಲಿ ಮುತ್ತತ್ತಿ ನದಿ ಭಾಗದ ಪ್ರದೇಶದಲ್ಲಿ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಬೇಕು, ಎಚ್ಚರಿಕೆಯ ಫಲಕಗಳನ್ನು ಅಳವಡಿಸಬೇಕು ಮತ್ತು ನದಿಗೆ ಇಳಿಯದಂತೆ ತಡೆಯಲು ದಂಡೆಯ ಉದ್ದಕ್ಕೂ ಮುಳ್ಳಿನ ತಂತಿ ಹಾಗೂ ಬ್ಯಾರಿಕೇಡ್‌ಗಳನ್ನು ಅಳವಡಿಸಲು ತುರ್ತುಕ್ರಮ ಕೈಗೊಳ್ಳಬೇಕು ಹಾಗೂ ಮುತ್ತತ್ತಿಯಲ್ಲಿ ಒಂದು ಪೊಲೀಸ್ ಉಪ ಠಾಣೆಯನ್ನು ಸ್ಥಾಪಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಕೋರುತ್ತೇನೆ.