ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಭಾರತ ತಂಡದಲ್ಲಿ ವಿರಾಟ್‌ ಕೊಹ್ಲಿ ಸ್ಥಾನವನ್ನು ತುಂಬಲು ಯಾರಿಂದಲೂ ಸಾಧ್ಯವಿಲ್ಲ: ಮದನ್‌ ಲಾಲ್!

2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ವೇಳೆ ವಿರಾಟ್‌ ಕೊಹ್ಲಿ ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು. ಇದರಿಂದ ಅಭಿಮಾನಿಗಳಿಗೆ ಭಾರಿ ನಿರಾಶೆಯಾಗಿದೆ. ಅಂದ ಹಾಗೆ ಮಾಜಿ ಕ್ರಿಕೆಟಿಗ ಮದನ್‌ ಲಾಲ್‌, ಆಧುನಿಕ ದಿಗ್ಗಜ ವಿರಾಟ್‌ ಕೊಹ್ಲಿಯ ಬಗ್ಗೆ ದೊಡ್ಡ ಭವಿಷ್ಯವನ್ನು ನುಡಿದಿದ್ದಾರೆ.

ವಿರಾಟ್‌ ಕೊಹ್ಲಿ ಟೆಸ್ಟ್‌ ಕ್ರಿಕೆಟ್‌ಗೆ ಮರಳಬೇಕೆಂದ ಮದನ್‌ ಲಾಲ್‌!

ವಿರಾಟ್‌ ಕೊಹ್ಲಿಯ ಟೆಸ್ಟ್‌ ಭವಿಷ್ಯದ ಬಗ್ಗೆ ಮದನ್‌ ಲಾಲ್‌ ಹೇಳಿಕೆ.

Profile Ramesh Kote Jul 16, 2025 6:31 PM

ನವದೆಹಲಿ: ಆಧುನಿಕ ಕ್ರಿಕೆಟ್‌ ದಿಗ್ಗಜ ವಿರಾಟ್‌ ಕೊಹ್ಲಿ(Virat Kohli) ಅಂತಾರಾಷ್ಟ್ರೀಯ ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಹೇಳಿರುವ ಬಗ್ಗೆ ಭಾರತ ತಂಡದ ಮಾಜಿ ಆಲ್‌ರೌಂಡರ್‌ ಮದನ್‌ ಲಾಲ್‌ (Madan Lal) ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಆದರೆ, ಭಾರತ ತಂಡದಲ್ಲಿ (India) ವಿರಾಟ್‌ ಕೊಹ್ಲಿಯ ಸ್ಥಾನವನ್ನು ತುಂಬಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದ ಮಾಜಿ ಆಟಗಾರ, ಅವರು ಟೆಸ್ಟ್‌ ಕ್ರಿಕೆಟ್‌ಗೆ ಮರಳಬೇಕೆಂದು ಆಗ್ರಹಿಸಿದ್ದಾರೆ. ಏಕೆಂದರೆ ಕೊಹ್ಲಿಗೆ ಟೆಸ್ಟ್‌ ಕ್ರಿಕೆಟ್‌ ವೃತ್ತಿ ಜೀವನ ಇನ್ನೂ ಮೂರರಿಂದ ನಾಲ್ಕು ವರ್ಷಗಳು ಇದ್ದವು. ಆದರೆ, ವಿರಾಟ್‌ ಕೊಹ್ಲಿ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ವೇಳೆ ವಿದಾಯ ಹೇಳುವ ಮೂಲಕ ಎಲ್ಲರಿಗೂ ಅಚ್ಚರಿ ಮೂಡಿಸಿದ್ದರು.

ಕ್ರಿಕೆಟ್‌ ಪ್ರೆಡಿಕ್ಟ್‌ ಶೋನಲ್ಲಿ ಮಾತನಾಡಿದ ಮದನ್‌ ಲಾಲ್‌, "ವಿರಾಟ್‌ ಕೊಹ್ಲಿಯ ಉತ್ಸಾಹವನ್ನು ಭಾರತ ತಂಡದಲ್ಲಿ ತುಂಬಲು ಯಾರಿಂದಲೂ ಸಾಧ್ಯವಿಲ್ಲ. ಅವರು ನಿವೃತ್ತಿಯ ಬಳಿಕ ಟೆಸ್ಟ್‌ ಕ್ರಿಕೆಟ್‌ಗೆ ಮರಳಬೇಕೆಂದು ನಾನು ಬಯಸುತ್ತಿದ್ದೇನೆ. ಅವರು ಟೆಸ್ಟ್‌ ತಂಡಕ್ಕೆ ಮರಳುವುದರಲ್ಲಿ ತಪ್ಪಿಲ್ಲ. ಈ ಸರಣಿಯಲ್ಲಿ ಅಲ್ಲ, ಮುಂದಿನ ಟೆಸ್ಟ್‌ ಸರಣಿಯಲ್ಲಾದರೂ ಅವರು ಟೆಸ್ಟ್‌ ತಂಡಕ್ಕೆ ಮರಳಬೇಕೆಂದು," ಹೇಳಿದ್ದಾರೆ.

IND vs ENG: ʻತುಂಬಾ ನಿರಾಶೆಯಾಯಿತುʼ-ಭಾರತ ತಂಡವನ್ನು ಟೀಕಿಸಿದ ಸೌರವ್‌ ಗಂಗೂಲಿ!

ತಮ್ಮ ಪೀಳಿಗೆಯ ಅತ್ಯುತ್ತಮ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟ ಕೊಹ್ಲಿ ಅತ್ಯುತ್ತಮ ಟೆಸ್ಟ್ ವೃತ್ತಿಜೀವನವನ್ನು ಹೊಂದಿದ್ದಾರೆ. ಕೊಹ್ಲಿಯ ಪುನರಾಗಮನವು ಹಿನ್ನಡೆಯ ಬದಲು ಪ್ರಮುಖ ಉತ್ತೇಜನಕಾರಿಯಾಗಿದೆ ಎಂದು ಮದನ್ ಲಾಲ್ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. "ಅವರ ಶಕ್ತಿ, ಅನುಭವ ಹಾಗೂ ಪ್ರಭಾವ ಮೌಲ್ಯಯುತವಾಗಿ ಉಳಿದಿದೆ. ಈ ಗುಣಗಳು ಕಿರಿಯ ಆಟಗಾರರಿಗೆ ಸ್ಫೂರ್ತಿ ನೀಡುತ್ತವೆ ಮತ್ತು ಒತ್ತಡದಲ್ಲಿ ತಂಡವು ಸ್ಥಿರವಾಗಿರಲು ಸಹಾಯ ಮಾಡುತ್ತದೆ," ಎಂದು ತಿಳಿಸಿದ್ದಾರೆ.

ಟೆಸ್ಟ್‌ ಕ್ರಿಕೆಟ್‌ಗೆ ಮರಳುವ ಬಗ್ಗೆ ವಿರಾಟ್‌ ಕೊಹ್ಲಿ ಎಲ್ಲಿಯೂ ಸಾರ್ವಜನಿಕವಾಗಿ ಬಹಿರಂಗಪಡಿಸಿಲ್ಲ. ಮದನ್ ಲಾಲ್ ಅವರ ಕರೆ ಅಭಿಮಾನಿಗಳಲ್ಲಿ ಭರವಸೆ ಮೂಡಿಸಿದೆ. ಕೊಹ್ಲಿ ನಿವೃತ್ತಿ ಅವರ ಟೆಸ್ಟ್ ವೃತ್ತಿಜೀವನದ ಅಂತ್ಯವಲ್ಲ ಎಂಬ ಭಾವನೆಯನ್ನು ಅನೇಕರು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರತಿಧ್ವನಿಸಿದ್ದಾರೆ.

IND vs ENG: ಕರುಣ್‌ ನಾಯರ್‌ ಔಟ್‌, ನಾಲ್ಕನೇ ಟೆಸ್ಟ್‌ಗೆ ಭಾರತದ ಪ್ಲೇಯಿಂಗ್‌ XIನಲ್ಲಿ 2 ಬದಲಾವಣೆ ಸಾಧ್ಯತೆ!

"ವಿರಾಟ್‌ ಕೊಹ್ಲಿ ನಿವೃತ್ತಿ ಹೊಂದಲು ಆಯ್ಕೆ ಮಾಡಿಕೊಂಡಿದ್ದು ಅವನತಿಯಿಂದಾಗಿ ಅಲ್ಲ. ಅವರ ಹಂಬಲ ಮತ್ತು ಫಿಟ್ನೆಸ್ ಇನ್ನೂ ಬಲವಾಗಿದೆ. ಅತ್ಯುತ್ತಮ ಆಟಗಾರರ ಪಟ್ಟಿಯಲ್ಲಿರುವಾಗ ಆಟಗಾರನೊಬ್ಬ ಹಿಂದೆ ಸರಿಯುವುದನ್ನು ನೋಡುವುದು ಅಪರೂಪ. ಟೆಸ್ಟ್ ಕ್ರಿಕೆಟ್‌ನಲ್ಲಿ ಅವರು ಇನ್ನೂ ನೀಡಲು ಬಹಳಷ್ಟಿದೆ," ಎಂದು ಮದನ್‌ ಲಾಲ್‌ ತಿಳಿಸಿದ್ದಾರೆ.

ವಿರಾಟ್‌ ಕೊಹ್ಲಿ ಟೆಸ್ಟ್‌ ಅಂಕಿಅಂಶ

ವಿರಾಟ್‌ ಕೊಹ್ಲಿ ತಮ್ಮ ಟೆಸ್ಟ್‌ ವೃತ್ತಿ ಜೀವನದಲ್ಲಿ ಆಡಿದ 123 ಪಂದ್ಯಗಳಿಂದ 46.9ರ ಸರಾಸರಿಯಲ್ಲಿ 9230 ರನ್‌ಗಳನ್ನು ಗಳಿಸಿದ್ದಾರೆ. ಇದರಲ್ಲಿ ಅವರು 30 ಶತಕಗಳು ಹಾಗೂ 31 ಅರ್ಧಶತಕಗಳನ್ನು ಬಾರಿಸಿದ್ದಾರೆ. ಭಾರತೀಯ ಟೆಸ್ಟ್‌ ಕ್ರಿಕೆಟ್‌ ಇತಿಹಾಸದಲ್ಲಿಯೇ ವಿರಾಟ್‌ ಕೊಹ್ಲಿ ಅತ್ಯಂತ ಯಶಸ್ವಿ ನಾಯಕ ಎಂಬ ದಾಖಲೆ ವಿರಾಟ್‌ ಕೊಹ್ಲಿ ಹೆಸರಿನಲ್ಲಿದೆ.