ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Vishwavani Editorial: ಹೃದಯಾಘಾತ: ಆತಂಕ ಬೇಡ

ಆಧುನಿಕ ಜೀವನ ಶೈಲಿ, ಅಸುರಕ್ಷಿತ ಆಹಾರ ಕ್ರಮ, ದೈನಂದಿನ ಜೀವನದಲ್ಲಿ ಮಾನಸಿಕ ಒತ್ತಡ ಹಾಗೂ ಅತಿಯಾದ ಮೊಬೈಲ್ ಫೋನ್ ಬಳಕೆಯಿಂದ ಇತ್ತೀಚಿನ ದಿನಗಳಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ತಜ್ಞರು ಕೂಡ ಅಭಿಪ್ರಾಯಪಟ್ಟಿದ್ದಾರೆ. ಹೀಗಾಗಿ ಸಾರ್ವ ಜನಿಕರು ಆಸ್ಪತ್ರೆಗಳಿಗೆ ಧಾವಿಸುವುದಕ್ಕಿಂತ ಜೀವನಶೈಲಿಯನ್ನು ಬದಲಿಸಿಕೊಳ್ಳುವುದರತ್ತ ಗಮನ ಹರಿಸಬೇಕಾದ ಅಗತ್ಯವಿದೆ.

ಹೃದಯಾಘಾತ: ಆತಂಕ ಬೇಡ

Profile Ashok Nayak Jul 10, 2025 3:18 PM

ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಳವಾಗಿದ್ದು, ರಾಜ್ಯ ದೆಲ್ಲೆಡೆ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಮೊದಲೆಲ್ಲಾ ವಯಸ್ಕರರಿಗೆ ಮಾತ್ರ ಹೃದಯಾ ಘಾತವಾಗುತ್ತದೆ ಎನ್ನಲಾಗಿತ್ತು. ಆದರೆ ಇದೀಗ ಚಿಕ್ಕ ಮಕ್ಕಳು ಕೂಡ ಹೃದಯಾಘಾತಕ್ಕೆ ಬಲಿಯಾ ಗುತ್ತಿವೆ. ಈ ವರ್ಷದ ಆರಂಭದಲ್ಲಿ, ಚಾಮರಾಜನಗರ ಜಿಲ್ಲೆಯಲ್ಲಿ ಎಂಟು ವರ್ಷದ ಬಾಲಕಿ ಯೊಬ್ಬಳು ಹೃದಯ ಸ್ತಂಭನದಿಂದ ಸಾವಿಗೀಡಾಗಿದ್ದಳು.

ಆ ಘಟನೆ ಮಾಸುವ ಮುನ್ನವೇ ಬುಧವಾರ ಗುಂಡ್ಲುಪೇಟೆಯಲ್ಲಿ 10 ವರ್ಷದ ಬಾಲಕನೊಬ್ಬ ಮೃತಪಟ್ಟಿದ್ದಾನೆ. ಇದರಿಂದ ಭೀತಿಗೊಳಗಾಗಿರುವ ಜನರು ಹೃದಯ ತಪಾಸಣೆಗಾಗಿ ಆಸ್ಪತ್ರೆಗಳಿಗೆ ಮುಗಿಬೀಳುತ್ತಿದ್ದಾರೆ. ಕೋವಿಡ್ ಲಸಿಕೆಯಿಂದ ಹೃದಯಾಘಾತ ಸಂಭವಿಸುತ್ತಿವೆ ಎಂಬುದು ಬಹುತೇಕರ ಗುಮಾನಿಯಾಗಿತ್ತು. ಆದರೆ ಸರಕಾರ ನೇಮಿಸಿದ್ದ ಸಮಿತಿಯು ಕೋವಿಡ್ ಲಸಿಕೆಗೂ ಹೃದಯಾಘಾತಕ್ಕೂ ಸಂಬಂಧವಿಲ್ಲವೆಂದು ತಿಳಿಸಿದ ಬಳಿಕ ಜೀವನಶೈಲಿಯಲ್ಲಿ ಆಗಿರುವ ಬದಲಾವಣೆಗಳಿಗೂ ಇರಬಹುದಾದ ಸಂಬಂಧದ ಬಗ್ಗೆ ವಿಶ್ಲೇಷಣೆಗಳೂ ನಡೆದಿವೆ.

ಇದನ್ನೂ ಓದಿ: Vishwavani Editorial: ಮೂಗನ್ನು ಹಿಡಿದಾಗ ತೆರೆದ ಬಾಯಿ!

ಆಧುನಿಕ ಜೀವನ ಶೈಲಿ, ಅಸುರಕ್ಷಿತ ಆಹಾರ ಕ್ರಮ, ದೈನಂದಿನ ಜೀವನದಲ್ಲಿ ಮಾನಸಿಕ ಒತ್ತಡ ಹಾಗೂ ಅತಿಯಾದ ಮೊಬೈಲ್ ಫೋನ್ ಬಳಕೆಯಿಂದ ಇತ್ತೀಚಿನ ದಿನಗಳಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ತಜ್ಞರು ಕೂಡ ಅಭಿಪ್ರಾಯಪಟ್ಟಿದ್ದಾರೆ. ಹೀಗಾಗಿ ಸಾರ್ವ ಜನಿಕರು ಆಸ್ಪತ್ರೆಗಳಿಗೆ ಧಾವಿಸುವುದಕ್ಕಿಂತ ಜೀವನಶೈಲಿಯನ್ನು ಬದಲಿಸಿಕೊಳ್ಳುವುದರತ್ತ ಗಮನ ಹರಿಸಬೇಕಾದ ಅಗತ್ಯವಿದೆ. ಅಸುರಕ್ಷಿತ ಆಹಾರ ಸೇವನೆ ತ್ಯಜಿಸಿ ಮನೆಯಲ್ಲಿ ತಯಾರಿಸಿದ ಆಹಾರ ಸೇವನೆ ಮಾಡುವುದು, ಪ್ರತಿ ದಿನ ಯೋಗ ಅಥವಾ ದೈಹಿಕ ವ್ಯಾಯಾಮದ ಚಟುವಟಿಕೆ ಗಳನ್ನು ರೂಢಿಸಿಕೊಳ್ಳುವುದು, ಮೊಬೈಲ್ ಫೋನ್ ಮಿತವಾಗಿ ಬಳಸುವುದನ್ನು ರೂಢಿಸಿಕೊಳ್ಳಬೇಕಿದೆ.

ಪ್ರತಿ ಮೂರು ತಿಂಗಳಿಗೊಮ್ಮೆಯಾದರೂ, ಹೃದಯದ ಆರೋಗ್ಯ ಸಂಬಂಧಿ ರಕ್ತ ಪರೀಕ್ಷೆ ಮತ್ತು ಇತರೆ ಪರೀಕ್ಷೆಗಳನ್ನು ಮಾಡಿಸಿಕೊಳ್ಳಬೇಕಿದೆ. ಸಾರ್ವಜನಿಕರಿಗೆ ಇದರ ಬಗ್ಗೆ ಅರಿವು ಮೂಡಿಸುವ ಅಗತ್ಯವಿದೆ. ಸಾರ್ವಜನಿಕರು ಯಾವುದೇ ಗೊಂದಲಕ್ಕೆ ಒಳಗಾಗದೆ ಹೃದಯ ಸಂಬಂಧಿ ಕಾಯಿಲೆ ಗಳನ್ನು ಪ್ರಾರಂಭಿಕ ಹಂತದಲ್ಲಿ ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ಪಡೆಯುವುದು ಒಳ್ಳೆಯದು.