Karnataka Weather: ರಾಜ್ಯದ ಉತ್ತರ, ದಕ್ಷಿಣ ಒಳನಾಡಲ್ಲಿ ಏ.24ರವರೆಗೆ ಮುಂದುವರಿಯಲಿದೆ ಮಳೆಯ ಅಬ್ಬರ
Karnataka Rains: ಮುಂದಿನ 5 ದಿನಗಳವರೆಗೆ ರಾಜ್ಯದಾದ್ಯಂತ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಹಗಲಿನಲ್ಲಿ ಆಕಾಶವು ಬಹುತೇಕ ಶುಭ್ರವಾಗಿದ್ದು, ರಾತ್ರಿ ವೇಳೆಗೆ ಭಾಗಶಃ ಮೋಡ ಕವಿದಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 34°C ಮತ್ತು 23°C ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


ಬೆಂಗಳೂರು: ರಾಜ್ಯದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಸಹಿತ ಮಳೆ (Karnataka Weather) ಅಬ್ಬರಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಇನ್ನು ಏಪ್ರಿಲ್ 22ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ, ಉತ್ತರ ಒಳನಾಡಿನ ಬೆಳಗಾವಿ, ಹಾವೇರಿ, ಗದಗ, ಧಾರವಾಡ, ಕೊಪ್ಪಳ ಜಿಲ್ಲೆ ಹಾಗೂ ದಕ್ಷಿಣ ಒಳನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು ಮತ್ತು ಮದ್ಯ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಏಪ್ರಿಲ್ 23ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಹಾವೇರಿ, ಗದಗ ಮತ್ತು ಧಾರವಾಡ ಜಿಲ್ಲೆ, ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಏ. 24ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ, ಉತ್ತರ ಒಳನಾಡಿನ ಹಾವೇರಿ, ಗದಗ, ಧಾರವಾಡ, ಕೊಪ್ಪಳ, ಬೆಳಗಾವಿ, ರಾಯಚೂರು, ಯಾದಗಿರಿ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಮಂಡ್ಯ, ತುಮಕೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಮುಂದಿನ 5 ದಿನಗಳ #ಹವಾಮಾನ #ಮುನ್ಸೂಚನೆ ಮತ್ತು #ಎಚ್ಚರಿಕೆಗಳು: (ಮೂಲ: IMD)
— Karnataka State Natural Disaster Monitoring Centre (@KarnatakaSNDMC) April 21, 2025
ರಾಜ್ಯದಾದ್ಯಂತ ಮುಂದಿನ 5 ದಿನಗಳವರೆಗೆ ಅಲ್ಲಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 30-50 ಕಿಮೀ ತಲುಪುವ ಸಾದ್ಯತೆಯಿದ್ದು, ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ pic.twitter.com/H86IT9wLhi
ಏ.25ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಮಂಡ್ಯ, ಕೊಡಗು, ದಾವಣಗೆರೆ, ಬಳ್ಳಾರಿ, ದಾವಣಗೆರೆ ಮತ್ತು ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಈ ಸುದ್ದಿಯನ್ನೂ ಓದಿ | Health Tips: ನಮಗೆ ಒಆರ್‌ಎಸ್ ಅಗತ್ಯ ಬೀಳುವುದು ಯಾವಾಗ?
ಇನ್ನು ಏ. 26 ಮತ್ತು 27ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ, ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ಕೊಪ್ಪಳ, ಗದಗ, ಧಾರವಾಡ, ಹಾವೇರಿ, ಬಾಗಲಕೋಟೆ, ಕಲಬುರಗಿ, ವಿಜಯಪುರ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಮಂಡ್ಯ, ಕೊಡಗು, ದಾವಣಗೆರೆ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ವಿಜಯನಗರ ಮತ್ತು ಹಾಸನ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.