ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IND vs AUS: ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್‌ಗೆ ಭಾರತದ ಸಂಭಾವ್ಯ ಪ್ಲೇಯಿಂಗ್‌ XI ವಿವರ!

India's Probable Playin XI for Semifinal vs AUS: ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮಂಗಳವಾರ ದುಬೈ ಇಂಟರ್‌ನ್ಯಾಷನಲ್‌ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯುವ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ ಸೆಮಿಫೈನಲ್‌ನಲ್ಲಿ ಕಾದಾಟ ನಡೆಸಲಿವೆ. ಈ ಪಂದ್ಯಕ್ಕೆ ಭಾರತ ತಂಡದ ಸಂಭಾವ್ಯ ಪ್ಲೇಯಿಂಗ್‌ XI ಅನ್ನು ಇಲ್ಲಿ ವಿವರಿಸಲಾಗಿದೆ.

ಆಸ್ಟ್ರೇಲಿಯಾ ವಿರುದ್ಧದ ಸೆಮೀಸ್‌ಗೆ ಭಾರತದ ಸಂಭಾವ್ಯ ಪ್ಲೇಯಿಂಗ್‌  XI

ಭಾರತ ತಂಡದ ಸಂಭಾವ್ಯ ಪ್ಲೇಯಿಂಗ್‌ XI

Profile Ramesh Kote Mar 3, 2025 4:46 PM

ದುಬೈ: ನ್ಯೂಜಲೆಂಡ್‌ ವಿರುದ್ಧದ 2025ರ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ ಕೊನೆಯ ಲೀಗ್‌ ಪಂದ್ಯದಲ್ಲಿ ಭಾರತ ತಂಡ 44 ರನ್‌ಗಳಿಂದ ಗೆಲುವು ಪಡೆದಿತ್ತು. ಆ ಮೂಲಕ ಲೀಗ್‌ ಹಂತದಲ್ಲಿ ಆಡಿದ ಮೂರೂ ಪಂದ್ಯಗಳಲ್ಲಿ ಗೆಲುವು ಪಡೆಯುವ ಮೂಲಕ ಟೀಮ್‌ ಇಂಡಿಯಾ ಎ ಗುಂಪಿನ ಪಾಯಿಂಟ್ಸ್‌ ಟೇಬಲ್‌ನಲ್ಲಿ ಅಗ್ರ ಸ್ಥಾನವನ್ನು ಅಲಂಕರಿಸಿದೆ. ಇದರೊಂದಿಗೆ ಮೊದಲನೇ ಸೆಮಿಫೈನಲ್‌ನಲ್ಲಿ ಭಾರತ ತಂಡಕ್ಕೆ ಆಸ್ಟ್ರೇಲಿಯಾ ಎದುರಾಳಿ ತಂಡವಾಗಿದೆ. 2023ರ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯ ಫೈನಲ್‌ ಬಳಿಕ ಇದೇ ಮೊದಲ ಬಾರಿ ಉಭಯ ತಂಡಗಳು 50 ಓವರ್‌ಗಳ ಪಂದ್ಯಕ್ಕೆ ಕಾದಾಟ ನಡೆಸಲಿವೆ. ಈ ಪಂದ್ಯದಲ್ಲಿ ಭಾರತ ತಂಡ ಸೋತು ರನ್ನರ್‌ ಅಪ್‌ ಆಗಿತ್ತು. ಇದೀಗ ಮೊದಲನೇ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ಎದುರು ಸೇಡು ತೀರಿಸಿಕೊಳ್ಳಲು ಟೀಮ್‌ ಇಂಡಿಯಾ ಎದುರು ನೋಡುತ್ತಿದೆ.

ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್‌ ಪಂದ್ಯಕ್ಕೆ ಭಾರತ ತಂಡದ ಬ್ಯಾಟಿಂಗ್‌ ವಿಭಾಗದಲ್ಲಿ ಯಾವುದೇ ಬದಲಾವಣೆ ಮಾಡುವ ಸಾಧ್ಯತೆ ಇಲ್ಲ. ನಾಯಕ ರೋಹಿತ್‌ ಶರ್ಮಾ ಹಾಗೂ ಶುಭಮನ್‌ ಗಿಲ್‌ ಇನಿಂಗ್ಸ್‌ ಆರಂಭಿಸಲಿದ್ದಾರೆ. ಈ ಇಬ್ಬರೂ ಫಾರ್ಮ್‌ನಲ್ಲಿದ್ದಾರೆ. ಮೂರನೇ ಕ್ರಮಾಂಕದಲ್ಲಿ ವಿರಾಟ್‌ ಕೊಹ್ಲಿ ಆಡಲಿದ್ದಾರೆ. ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸಿದ್ದ ಕೊಹ್ಲಿ, ಸಮಿಫೈನಲ್‌ ಪಂದ್ಯದಲ್ಲಿಯೂ ಅದೇ ಲಯವನ್ನು ಮುಂದುವರಿಸಲು ಎದುರು ನೋಡುತ್ತಿದ್ದಾರೆ. ಅಂದ ಹಾಗೆ ನ್ಯೂಜಿಲೆಂಡ್‌ ವಿರುದ್ದ ಕಳೆದ ಪಂದ್ಯದಲ್ಲಿಯೂ ಕೊಹ್ಲಿ ಉತ್ತಮವಾಗಿ ಕಂಡಿದ್ದರು. ಆದರೆ, ಗ್ಲೆನ್‌ ಫಿಲಿಪ್ಸ್‌ ಸ್ಟನಿಂಗ್‌ ಕ್ಯಾಚ್‌ಗೆ ಕೊಹ್ಲಿ ಔಟ್‌ ಆಗಿದ್ದರು.

IND vs NZ: 5 ವಿಕೆಟ್‌ ಸಾಧನೆ ಮಾಡಿ ವಿಶೇಷ ದಾಖಲೆ ಬರೆದ ವರುಣ್‌ ಚಕ್ರವರ್ತಿ!

ಕಿವೀಸ್‌ ಎದುರು ನಿರ್ಣಾಯಕ 79 ರನ್‌ಗಳನ್ನು ಸಿಡಿಸಿದ್ದ ಶ್ರೇಯಸ್‌ ಅಯ್ಯರ್‌ ಅವರು ಭರ್ಜರಿ ಫಾರ್ಮ್‌ನಲ್ಲಿದ್ದು, ಅವರು ಆಸ್ಟ್ರೇಲಿಯಾ ವಿರುದ್ಧದ ಪಂದ್ಯಕ್ಕೆ ಕೀ ಬ್ಯಾಟ್ಸ್‌ಮನ್‌ ಆಗಿದ್ದಾರೆ. ಐದನೇ ಕ್ರಮಾಂಕದಲ್ಲಿ ಅಕ್ಷರ್‌ ಪಟೇಲ್‌ ಎಡಗೈ ಬ್ಯಾಟ್ಸ್‌ಮನ್‌ ಆಗಿ ಕಾಣಿಸಿಕೊಳ್ಳಲಿದ್ದಾರೆ. ನಂತರದ ಕ್ರಮಾಂಕಗಳಲ್ಲಿ ಕ್ರಮವಾಗಿ ಕೆಎಲ್‌ ರಾಹುಲ್‌ ಮತ್ತು ಹಾರ್ದಿಕ್‌ ಪಾಂಡ್ಯ ಆಡಲಿದ್ದಾರೆ. ಸ್ಪಿನ್‌ ಆಲ್‌ರೌಂಡರ್‌ ಆಗಿ ರವೀಂದ್ರ ಜಡೇಜಾ ಎಂಟನೇ ಕ್ರಮಾಂಕದಲ್ಲಿ ಬ್ಯಾಟ್‌ ಬೀಸಲಿದ್ದಾರೆ.

ಕಿವೀಸ್‌ ಎದುರಿನ ಪಂದ್ಯದಲ್ಲಿ ಹರ್ಷಿತ್‌ ರಾಣಾ ಸ್ಥಾನದಲ್ಲಿ ಆಡಿದ್ದ ವರುಣ್‌ ಚಕ್ರವರ್ತಿ ಮ್ಯಾಚ್‌ ವಿನ್ನಿಂಗ್‌ ಪ್ರದರ್ಶನವನ್ನು ತೋರಿದ್ದರು. ಈ ಹಿನ್ನೆಲೆಯಲ್ಲಿ ಸೆಮಿಫೈನಲ್‌ ಪಂದ್ಯದಲ್ಲಿಯೂ ಅವರನ್ನು ಮುಂದುವರಿಸುವ ಸಾಧ್ಯತೆ ದಟ್ಟವಾಗಿದೆ. ಇನ್ನು ಕಳೆದ ಪಂದ್ಯದಲ್ಲಿ ಮೊಹಮ್ಮದ್‌ ಶಮಿ ಕೇವಲ ನಾಲ್ಕು ಓವರ್‌ಗಳನ್ನು ಮಾತ್ರ ಬೌಲ್‌ ಮಾಡಿದ್ದರು. ಅಲ್ಲದೆ ಅವರು ಬೌಲಿಂಗ್‌ನಲ್ಲಿ ಉತ್ತಮ ಲಯದಲ್ಲಿ ಕಂಡಿರಲಿಲ್ಲ. ಆದರೂ ಅನುಭವದ ಆಧಾರದ ಮೇಲೆ ಶಮಿಗೆ ಅವಕಾಶ ನೀಡಬಹುದು.

IND vs NZ: ರವೀಂದ್ರ ಜಡೇಜಾರ ಸ್ಟನಿಂಗ್‌ ಕ್ಯಾಚ್‌ ಪಡೆದ ಕೇನ್‌ ವಿಲಿಯಮ್ಸನ್‌! ವಿಡಿಯೊ

ಭಾರತ ತಂಡದಲ್ಲಿ ನಾಲ್ವರು ಸ್ಪಿನ್ನರ್‌ಗಳು

ಭಾರತ ತಂಡ ಕಳೆದ ಪಂದ್ಯದಂತೆ ಈ ಕಾದಾಟದಲ್ಲಿಯೂ ನಾಲ್ವರು ಸ್ಪಿನ್ನರ್‌ಗಳೊಂದಿಗೆ ಕಣಕ್ಕೆ ಇಳಿಯಲಿದೆ. ಸ್ಪಿನ್‌ ಆಲ್‌ರೌಂಡರ್‌ಗಳಾಗಿ ರವೀಂದ್ರ ಜಡೇಜಾ ಹಾಗೂ ಅಕ್ಷರ್‌ ಪಟೇಲ್‌ ಕಾಣಿಸಿಕೊಂಡರೆ, ಪೂರ್ಣ ಪ್ರಮಾಣದ ಸ್ಪಿನ್ನರ್‌ಗಳಾಗಿ ಕುಲ್ದೀಪ್‌ ಯಾದವ್‌ ಮತ್ತು ವರುಣ್‌ ಚಕ್ರವರ್ತಿ ಆಡಲಿದ್ದಾರೆ.

ಆಸ್ಟ್ರೇಲಿಯಾ ವಿರುದ್ದದ ಸೆಮಿಫೈನಲ್‌ ಪಂದ್ಯಕ್ಕೆ ಭಾರತ ತಂಡದ ಸಂಭಾವ್ಯ ಪ್ಲೇಯಿಂಗ್‌ XI

ರೋಹಿತ್‌ ಶರ್ಮಾ (ನಾಯಕ), ಶುಭಮನ್‌ ಗಿಲ್‌, ವಿರಾಟ್‌ ಕೊಹ್ಲಿ, ಶ್ರೇಯಸ್‌ ಅಯ್ಯರ್‌, ಅಕ್ಷರ್‌ ಪಟೇಲ್‌, ಕೆಎಲ್‌ ರಾಹುಲ್‌ (ವಿ.ಕೀ) ಹಾರ್ದಿಕ್‌ ಪಾಂಡ್ಯ ರವೀಂದ್ರ ಜಡೇಜಾ, ಹರ್ಷಿತ್‌ ರಾಣಾ, ಕುಲ್ದೀಪ್‌ ಯಾದವ್‌, ವರುಣ್‌ ಚಕ್ರವರ್ತಿ

IND vs NZ: ಅರ್ಧಶತಕ ಬಾರಿಸಿ ಅಪಾಯದಲ್ಲಿದ್ದ ಭಾರತ ತಂಡಕ್ಕೆ ಆಸರೆಯಾದ ಶ್ರೇಯಸ್‌ ಅಯ್ಯರ್‌!

ಪಂದ್ಯದ ವಿವರ

ಭಾರತ vs ಆಸ್ಟ್ರೇಲಿಯಾ

ಐಸಿಸಿ ಚಾಂಪಿಯನ್ಸ್‌ ಟ್ರೋಫಿ 2025

ದಿನಾಂಕ: ಮಾರ್ಚ್‌ 4, 2024

ಸಮಯ: ಮಧ್ಯಾಹ್ನ 02:30ಕ್ಕೆ

ಸ್ಥಳ: ದುಬೈ ಇಂಟರ್‌ನ್ಯಾಷನಲ್‌ ಕ್ರಿಕೆಟ್‌ ಕ್ರೀಡಾಂಗಣ, ದುಬೈ

ನೇರ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್‌

ಲೈವ್‌ ಸ್ಟೀಮಿಂಗ್‌: ಡಿಸ್ನಿ ಹಾಟ್‌ಸ್ಟಾರ್‌